ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ ಮಧ್ಯದ ತುರುಸಿನ ಸ್ಪರ್ಧೆಯಲ್ಲಿ ಗೆಲುವಿನತ್ತ ಯಾರು…? ಇಂಡಿಯಾ ಟಿವಿ-ಸಿಎನ್‌ಎಕ್ಸ್ 2ನೇ ಸಮೀಕ್ಷೆಯಲ್ಲಿ ಬಹಿರಂಗ

ಈ ತಿಂಗಳು ನಡೆಯುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತವನ್ನು ಪಡೆಯಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎರಡನೇ  ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಸದನದಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಪ್ರಕ್ಷೇಪಗಳು ತೋರಿಸಿವೆ, ಕಳೆದ ಚುನಾವಣೆಯಲ್ಲಿ ಬಿಜೆಪಿ 73 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: ಯಾವ್ಯಾವ ಸಮುದಾಯಗಳ ಒಲವು ಯಾವ ಪಕ್ಷಗಳತ್ತ ? ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಹೇಳುವುದೇನು..?

ಮುಂದಿನ ತಿಂಗಳು ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ವಿವಿಧ ಸಮುದಾಯಗಳಿಗೆ ಯಾವ್ಯಾವ ಪಕ್ಷಗಳು ಪ್ರಮುಖ ಆಯ್ಕೆಯಾಗಿವೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ತಿಳಿಸಿದೆ. ರಜಪೂತ, ಬನಿಯಾ, ಜಾಟ್ ಮತ್ತು ಮೀನಾ ಸೇರಿದಂತೆ ಹಲವು ಸಮುದಾಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಎಂದು ಸಮೀಕ್ಷೆಗಳು ತೋರಿಸಿವೆ. ರಾಜ್ಯದಲ್ಲಿ ಗುಜ್ಜರ್, ಮಾಲಿ ಮತ್ತು ಮುಸ್ಲಿಮರ ಮತಗಳನ್ನು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರಸ್ಸಿನಲ್ಲಿ ಯಾರಿಗೆ ಸಿಗಲಿದೆ ಬಹುಮತ..?

ಮುಂದಿನ ತಿಂಗಳು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ಈ ಬಾರಿ ಅಧಿಕಾರಕ್ಕೆ ಬರಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾಸಭಾ ಸ್ಥಾನಗಳಲ್ಲಿ ಬಿಜೆಪಿ ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದ 73 ಸ್ಥಾನಗಳಿಗೆ ಹೋಲಿಸಿದರೆ ಈ ಬಾರಿ 125 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued

ಜಾತಿ ಸಮೀಕ್ಷೆಗೆ ಆದೇಶಿದ ರಾಜಸ್ಥಾನ ಸರ್ಕಾರ

ಜೈಪುರ : ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಈಗ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಆದೇಶಿಸಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಈ ವೇಳೆ ರಾಜಸ್ಥಾನದ ಅಶೋಕ ಗೆಹ್ಲೋಟ್‌ ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಎಲ್ಲಾ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸ್ವಲ್ಪ ಮುಂದೆ

ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಪ್ರಸ್ತುತ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ನೇತೃತ್ವದ ಸರ್ಕಾರವು ಹಿನ್ನಡೆ ಎದುರಿಸಬಹುದು, ಇದೇ ವೇಳೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸರಳ … Continued

ನನ್ನ ಕೈಯಲ್ಲಿ ಏನೂ ಇಲ್ಲ, ಶಾಸಕರು ಸಿಟ್ಟುಗೊಂಡಿದ್ದಾರೆ : ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ಅಶೋಕ ಗೆಹ್ಲೋಟ್

ನವದೆಹಲಿ: ರಾಜಸ್ಥಾನದ ಕಾಂಗ್ರೆಸ್‌ನ 90ಕ್ಕೂ ಹೆಚ್ಚು ಶಾಸಕರು ಭಾನುವಾರ ರಾತ್ರಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದು, ಅದು ಈಗ ತನ್ನ ಕೈಯಲ್ಲಿಲ್ಲ ಎಂದು ಅಶೋಕ್ ಗೆಹ್ಲೋಟ್ ಪಕ್ಷದ ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡಿ ಅಶೋಕ್ ಗೆಹ್ಲೋಟ್ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ರಾಜೀನಾಮೆ ನೀಡುವುದಾಗಿ … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಶಿ ತರೂರ್ -ಅಶೋಕ್ ಗೆಹ್ಲೋಟ್ ನಡುವೆ ಸ್ಪರ್ಧೆ ಸಾಧ್ಯತೆ

ನವದೆಹಲಿ: ಸೆಪ್ಟೆಂಬರ್ 22 ರಂದು ಅಧಿಸೂಚನೆ ಹೊರಡಿಸುವುದರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಪ್ರಕ್ರಿಯೆಯು ಆರಂಭವಾಗಲಿದ್ದು, ಪಕ್ಷದ ಉನ್ನತ ಹುದ್ದೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ನಡುವೆ ಪ್ರಮುಖ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತರೂರ್ ಸ್ಪರ್ಧಿಸುವುದರ ವಿರುದ್ಧ ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ … Continued

ತನ್ನ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ಜಾರಿಗೆ ತಂದ ರಾಜಸ್ತಾನ, ದೇಶದ ಮೊದಲ ರಾಜ್ಯ

ರಾಜಸ್ಥಾನವು ತನ್ನ ಚಿರಂಜೀವಿ ಆರೋಗ್ಯ ವಿಮಾ ಯೋಜನೆಗೆ ನೋಂದಣಿಯನ್ನು ಪ್ರಾರಂಭಿಸಿ ರಾಜ್ಯದ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ.ಗಳ ನಗದು ರಹಿತ ‘ಮೆಡ್‌ಕ್ಲೇಮ್’ ಯೋಜನೆ ಪ್ರಾರಂಭಿಸಿದೆ. 2021-22ರ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ ಈ ಯೋಜನೆಯಡಿ ಜನರ ನೋಂದಣಿ ಪ್ರಾರಂಭವಾಗುವುದರೊಂದಿಗೆ, ರಾಜಸ್ಥಾನವು ತನ್ನ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸಿದ ದೇಶದ ಮೊದಲ … Continued