ಶಿರಸಿ | ನರ್ಮದಾ ಹೆಗಡೆಗೆ ಚೆನ್ನಭೈರಾದೇವಿ ಪ್ರಶಸ್ತಿ ಪ್ರದಾನ

ಶಿರಸಿ : ಮುಂಬೈನ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕೊಡಮಾಡುವ 2025ನೇ ಸಾಲಿನ ಚೆನ್ನಭೈರಾದೇವಿ ಪ್ರಶಸ್ತಿಯನ್ನು ಶಿರಸಿಯ ಅಜಿತ ಮನೋಚೇತನ ಟ್ರಸ್ಟ್‌ನ ವಿಕಾಸ ವಿಶೇಷ ಶಾಲೆಯ ಮುಖ್ಯಾಧ್ಯಾಪಕಿ ನರ್ಮದಾ ಹೆಗಡೆ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನರ್ಮದಾ ಹೆಗಡೆ ಸಲ್ಲಿಸುತ್ತ ಬಂದಿರುವ ಸೇವೆಯನ್ನು ಗುರುತಿಸಿ ಇಲ್ಲಿನ ಗಣೇಶ ನೇತ್ರಾಲಯದ ನಯನಾ ಸಭಾಂಗಣದಲ್ಲಿ … Continued

‘ಮಲಬಾರ್ ವಿಶ್ವರಂಗ ಪುರಸ್ಕಾರ 2025 ; ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ’ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ ಮಾಡಲಾಗಿದೆ. ಧಾರವಾಡದ ಅರವಿಂದ ಕುಲಕರ್ಣಿ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ ಕಾರಂತ … Continued

ಕಾರವಾರ : ರೈಲ್ವೆ ಟ್ರ್ಯಾಕ್​​ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿತು ಸಂಭಾವ್ಯ ರೈಲು ದುರಂತ…!

ಕಾರವಾರ: ರೈಲ್ವೆ ಟ್ರ್ಯಾಕ್ ಮ್ಯಾನ್ ಮಹಾದೇವ  ನಾಯ್ಕ ಅವರ ಸಮಯ ಪ್ರಜ್ಞೆಯಿಂದ ಸಂಭನೀಯ ರೈಲು ದುರಂತವೊಂದು ತಪ್ಪಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಮಹಾದೇವ ಅವರ ಕಾರ್ಯವನ್ನು ಕೊಂಕಣ ರೈಲ್ವೆ ವಲಯ ಟ್ವೀಟ್ ಮಾಡಿ ಅಭಿನಂದಿಸಿದೆ. ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟುಹೋಗಿತ್ತು. … Continued

ʼಸಂಗಮ ಸಿರಿʼ ರಾಜ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

ಹುಬ್ಬಳ್ಳಿ : ನಾಡಿನ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಈ ವರ್ಷ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ರಾಜ್ಯಮಟ್ಟದ “ಸಂಗಮ ಸಿರಿ” ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಎರಡು ವರ್ಷ ಈ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 25ರಂದು ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಮೂವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ:ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಹಾಗೂ ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭ ಡಿಸೆಂಬರ್‌ 25ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 25ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದ್ದು, … Continued

ಕುಮಟಾ ಡಾ.ಬಾಳಿಗಾ ವಾಣಿಜ್ಯ ಕಾಲೇಜ್ ಮುಖ್ಯ ಗ್ರಂಥಪಾಲಕ‌ ಡಾ. ಶಿವಾನಂದ ಬುಳ್ಳಾಗೆ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ. ಶಿವಾನಂದ ಬುಳ್ಳಾ ಅವರ ಪಿ.ಎಚ್.ಡಿ ಪ್ರಬಂಧ ಹಾಗೂ ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಅಮೂಲ್ಯ ವೈಜ್ಞಾನಿಕ ಕೊಡುಗೆಗಾಗಿ, ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ “ಗ್ರಾಬ್ಸ್ ಬೆಸ್ಟ್ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ” ನೀಡಲಾಗಿದೆ. ಚೆನ್ನೈನ ಆನಂದಭವನ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ … Continued

ಪ್ರಧಾನಿ ಮೋದಿಗೆ ಸೆರಾವೀಕ್‌ ಜಾಗತಿಕ ಇಂಧನ-ಪರಿಸರ ನಾಯಕತ್ವ ಪ್ರಶಸ್ತಿ

ನವದೆಹಲಿ: ಮುಂದಿನ ವಾರ ನಡೆಯುವ ವಾರ್ಷಿಕ ಅಂತಾರಾಷ್ಟ್ರೀಯ ಇಂಧನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆರಾ ವೀಕ್‌ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಲಾಗುವುದು. ಮಾರ್ಚ್ 1 ರಿಂದ 5 ರವರೆಗೆ ನಡೆಯಲಿರುವ ಸೆರಾವೀಕ್ ಕಾನ್ಫರೆನ್ಸ್ -2021 ರಲ್ಲಿ ಪ್ರಧಾನಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಅದರ ಸಂಘಟಕ ಐಎಚ್‌ಎಸ್ ಮಾರ್ಕಿಟ್ … Continued