ತಿರುಪತಿ ಬಳಿ ಭೀಕರ ರಸ್ತೆ ಅಪಘಾತ : ಬೆಳಗಾವಿ ಜಿಲ್ಲೆಯ ಐವರು ಸಾವು, 11 ಮಂದಿಗೆ ಗಾಯ

ಹೈದರಾಬಾದ್‌/ ಬೆಳಗಾವಿ : ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಮುಂದಿನ ಭಾಗ ನಜ್ಜುಗುಜ್ಜಾಗಿದ್ದರೆ, ಕ್ರೂಸರ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಠಂಪಲ್ಲೆ … Continued

ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಸೋಲಿಸಿ: ಅಮಿತ್ ಶಾ

ಅಥಣಿ : ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ತಾಳಿದರೂ ಸಾವರ್ಕರ್ ಅವರಂತಹ ತ್ಯಾಗ ನಿಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ … Continued

ಅಥಣಿಯಲ್ಲಿ ಸವದಿಗೆ ಮತ್ತೊಂದು ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಾಂಗ್ರೆಸ್‌ ನಾಯಕ…!

ಬೆಳಗಾವಿ : ರಾಜ್ಯ ವಿಧಾನಸಭೆ ಚುನಾವಣೆ ಸನಿಹ ಬರುತ್ತಿದ್ದಂತೆ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಅಥಣಿಯ ಪಂಚಮಸಾಲಿ ಸಮುದಾಯದ ಮತ್ತೋರ್ವ ಪ್ರಮುಖ ನಾಯಕ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ … Continued

ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ನಾಯಕ…!

ಅಥಣಿ : ಅಥಣಿಯಲ್ಲಿ ಈ ಬಾರಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾವಿ ಪಂಚಮಸಾಲಿ ಯುವನಾಯಕ ಧರೆಪ್ಪ ಠಕ್ಕಣ್ಣವರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ … Continued

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಲಕ್ಷ್ಮಣ ಸವದಿ

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ಸಲ್ಲಿಸುವ ಮಾತನ್ನಾಡಿದ್ದಾರೆ. ಅಥಣಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ನಾಯಕರು ಟಿಕೆಟ್‌ ನೀಡುವ ಆಶ್ವಾಸನೆ ನೀಡಿದ್ದರು. ಆದರೆ, ಕೊಟ್ಟ ಮಾತಿನಂತೆ ಅವರು ನಡೆದುಕೊಂಡಿಲ್ಲ. ಬಿಜೆಪಿಯಲ್ಲಿ ತತ್ವ ಸಿದ್ಧಾಂತಗಳು ಉಳಿದಿಲ್ಲ. ನಾಳೆ (ಗುರುವಾರ) ಕ್ಷೇತ್ರದ ಮತದಾರರ ಹಾಗೂ … Continued

ಅಥಣಿ : ಜೆಡಿಎಸ್‌ ಮುಖಂಡನ ಕಾರು ಪಲ್ಟಿ ; 6 ಜನರಿಗೆ ಗಾಯ

ಬೆಳಗಾವಿ : ಅಥಣಿ ಪಟ್ಟಣದ ಹೊರವಲಯದಲ್ಲಿ ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಮಾಜಿ ಶಾಸಕರು ಸೇರಿದಂತೆ 6 ಜನರು ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ … Continued

ಅಥಣಿ : ಜೈನ ಸಮಾಜದಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ

ಅಥಣಿ : ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ಪ್ರವಾಸ ತಾಣವನ್ನಾಗಿ ಮಾಡಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರ್ಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು, ಸೋಮವಾರ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ರಾಷ್ಟ್ರಪತಿ, ಹಾಗೂ ಪ್ರಧಾನಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ … Continued

ಶಾಲಾ ಬಸ್ – ಗೂಡ್ಸ್ ವಾಹನದ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ : ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದಲ್ಲಿ ವಿದ್ಯಾರ್ಥಿನಿಯರಿದ್ದ ಶಾಲಾ ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಥಣಿ ಪಟ್ಟಣದ ಬಣಜವಾಡ ಶಾಲೆಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಬಸ್‌ನಲ್ಲಿದ್ದ 10 … Continued

ಕಾಲುವೆಗೆ ಉರುಳಿದ ಕಾರು: ಇಬ್ಬರ ಸಾವು, ಒಬ್ಬ ಪಾರು

ಅಥಣಿ : ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿ ರಡ್ಡೇರಹಟ್ಟಿ ಗ್ರಾಮದ ಕರಿಮಸೂತಿ ಲಿಫ್ಟ್ ನೀರಾವರಿ ಕಾಲುವೆಗೆ ಮೂವರು ಪ್ರಯಾಣಿಸಿದ್ದ ಕಾರು ಉರುಳಿ ಬಿದ್ದ ಘಟನೆ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನೀರಿನಲ್ಲಿ ಮುಳುಗಿದ ಕಾರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ರಡ್ಡೇರಹಟ್ಟಿ … Continued