ಅಕ್ರಮ ಹಣ ವರ್ಗಾವಣೆ ಪ್ರಕರಣ : ಜಾರ್ಖಂಡ ಸಚಿವನನ್ನು ಬಂಧಿಸಿದ ಇ.ಡಿ.

ನವದೆಹಲಿ: ಜಾರ್ಖಂಡ್‌ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ ₹ 35 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅಲಂಗೀರ್‌ ಆಲಂ ಅವರನ್ನು ಬಂಧಿಸಿದೆ. ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ … Continued

ಪ್ರಯಾಣಿಕರ ಚಿನ್ನಾಭರಣ ಕಳ್ಳತನ ಮಾಡಲು 110 ದಿನಗಳಲ್ಲಿ 200 ವಿಮಾನಗಳಲ್ಲಿ ಪ್ರಯಾಣಿಸಿದ್ದ ಈ ಮಹಾಕಳ್ಳ…!

ನವದೆಹಲಿ: ವಿವಿಧ ವಿಮಾನಗಳಲ್ಲಿ ಸಹ ಪ್ರಯಾಣಿಕರ ಬ್ಯಾಗ್‌ಗಳಿಂದ ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈತ ವಿಮಾನದಲ್ಲಿ ಕದ್ದ ಹಣದಿಂದ ಕೇಂದ್ರ ದೆಹಲಿಯಲ್ಲಿ ಹೋಟೆಲ್ ಅನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದ ಎಂಬ ವರದಿಯೂ ಇದೆ…! ಆರೋಪಿ ರಾಜೇಶ ಕಪೂರ್ ಎಂಬಾತ … Continued

ಸೋಮವಾರಪೇಟೆ : ವಿದ್ಯಾರ್ಥಿನಿ ತಲೆ ಕಡಿದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರಬಿದ್ದ ಮೇ 9ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ರುಂಡದ ಸಮೇತ ಪರಾರಿಯಾಗಿದ್ದ. ಆತನ ಸ್ವಗ್ರಾಮ ಹಮ್ಮಿಯಾಲದ ಸಮೀಪದ ಕಾಡಿನಲ್ಲಿ ಅಡಗಿಕೊಂಡಿದ್ದ ಆರೋಪಿ ಪ್ರಕಾಶ (32) ನನ್ನು … Continued

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 1 ರಂದು ಹಾಸನದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಇತ್ತೀಚೆಗೆ ಅವರು ಪ್ರಜ್ವಲ್ ರೇವಣ್ಣ ಅವರ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರು ಎಂಬವನನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು, ಶುಕ್ರವಾರ ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ 2022ರ … Continued

ನೂಪುರ್ ಶರ್ಮಾ ಸೇರಿದಂತೆ ಹಲವು ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

ಸೂರತ್: ಪಾಕಿಸ್ತಾನ ಮತ್ತು ನೇಪಾಳದ ಹ್ಯಾಂಡ್ಲರ್‌ಗಳೊಂದಿಗೆ ಶಾಮೀಲಾಗಿ ಬಿಜೆಪಿ ನಾಯಕರನ್ನು ಮತ್ತು ಬಲಪಂಥೀಯ ಸಂಘಟನೆಯ ಪ್ರಮುಖರೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ 27 ವರ್ಷದ ಮೌಲ್ವಿಯನ್ನು ಗುಜರಾತ್‌ನ ಸೂರತ್‌ನಲ್ಲಿ ಮೇ 3 ರಂದು ಬಂಧಿಸಲಾಗಿದೆ. ಆರೋಪಿ ಮೌಲ್ವಿ ಸೊಹೆಲ್ ಅಬುಬಕರ್ ತಿಮೋಲ್ ಎಂಬಾತ ಹಿಂದಿ ಟಿವಿ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ, ಬಿಜೆಪಿಯ ತೆಲಂಗಾಣ … Continued

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಇವೆಲ್ಲ ರಾಜಕೀಯ ಪಿತೂರಿಯಿಂದ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revannna) ಆರೋಪಿಸಿದ್ದಾರೆ. ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ (SIT) ಅಧಿಕಾರಿಗಳು ಹಾಜರುಪಡಿಸಲು ಕರೆದೊಯ್ಯುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ವೇಳೆ ಮಾಧ್ಯಮಗಳಿಗೆ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ಬೆಂಗಳೂರು : ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ … Continued

ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ಗೆ ಸಂಬಂಧಿಸಿದಂತೆ ಹಿಟ್ ಸ್ಕ್ವಾಡ್‌ನ ಮೂವರು ಭಾರತೀಯ ಸದಸ್ಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಬಂಧಿತರನ್ನು ಕರಣ್‌ಪ್ರೀತ್ ಸಿಂಗ್ (28), ಕಮಲಪ್ರೀತ್ ಸಿಂಗ್ (22) ಮತ್ತು ಕರಣ್ ಬ್ರಾರ್ (22) ಎಂದು ಹೆಸರಿಸಿದ್ದಾರೆ. … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued