ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued

ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ; ಅಕ್ಟೋಬರ್ 4 ರಂದು ಫಲಿತಾಂಶ

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುತ್ತದೆ. ಹರಿಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು … Continued

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ … Continued

ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿ ಜಯಭೇರಿ, ನವೀನ ಪಟ್ನಾಯಕ್ 24 ವರ್ಷಗಳ ಆಡಳಿತ ಅಂತ್ಯ

ಮಂಗಳವಾರ ನಡೆದ 147 ಸದಸ್ಯ ಬಲದ ಒಡಿಶಾ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಒಡಿಶಾ ವಿಧಾನಸಭೆಯಲ್ಲಿ ೭೮ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಪಡೆದಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. 2000 ದಿಂದ ಒಡಿಶಾದಲ್ಲಿ ಅಧಿಕಾರದಲ್ಲಿರುವ ಬಿಜೆಡಿಯು 50 ಸ್ಥಾನಗಳನ್ನು ಗೆದ್ದಿದ್ದು, ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 14 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. … Continued

ಅರುಣಾಚಲ ಪ್ರದೇಶ : ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್, ಎನ್‌ಪಿಪಿಯ ನಾಲ್ವರು ಶಾಸಕರು

ಅಗರ್ತಲಾ : ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ವಿಪಕ್ಷವಾದ ಕಾಂಗ್ರೆಸ್‌ನ ಇಬ್ಬರು ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಇಬ್ಬರು ಶಾಸಕರು ಮುಖ್ಯಮಂತ್ರಿ ಪೆಮಾ ಖಂಡು ಅವರ ಸಮ್ಮುಖದಲ್ಲಿ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ. ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಶಾಸಕರಾದ ನಿನೊಂಗ್ ಎರಿಂಗ್, ವಾಂಗ್ಲಿಂಗ್ ಲೋವಾಂಗ್‌ಡಾಂಗ್ ಮತ್ತು … Continued

ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು : 2 ಕಡೆ ಸ್ಪರ್ಧೆ ವಿಚಾರಕ್ಕೆ ಸೋಮಣ್ಣ ಬೇಸರ

ತುಮಕೂರು: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಒಂದು ಕಾಲನ್ನು ಪಕ್ಷದಿಂದ ಹೊರಗಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು, ಗೃಹ ಸಚಿವ ಅಮಿತ್ ಶಾ ಬಗ್ಗೆ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಂದರ್ಭದಲ್ಲಿ ವಿ ಸೋಮಣ್ಣ ಅವರು ಸಿದ್ದಲಿಂಗ ಸ್ವಾಮೀಜಿ ಬಳಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ … Continued

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ : ಸಿಎಂ ಶಿವರಾಜ್ ಸಿಂಗ್ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್

ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಪಕ್ಷವು ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಆನಂದ್ ಸಾಗರ್ ಅವರ 2008 ರ ದೂರದರ್ಶನ ಧಾರಾವಾಹಿ ರಾಮಾಯಣದಲ್ಲಿ ಹನುಮಾನ್ ಪಾತ್ರದ ಮೂಲಕ ಮಸ್ತಲ್ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು … Continued

ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ … Continued