‘ದುಷ್ಟಶಕ್ತಿ ಓಡಿಸಲು’ ಇಸ್ಲಾಂಗೆ ಮತಾಂತರವಾಗುವಂತೆ ಮಹಿಳೆಗೆ ಒತ್ತಡ : ಮೌಲ್ವಿಯ ಬಂಧನ

ಗಾಜಿಯಾಬಾದ್: ಇಸ್ಲಾಂಗೆ ಮತಾಂತರವಾದರೆ ಮಾತ್ರ ‘ದುಷ್ಟ ಶಕ್ತಿಯಿಂದ ಬಿಡುಗಡೆ ಸಾಧ್ಯ’ ಎಂದು ಮಹಿಳೆಯನ್ನು ಹೆದರಿಸಿ ನಂಬಿಸಿದ್ದ ಆರೋಪದ ಮೇರೆಗೆ ಉತ್ತರ ಪ್ರದೇಶದಲ್ಲಿ ಮೌಲ್ವಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮಗ ಅಕ್ಷಯ ಶ್ರೀವಾಸ್ತವ (35) ಎಂಬವರು ನಂದಗ್ರಾಮ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ ಮೌಲ್ವಿ ಸರ್ಫರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ … Continued

2ನೇ ಪೋಕ್ಸೋ ಪ್ರಕರಣ: ಮುರುಘಾ ಶರಣರನ್ನು ಮತ್ತೆ ಬಂಧಿಸಿದ ಪೊಲೀಸರು

ದಾವಣಗೆರೆ: ಜಾಮೀನಿನಲ್ಲಿ ಬಿಡುಗಡೆಯಾದ ವಾರದ ಒಳಗೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ (ನವೆಂಬರ್‌ 20)ಪೊಲೀಸರು ಮತ್ತೆ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎರಡನೇ ಪೋಕ್ಸೋ ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಚಿತ್ರದುರ್ಗ ನ್ಯಾಯಾಲಯ ಜಾರಿಗೊಳಿಸಿದ … Continued

ಖಾನಾಪುರ: ಡೀಪ್ ಫೇಕ್ ಪ್ರಕರಣ ಬೆಳಕಿಗೆ ; ಆರೋಪಿ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲೂ ಡೀಪ್ ಫೇಕ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ (Deepfake)​ ಮೂಲಕ ಯಾರದೋ ನಗ್ನ ಚಿತ್ರಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ ಮಾಡಿದ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಫೋಟೋ ಈ ರೀತಿ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ​ (22) … Continued

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಕುಟುಂಬದ ಆಪ್ತನನ್ನು ಬಂಧಿಸಿದ ಇ.ಡಿ.

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರ ಸಹಚರನನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ಶನಿವಾರ (ನವೆಂಬರ್ 11) ತಿಳಿಸಿವೆ. ‘ಸಹವರ್ತಿ’ ಅಮಿತ್ ಕತ್ಯಾಲ್ ಅವರನ್ನು ಶುಕ್ರವಾರ ಕೇಂದ್ರೀಯ … Continued

ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ. ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, … Continued

ಬೆಳಗಾವಿಗೆ ನುಗ್ಗಲು ಯತ್ನಿಸಿದ 50ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ 50 ಕ್ಕೂ ಹೆಚ್ಚು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸದಸ್ಯರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ. ಬುಧವಾರ ಬೆಳಗ್ಗೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ್ದ ‘ಕಪ್ಪು ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಬರುತ್ತಿದ್ದಾಗ ಅವರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ. ಬೆಳಗಾವಿ ಮತ್ತು 840 … Continued

ಕೇರಳದ ತ್ರಿವಳಿ ಸ್ಫೋಟ ಘಟನೆ : ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಶರಣಾದ ವ್ಯಕ್ತಿಯ ಬಂಧನ

ತಿರುವನಂತಪುರಂ : ಕೇರಳದ ಎರ್ನಾಕುಲಂ ಜಿಲ್ಲೆಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟದ ಹೊಣೆ ಹೊತ್ತಿದ್ದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಎಂಬಾತನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕಗಳ ಕಾಯ್ದೆ ಮತ್ತು ಕೊಲೆ ಆರೋಪದಡಿ ಸೋಮವಾರ ಆತನನ್ನು ಬಂಧಿಸಲಾಗಿದೆ. ಕನ್ವೆನ್ಷನ್ ಸೆಂಟರ್‌ನಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಮಾರ್ಟಿನ್ ಹೇಳಿಕೊಂಡ ಒಂದು ದಿನದ ನಂತರ ಈ ಬೆಳವಣಿಗೆ … Continued

ಹುಲಿ ಉಗುರು ಪ್ರಕರಣ: ವಿಚಾರಣೆಗೆ ಹಾಜರಾಗದ ಅರಣ್ಯಾಧಿಕಾರಿ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಬಿಗ್​ಬಾಸ್​ ಸ್ಪರ್ಧಿ ವರ್ತೂರು ಸಂತೋಷ​ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಪೆಂಟೆಂಟ್‌ ಪ್ರಕರಣಗಳು ಈಗ ಹೊರಬರುತ್ತಿವೆ. ಕಳಸದ ಡಿ.ಆರ್.ಎಫ್.ಒ. ದರ್ಶನ್ ಎಂಬವರನ್ನು ಎನ್​.ಆರ್​. ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ. ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್​ ಅವರಿಗೆ ವಿಚಾರಣೆಗೆ … Continued

ಪ್ಯಾಲೆಸ್ತೀನ್ ವಿರೋಧಿ ಟ್ವೀಟ್ : ಬಹ್ರೇನ್‌ನಲ್ಲಿ ಕರ್ನಾಟಕ ಮೂಲದ ವೈದ್ಯನ ಬಂಧನ, ಕೆಲಸದಿಂದ ವಜಾ

ಪ್ಯಾಲೆಸ್ತೀನ್ ಅನ್ನು ಟೀಕಿಸುವ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿಬಹ್ರೇನ್‌ನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ 50 ವರ್ಷ ವಯಸ್ಸಿನ ವೈದ್ಯರನ್ನು ಅಕ್ಟೋಬರ್ 19 ರಂದು ಗುರುವಾರ ಬಂಧಿಸಲಾಗಿದೆ. ರಾಯಲ್ ಬಹ್ರೇನ್ ಆಸ್ಪತ್ರೆಯಲ್ಲಿ ಆಂತರಿಕ ವೈದ್ಯಕೀಯದಲ್ಲಿ ಪರಿಣತಿ ಪಡೆದ ಡಾ. ಸುನಿಲ ಜೆ ರಾವ್ ಅವರನ್ನು ಬಂಧಿಸುವ ಮೊದಲು ತಕ್ಷಣವೇ ವೈದ್ಯರನ್ನು ಆಸ್ಪತ್ರೆಯಿಂದ ವಜಾಗೊಳಿಸಲಾಯಿತು. ಡಾ. … Continued

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ರಾಜ್ಯದ ಕೆಲವು ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ಶಿವಾಜಿರಾವ್ ಜಾಧವ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈತ ಹಿಂದೂ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ … Continued