ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ ರೇವಣ್ಣ ಅವರನ್ನು ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ಶನಿವಾರ ರಾತ್ರಿ 7:30ರ ಸುಮಾರಿಗೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ನಂತರ ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ … Continued

ಶಿರಸಿ : ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ; ಓರ್ವನನ್ನು ವಶಕ್ಕೆ ಪಡೆದ ಎನ್‌ಐಎ

ಶಿರಸಿ: ಆನ್‌ಲೈನ್‌ನಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಿರಸಿ ತಾಲೂಕಿನ ದಾಸನಕೊಪ್ಪ ಮೂಲದ ವ್ಯಕ್ತಿಯನ್ನು ಎನ್‌ಐಎ ಅಧಿಕಾರಿಗಳ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದೆ ಎಂದು ವರದಿಯಾಗಿದೆ. ಬಕ್ರೀದ್‌ ಹಬ್ಬಕ್ಕಾಗಿ ದುಬೈನಿಂದ ಆಗಮಿಸಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು … Continued

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿ ಬಂಧನ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್‌ ಧನರಾಜ ಎಂಬಾತನೇ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು … Continued

ದೇಗುಲದ ಆವರಣದ ಒಳಗೆ ಗೋವಿನ ರುಂಡ ಎಸೆದ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ರತ್ಲಾಮ್: ಮಧ್ಯಪ್ರದೇಶದ ಜಯೋರಾ ಪಟ್ಟಣದ ದೇವಸ್ಥಾನದ ಆವರಣದಲ್ಲಿ ಕತ್ತರಿಸಿದ ಹಸುವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶುಕ್ರವಾರ ಮುಂಜಾನೆ ದೇವಸ್ಥಾನದ ಆವರಣದಲ್ಲಿ ಗೋವಿನ ರುಂಡದ ಭಾಗಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಗಳು … Continued

ನಟ ದರ್ಶನ್‌ ಬಂಧನದ ಬೆನ್ನಲ್ಲೇ ಪತಿಯನ್ನು ಅನ್ ಫಾಲೋ ಮಾಡಿ ಪ್ರೊಫೈಲ್ ಫೋಟೋ ತೆಗೆದು ಹಾಕಿದ ಪತ್ನಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬವರ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ. ಅಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ರೇಣುಕಾಸ್ವಾಮಿ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 13 ಜನರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ … Continued

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ: ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದ ಗೃಹ ಸಚಿವರು

ಬೆಂಗಳೂರು : ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಯಾವ … Continued

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ಬಂಧನದ ಬೆನ್ನಲ್ಲೇ ಸ್ನೇಹಿತೆ ನಟಿ ಪವಿತ್ರಾ ಗೌಡ ಪೊಲೀಸ್‌ ವಶಕ್ಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಿದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಗೆಳತಿ ನಟಿ ಪವಿತ್ರ ಗೌಡ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಪೊಲೀಸರು … Continued

ಬೆಂಗಳೂರಲ್ಲಿ ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಅರೆಸ್ಟ್

ಬೆಂಗಳೂರು: ರೇವ್ ಪಾರ್ಟಿಯಲ್ಲಿ (Rave Party) ಮಾದಕ ವಸ್ತು ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಈ ವೇಳೆ ಅವರನ್ನು ಸಿಸಿಬಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ … Continued

ಬೆಂಗಳೂರು : ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಜ್ವಲ್ ರೇವಣ್ಣ ಅವರು ವೀಡಿಯೊ ಬಿಡುಗಡೆ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ … Continued