ಸೈಫ್ ಅಲಿ ಖಾನ್‌ ಗೆ ಚಾಕು ಇರಿತ ಪ್ರಕರಣ : ಛತ್ತೀಸ್‌ಗಢದಲ್ಲಿ ಶಂಕಿತನ ಬಂಧನ ; ವಿಚಾರಣೆ ನಡೆಸಲಿರುವ ಮುಂಬೈ ಪೊಲೀಸರು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮುಂಬೈನ ಮನೆಯೊಳಗೆ ಇರಿತಕ್ಕೆ ಒಳಗಾದ ಘಟನೆಗೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯು ಘಟನೆಯಲ್ಲಿ ಭಾಗಿಯಾಗಿರುದ್ದಾನೆಯೇ ಅಥವಾ ಈತ ಬೇರೆ ವ್ಯಕ್ತಿಯೇ ಎಂಬ ಬಗ್ಗೆ ಮುಂಬೈ ಪೊಲೀಸರು ವಿಚಾರಣೆ ನಡೆಸಿ ಖಚಿತಪಡಿಸಲಿದ್ದಾರೆ. 54 ವರ್ಷದ ಸೈಫ್ ಅಲಿ ಖಾನ್ ಅವರ ಕುತ್ತಿಗೆ ಮತ್ತು … Continued

ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ … Continued

ಬೇರೆಯವರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ ಕರೆ ; ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe) ರೀತಿಯಲ್ಲಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಐದು ಜನರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ (Hoax Homb threat) ಹಾಕಿರುವುದಾಗಿ ಆರೋಪಿ ಹೇಳಿದ್ದಾನೆ. ಕಳೆದ ವರ್ಷ ಬೆಂಗಳೂರಿನ … Continued

ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ (Cows) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬವರು ದೂರು ನೀಡಿದ ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಕ್ ನಸ್ರು (30) ಎಂದು ಗುರುತಿಸಲಾಗಿದ್ದು, … Continued

5 ವರ್ಷಗಳಿಂದ 60 ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ: ಅಪ್ರಾಪ್ತೆ ಅಥ್ಲೀಟ್ ಆರೋಪ ; 15 ಜನರ ಬಂಧನ

ಪತನಂತಿಟ್ಟ: 18 ವರ್ಷದ ಕ್ರೀಡಾಪಟುವಿನ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಪತನಂತಿಟ್ಟ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ ನಂತರ ಕೇರಳದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕೇರಳ ಪೊಲೀಸರು ಶುಕ್ರವಾರ ಆಕೆಯ ತರಬೇತುದಾರರು ಮತ್ತು ಸಹ ಕ್ರೀಡಾಪಟುಗಳ ವಿರುದ್ಧ ನಾಲ್ಕು … Continued

ಸಚಿನ್ ಆತ್ಮಹತ್ಯೆ ಪ್ರಕರಣ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ

ಬೀದರ : ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶುಕ್ರವಾರ ಐವರನ್ನು ಬಂಧಿಸಿದೆ ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎಂದು ಹೇಳಲಾಗುತ್ತಿರುವ ರಾಜು ಕಪನೂರು ಸೇರಿದಂತೆ ಒಟ್ಟು ಎಂಟು ಜನರ ಹೆಸರನ್ನು ಉಲ್ಲೇಖಿಸಿದ್ದರು. ಈ ಸಂಬಂಧ ಅಧಿಕಾರಿಗಳು … Continued

3 ಮದುವೆಗಳು, ₹ 1.25 ಕೋಟಿ ಲೂಟಿ : ಶ್ರೀಮಂತರನ್ನೇ ಟಾರ್ಗೆಟ್‌ ಮಾಡಿ ಹಣ ಪೀಕುತ್ತಿದ್ದ ‘ಲೂಟಿ ವಧು’…!

ನವದೆಹಲಿ : ಲೂಟಿಕೋರ ವಧು ಎಂದು ಪೊಲೀಸರು ಬಣ್ಣಿಸಿರುವ ಮಹಿಳೆಯೊಬ್ಬಳು ದಶಕಕ್ಕೂ ಹೆಚ್ಚು ಕಾಲ ಅನೇಕರನ್ನು ಮದುವೆಯಾಗಿ ಸೆಟಲ್ ಮೆಂಟ್ ಹೆಸರಿನಲ್ಲಿ ಒಟ್ಟು ₹ 1.25 ಕೋಟಿ ವಸೂಲಿ ಮಾಡಿದ್ದು, ಈಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ. ಉತ್ತರಾಖಂಡ ನಿವಾಸಿಯಾಗಿರುವ ಸೀಮಾ ಉರುಫ್‌ ನಿಕ್ಕಿ ಎಂಬಾಕೆ 2013ರಲ್ಲಿ ಮೊದಲು ಆಗ್ರಾದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದಳು. ಕೆಲ ಸಮಯದ ಬಳಿಕ … Continued

₹ 13 ಕೋಟಿ ಮೌಲ್ಯದ ಎರಡು ಐಷಾರಾಮಿ ವಾಚ್‌ ಕಳ್ಳಸಾಗಣೆ ಮಾಡುತ್ತಿದ್ದ ದಂಪತಿ ಸೆರೆ

ಅಹಮದಾಬಾದ್: ದುಬೈನಿಂದ ಶುಕ್ರವಾರ ಸುಮಾರು ₹ 13 ಕೋಟಿ ಮೌಲ್ಯದ ಎರಡು ದುಬಾರಿ ವಾಚ್‌ಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ರಾಜಸ್ಥಾನದ ದಂಪತಿಯನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ದುಬೈನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಆಗಮಿಸಿದ ಪುರುಷ ಮತ್ತು ಮಹಿಳೆಯಿಂದ … Continued

ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೋಪಿಯ ಬಂಧನ

ನವದೆಹಲಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳವು ಶುಕ್ರವಾರ ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಬಂಧಿಸಿದೆ. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ಕೊಡಾಜೆ … Continued