50 ದಿನಗಳ ನಂತರ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್ ; ಸರ್ವಾಧಿಕಾರದ ವಿರುದ್ಧ ಹೋರಾಡಬೇಕಿದೆ ಎಂದ ದೆಹಲಿ ಸಿಎಂ

ನವದೆಹಲಿ :ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿನಲ್ಲಿದ್ದ ಅವರು 50 ದಿನಗಳ ನಂತರ ಮತ್ತು ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ ಗಂಟೆಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. ಆಮ್ ಆದ್ಮಿ ಪಕ್ಷದ ನಾಯಕನ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಬಕಾರಿ ನೀತಿ ಪ್ರಕರಣದ ಭಾಗವಾಗಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತ ನೇತೃತ್ವದ ವಿಭಾಗೀಯ ಪೀಠವು ಇಂದು, ಶುಕ್ರವಾರ (ಮೇ … Continued

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ … Continued

ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಅರವಿಂದ ಕೇಜ್ರಿವಾಲ್ ಜೈಲಿನಲ್ಲಿ ಉಳಿಯಬೇಕು : ಬಂಧನ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಏಪ್ರಿಲ್ 3 ರಂದು ಸುದೀರ್ಘ ವಾದಗಳನ್ನು ಆಲಿಸಿದ ನಂತರ ಕಾಯ್ದಿರಿಸಿದ್ದ ತೀರ್ಪನ್ನು ಇಂದು, ಮಂಗಳವಾರ ಪ್ರಕಟಿಸಿದ್ದಾರೆ. … Continued

ಅರವಿಂದ ಕೇಜ್ರಿವಾಲ್ ಅಸ್ವಸ್ಥ, ಜೈಲಿನಲ್ಲಿ 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದ ಎಎಪಿ ; ನಿರಾಕರಿಸಿದ ಅಧಿಕಾರಿಗಳು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ ಅವರು 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ಸಚಿವೆ ಅತಿಶಿ ಇಂದು ಹೇಳಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಚಿವೆ … Continued

ಬೆಳಿಗ್ಗೆ 6:30ಕ್ಕೆ ಏಳುವುದು…ಊಟ-ತಿಂಡಿ, ಪುಸ್ತಕ, ಟಿವಿ, ಮೀಟಿಂಗ್ : ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ದಿನಚರಿ ಹೇಗಿರುತ್ತದೆ ಗೊತ್ತೆ..?

ನವದೆಹಲಿ : ಈಗ ರದ್ದಾಗಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಏಪ್ರಿಲ್ 15 ರವರೆಗೆ ಜೈಲಿನಲ್ಲಿರುತ್ತಾರೆ. ಏಪ್ರಿಲ್ 1 ಸೋಮವಾರ ಕೇಜ್ರಿವಾಲ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಕೇಜ್ರಿವಾಲ್ ಅವರನ್ನು 15 ದಿನಗಳ ಕಾಲ ತಿಹಾರ್‌ ಜೈಲಿನಲ್ಲಿ ಇರಿಸುವಂತೆ ಹೇಳಿದೆ. ಹೀಗಾಗಿ ಕೇಜ್ರಿವಾಲ್ ಅವರಿಗೆ ನೀಡಲಿರುವ ಆಹಾರ, … Continued

ದೆಹಲಿ ಸಿಎಂ ಕೇಜ್ರಿವಾಲಗೆ ಏಪ್ರಿಲ್ 15ರ ವರೆಗೆ ನ್ಯಾಯಾಂಗ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರ ವರೆಗೆ ದೆಹಲಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯ ಸಂಕೀರ್ಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ (ಇ ಡಿ) ಕ್ಸಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡುವ ಕುರಿತು ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ … Continued

ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ ; ವರದಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ರೂಪಿಸುವಾಗ ಬಳಸುತ್ತಿದ್ದರು ಎನ್ನಲಾದ ತಮ್ಮ ಮೊಬೈಲ್ ಫೋನ್ ಅನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನೆನಪಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೇ ಟಿವಿ ವರದಿ ಮಾಡಿವೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ … Continued