ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ನವದೆಹಲಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮೂವರು ಶೂಟರ್‌ಗಳ ಪೈಕಿ ಒಬ್ಬನಾದ ಶಿವಕುಮಾರ ಗೌತಮ ಎಂಬಾತನನ್ನು ಭಾನುವಾರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ಈತ ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಶಿವಕುಮಾರಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಇತರ … Continued

ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued

ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

ಮಂಗಳೂರು | ಆರ್ಡರ್ ನೆಪದಲ್ಲಿ ಅಮೆಜಾನ್ ಸಂಸ್ಥೆಗೆ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್ ಮಾಡಿ ಅಮೆಝಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. . ವಂಚನೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನ ಮೂಲದ ರಾಜಕುಮಾರ ಮೀನಾ (23) ಮತ್ತು ಸುಭಾಷ ಗುರ್ಜರ್ … Continued

ನಟ ಸಲ್ಮಾನ್‌ ಖಾನಗೆ ಜೀವ ಬೆದರಿಕೆ ಪ್ರಕರಣ ; ಆರೋಪಿ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಮುಂಬೈನ ಬಾಂದ್ರಾದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳಷ್ಟು ಹಣ ನೀಡದಿದ್ದರೆ ಸಲ್ಮಾನ್‌ ಖಾನ್‌ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಸಂದೇಶ ಬಂದಿತ್ತು. ಬೆದರಿಕೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಆ … Continued

ರಾಜಕೀಯ ನಾಯಕನಿಗೆ ಹನಿಟ್ರ್ಯಾಪ್; 20 ಲಕ್ಷ ರೂ. ಪಡೆಯುತ್ತಿದ್ದಾಗ ಮಹಿಳೆ ಅರೆಸ್ಟ್…!

ಬೆಂಗಳೂರು: ರಾಜಕೀಯ ನಾಯಕರೊಬ್ಬರಿಗೆ ಹನಿಟ್ರ್ಯಾಪ್ ಆರೋಪ ಪ್ರಕರಣದಲ್ಲಿ (Honey Trap Case) ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಮಂಜುಳಾ  ಎಂಬವಳನ್ನು ಬಂಧಿಸಿದ್ದು, ಈಕೆ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ರಾಜಕೀಯ ನಾಯಕನೊಂದೊಗೆ ಆರೋಪಿ ಮೊದಲಿಗೆ ಸೆಕ್ಸ್‌ ಚಾಟ್‌ ಮಾಡಿ, ನಂತರ ವಾಟ್ಸ್‌ ಆ್ಯಪ್‌ ವಿಡಿಯೊ ಕಾಲ್‌ನಲ್ಲಿ … Continued

‘ಗಮನ ಸೆಳೆಯಲು ಹೀಗೆ ಮಾಡಿದ್ದೆ’ : ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ ಹಾಕಿದ ನಿರುದ್ಯೋಗಿಯನ್ನು ಬಂಧಿಸಿದ ಪೊಲೀಸರು

ನವದೆಹಲಿ : ದೆಹಲಿಯ 25 ವರ್ಷದ ನಿರುದ್ಯೋಗಿ ವ್ಯಕ್ತಿಯೊಬ್ಬರು ನಕಲಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದಕ್ಕಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ವಾರ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆಗಳನ್ನು ಹಾಕಿದ ನಂತರ ಇದು ಎರಡನೇ ಬಂಧನವಾಗಿದೆ. ಗಮನ ಸೆಳೆಯಲು ಬೆದರಿಕೆ ಹಾಕಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 14ರಿಂದ 275 … Continued

ವಂಚನೆ ಪ್ರಕರಣ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರನ ಬಂಧನ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಶಾಸಕ ದೇವಾನಂದ ಸಿಂಗ್ ಚವ್ಹಾಣ ಅವರ ಪತ್ನಿ ಸುನಿತಾ ಚವ್ಹಾಣ ಅವರ ದೂರಿನ … Continued

ಕುಡಿದು ವಾಹನ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆರೋಪ : ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಬಂಧನ

ತಿರುವನಂತಪುರಂ: ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಅವರನ್ನು ಕೇರಳ ಪೊಲೀಸರು ಸೋಮವಾರ (ಅಕ್ಟೋಬರ್ 14) ಬಂಧಿಸಿದ್ದಾರೆ. ಭಾನುವಾರ ರಾತ್ರಿ 11:45 ರ ಸುಮಾರಿಗೆ ನಟ ಕುಡಿದ ಅಮಲಿನಲ್ಲಿ ತನ್ನ ಕಾರನ್ನು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ … Continued

₹ 1,800 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ : ಇಬ್ಬರ ಬಂಧನ

ನವದೆಹಲಿ/ಭೋಪಾಲ್: ಗುಜರಾತ್‌ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮಧ್ಯಪ್ರದೇಶದ ಭೋಪಾಲ್ ಬಳಿಯ ಬಾಗ್ರೋಡಾ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಡ್ರಗ್ಸ್ ತಯಾರಿಕಾ ದಂಧೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಸುಮಾರು ₹ 1,800 ಕೋಟಿ ಮೌಲ್ಯದ ಮೆಫೆಡ್ರೋನ್ (MD) ಔಷಧಗಳನ್ನು … Continued