ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಆಸ್ಪತ್ರೆ ಆವರಣದಲ್ಲಿ ಐವರು ಸಾವು
ಓಕ್ಲೊಹೋಮಾ: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ, ಬಂದೂಕುಧಾರಿಯೊಬ್ಬ ಆಸ್ಪತ್ರೆ ಆವರಣದಲ್ಲಿಯೇ ಗುಂಡಿನ ಸುರಿಮಳೆಗೈದಿದ್ದು, ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ. ದಾಳಿಕೋರನೂ ಸಾವಿಗೀಡಾಗಿದ್ದಾನೆ. ಓಕ್ಲೊಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕು ಹಿಡಿದುನಿಂತಿರುವುದಾಗಿ ಕರೆ ಬಂದಿತು. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿಯೇ ಬಂದೂಕುದಾರಿ ಜನರ ಮೇಲೆ ಗುಂಡಿನ ದಾಳಿ ಮಾಡಿದ್ದಾನೆ. … Continued