ಅಯೋಧ್ಯೆ ಭಗವಾನ್‌ ರಾಮಲಲ್ಲಾ ವಿಗ್ರಹದ ದಿವ್ಯ ಕಣ್ಣುಗಳನ್ನು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ ಯೋಗಿರಾಜ

ಬೆಂಗಳೂರು : ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಇತ್ತೀಚೆಗೆ ಸ್ಥಾಪಿಸಲಾದ ರಾಮಲಲ್ಲಾ ವಿಗ್ರಹದ ಮೈಸೂರು ಮೂಲದ ಶಿಲ್ಪಿ ಅರುಣ ಯೋಗಿರಾಜ ಅವರು ದೇವರ “ದಿವ್ಯ ಕಣ್ಣುಗಳನ್ನು” ಕೆತ್ತಲು ಬಳಸಿದ ಉಪಕರಣಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ನಾನು ರಾಮ್ ಲಲ್ಲಾನ ದಿವ್ಯ ಕಣ್ಣುಗಳನ್ನು (ನೆತ್ರೋನ್ಮಿಲನ) ಕೆತ್ತಿದ ಚಿನ್ನದ ಉಳಿಯೊಂದಿಗೆ ಈ ಬೆಳ್ಳಿಯ ಸುತ್ತಿಗೆಯನ್ನು ಹಂಚಿಕೊಳ್ಳಲು ಯೋಚಿಸಿದೆ” ಎಂದು X … Continued

“ನಾನು ಈ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ”: ರಾಮಲಲ್ಲಾ ವಿಗ್ರಹ ಕೆತ್ತಿದ ಮೈಸೂರಿನ ಶಿಲ್ಪಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಾಮಲಲ್ಲಾ ವಿಗ್ರಹವನ್ನು ಕೆತ್ತಿದ ಕರ್ನಾಟಕದ ಮೈಸೂರಿನ ಶಿಲ್ಪಿ, ತನ್ನನ್ನು ತಾನು ಭೂಮಿಯ ಮೇಲಿನ “ಅದೃಷ್ಟಶಾಲಿ” ಎಂದು ಪರಿಗಣಿಸುತ್ತೇನೆ ಎಂದು ಹೇಳಿದ್ದಾರೆ. ಇಂದು, ಸೋಮವಾರ (ಜನವರಿ 22ರಂದು) ತಾನು ಕೆತ್ತಿದ ರಾಮಲಲ್ಲಾ ಮೂರ್ತಿಯ ‘ಪ್ರಾಣ ಪ್ರತಿಷ್ಠಾ’ ನಡೆದ ದಿನ ಅರುಣ ಯೋಗಿರಾಜ ಅವರು ಹಿಂದೆಂದೂ ಕಾಣದ ರೀತಿಯಲ್ಲಿ ಸಹಜವಾಗಿಯೇ ಪುಳಕಿತರಾಗಿದ್ದರು. … Continued

ಮೈಸೂರಿನ ಅರುಣ ಯೋಗಿರಾಜ ಕೆತ್ತಿದ ರಾಮಲಲ್ಲಾ ಮೂರ್ತಿಯೇ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಲು ಮೈಸೂರು ಮೂಲದ ಅರುಣ ಯೋಗಿರಾಜ ಅವರು ಕೆತ್ತಿರುವ ರಾಮಲಲ್ಲಾನ ವಿಗ್ರಹವನ್ನು ಆಯ್ಕೆ ಮಾಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೋಮವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ಪೂಜಿಸಲ್ಪಡುತ್ತಿರುವ ರಾಮಲಲ್ಲಾನ ಪ್ರಸ್ತುತ ವಿಗ್ರಹವನ್ನು ಸಹ ಹೊಸ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುವುದು. … Continued

ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ದೇವಾಲಯದ ಟ್ರಸ್ಟ್

ಅಯೋಧ್ಯೆ : ಜನವರಿ 22ರಂದು ಅಯೋಧ್ಯೆ ರಾಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ರಾಮಮಂದಿರ ಟ್ರಸ್ಟ್‌ ಪದಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ, ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಸಂಸದ ಪ್ರತಾಪ ಸಿಂಹ ಸೇರಿದಂತೆ ಅನೇಕರು ಮೈಸೂರು ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿದ … Continued

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ ಕೆತ್ತನೆಯ ವಿಗ್ರಹ ಆಯ್ಕೆ

ಬೆಂಗಳೂರು : ಕರ್ನಾಟಕದ ಖ್ಯಾತ ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿರುವ ರಾಮಲಲ್ಲಾ ವಿಗ್ರಹವು ಅಯೋಧ್ಯೆಯಲ್ಲಿನ ಭವ್ಯವಾದ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ ಎಂದು ಬಿಜೆಪಿ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ. ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ. ‘ಎಕ್ಸ್’ ನಲ್ಲಿ … Continued

ಮೈಸೂರಿನ ಶಿಲ್ಪಿ ಅರುಣ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ….

ಮೈಸೂರು : 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ಮೂರ್ತಿ ಕೆತ್ತನೆ ಕಾರ್ಯ ಪೂರ್ಣಗೊಂಡಿದೆ. ಮೈಸೂರಿನ ಅರುಣ ಯೋಗಿರಾಜ ಅವರು ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಕಾಯಕ ದಕ್ಕಿದ್ದು, ಜನವರಿ 22ರಂದು ರಾಮಲಲ್ಲಾ ಮೂರ್ತಿ ಲೋಕಾರ್ಪಣೆಯಾಗಲಿದೆ. ಬೆಂಗಳೂರಿನ … Continued