ಬಾಹ್ಯಾಕಾಶದಿಂದ ಭೂಮಿಗೆ ಬಂದಿಳಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ-ಇತರ ಆಕ್ಸಿಯಮ್ -4 ಗಗನಯಾತ್ರಿಗಳು ; ಆ ಕ್ಷಣದ ವೀಡಿಯೊ ವೀಕ್ಷಿಸಿ

ನವದೆಹಲಿ: ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಗೆ ಹಿಂದುರುಗಿದ್ದಾರೆ. ಶುಕ್ಲಾ ಮತ್ತು ಇತರರನ್ನು ಹೊತ್ತ ಸ್ಪೇಸ್‌ಎಕ್ಸ್ ಸಿಬ್ಬಂದಿ ಕ್ಯಾಪ್ಸುಲ್ ಗ್ರೇಸ್, ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯ ನಂತರ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಇಳಿದಿದೆ. ಭಾರತೀಯ ವಾಯುಪಡೆಯ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, 1984 … Continued

“ಭಾರತ ಸಾರೇ ಜಹಾನ್‌ ಸೇ ಅಚ್ಛಾ… : ಬಾಹ್ಯಾಕಾಶ ಕೇಂದ್ರದಿಂದ ಭೂಮಿಗೆ ಮರಳುವ ಮುನ್ನ ಸಂದೇಶ ಹಂಚಿಕೊಂಡ ಶುಭಾಂಶು ಶುಕ್ಲಾ

ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಹಾಗೂ ಇತರ ಮೂವರು ಗಗನಯಾತ್ರಿಗಳು ಭೂಮಿಗೆ ಮರಳಲು ಜುಲೈ 14ಕ್ಕೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ನಿಲ್ದಾಣದಿಂದ ಭಾವುಕ ಸಂದೇಶವೊಂದನ್ನು ಕಳುಹಿಸಿದ್ದಾರೆ. ಅವರು ಭಾರತವನ್ನು ಸಾರೇ ಜಹಾಂ ಸೇ ಅಚ್ಛಾ ಎಂದು … Continued

ಶುಭಾಂಶು ಶುಕ್ಲಾ ತಂಡ ಭೂಮಿಗೆ ಮರಳಲು ದಿನಾಂಕ ನಿಗದಿ

ನವದೆಹಲಿ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಸೇರಿದ ಆಕ್ಸಿಯಮ್-4 ತಂಡವು ಜುಲೈ 14ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (International Space Station) ಪುನಃ ಭೂಮಿಗೆ ಮರಳಲಿದೆ ಎಂದು ಪ್ರಕಟಿಸಲಾಗಿದೆ. “ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ, ಆಕ್ಸಿಯಮ್ -4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಮಿಷನ್ ಅನ್ನು ಅನ್‌ಡಾಕ್ … Continued

ವೀಡಿಯೊ | 16 ಸೂರ್ಯಾಸ್ತಗಳು, 16 ಸೂರ್ಯೋದಯಗಳು..: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ-ವೀಕ್ಷಿಸಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಸಿಯಮ್ -4 (ಆಕ್ಸ್ -4) ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಜೊತೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ … Continued

ವೀಡಿಯೊ…| ಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ; ಡಾಕ್ ಮಾಡಿದ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ

ನವದೆಹಲಿ: ಆಕ್ಸಿಯಮ್-4 ಮಿಷನ್‌ ಭಾಗವಾಗಿ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿರುವ ಬಾಹ್ಯಾಕಾಶ ನೌಕೆ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಡಾಕ್ ಮಾಡಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇದು 28 ​​ಗಂಟೆಗಳ ಹಾರಾಟವನ್ನು ಪೂರ್ಣಗೊಳಿಸಿದ ನಂತರ ಅದು ಉತ್ತರ ಅಟ್ಲಾಂಟಿಕ್ ಮಹಾಸಾಗರದಿಂದ 424 ಕಿಮೀ … Continued