ಕಾಶಿ ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ ಕನ್ನಡ ಶಿಲಾಶಾಸನದ ಪೋಟೋ ಬಹಿರಂಗ

ಲಕ್ನೋ: ಉತ್ತರ ಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಈ ಹಿಂದೆ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡ ಬೆನ್ನಲ್ಲೇ ಅಲ್ಲಿ ಕನ್ನಡದ ಶಿಲಾಶಾಸನ ಕೂಡ ಪತ್ತೆಯಾಗಿದೆ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಸಮೀಕ್ಷೆ ವೇಳೆ ಕಂಡುಬಂದ ಕನ್ನಡ ಶಾಸನದ ಚಿತ್ರ ಶನಿವಾರ (ಜ 27 ) ಬಿಡುಗಡೆಯಾಗಿದೆ. ಕಾಶಿಯ ಜ್ಞಾನವಾಪಿ … Continued

ವಾರಾಣಸಿ ಜ್ಞಾನವಾಪಿ ಮಸೀದಿಗೂ ನಿರ್ಮಾಣಕ್ಕೂ ಮುನ್ನ ಅಲ್ಲಿ ಬೃಹತ್ ಹಿಂದೂ ದೇಗುಲವಿತ್ತು: ಎಎಸ್ಐ ಸರ್ವೆಯಲ್ಲಿ ಉಲ್ಲೇಖ-ವಕೀಲ ವಿಷ್ಣು ಶಂಕರ ಜೈನ್

ವಾರಾಣಸಿ: ಜ್ಞಾನವಾಪಿ ಮಸೀದಿಯ ಸಮೀಕ್ಷೆಯು ವಿವಿಧ ಭಾಷೆಗಳಲ್ಲಿ 34 ಶಾಸನಗಳು ಇದ್ದ ದೇವಾಲಯ ಇತ್ತೆಂದು ಬಹಿರಂಗಪಡಿಸಿದೆ, ಅದನ್ನು ಮಸೀದಿಯಾಗಿ ಮರುರೂಪಿಸಲಾಗಿದೆ ಎಂದು ಮಹಿಳಾ ಅರ್ಜಿದಾರರ ವಕೀಲರಾದ ವಿಷ್ಣು ಜೈನ್ ಅವರು ಸಮೀಕ್ಷೆಯ ವರದಿಯ ಹಾರ್ಡ್ ಕಾಪಿ ಸ್ವೀಕರಿಸಿದ ನಂತರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾರಾಣಸಿ ಜಿಲ್ಲಾ ನ್ಯಾಯಾಧೀಶರು ಪ್ರಕರಣದ ಸೂಕ್ಷ್ಮತೆಯ ದೃಷ್ಟಿಯಿಂದ ಸಾಮಾಜಿಕ … Continued

ನ್ಯಾಯಾಲಯಕ್ಕೆ ವಾರಾಣಸಿ ಜ್ಞಾನವಾಪಿ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ

ನವದೆಹಲಿ : ಭಾರತೀಯ ಪುರಾತತ್ವ ಇಲಾಖೆಯು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ‘ವೈಜ್ಞಾನಿಕ ಸಮೀಕ್ಷೆ’ ವರದಿಯನ್ನು ಸಲ್ಲಿಸಿದೆ. ಸೋಮವಾರ ಮಧ್ಯಾಹ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಯಿತು. ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ ಅಥವಾ ಅರ್ಜಿದಾರರಾದ ಹಿಂದೂ ಪಕ್ಷದೊಂದಿಗೆ ಹಂಚಿಕೊಳ್ಳಲಾಗುತ್ತದೆಯೇ ಅಥವಾ ಮುಸ್ಲಿಂ ಪಕ್ಷದೊಂದಿಗೆ ಹಂಚಿಕೊಳ್ಳಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ. … Continued

ಜ್ಞಾನವಾಪಿ ಮಸೀದಿ ಆವರಣದ ಎಎಸ್‌ಐ ಸರ್ವೆಗೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯದ ಆದೇಶ ಹೊರಬಿದ್ದಿದೆ. ಎಎಸ್‌ಐ (ASI) ಸಂಪೂರ್ಣ ಪ್ರಕ್ರಿಯೆಯಲ್ಲಿ ಮಸೀದಿ ಆವರಣದಲ್ಲಿ ಯಾವುದೇ ಉತ್ಖನನವನ್ನು … Continued