ಮಾಜಿ ಸಚಿವ ಬಾಬಾ ಸಿದ್ದಿಕಿ ಸಾವಿನ ಬಗ್ಗೆ ತಿಳಿದುಕೊಳ್ಳಲು ಆಸ್ಪತ್ರೆ ಹೊರಗೆ 30 ನಿಮಿಷ ಕಾದಿದ್ದ ಹತ್ಯೆಯ ಪ್ರಮುಖ ಆರೋಪಿ…!

ಮುಂಬೈ: ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ ಗೌತಮ ಎಂಬಾತ ಸಿದ್ದಿಕಿ ಅವರ ಮೇಲೆ ಗುಂಡು ಹಾರಿಸಿದ ನಂತರ ಅವರನ್ನು ಕರೆದೊಯ್ಯಲಾದ ಲೀಲಾವತಿ ಆಸ್ಪತ್ರೆಯ ಹೊರಗೆ ನಿಂತು ಸಿದ್ದಿಕಿ ಸಾವಿಗೀಡಾಗಿದ್ದಾರೆಯೇ ಅಥವಾ ಬದುಕುಳಿದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು … Continued

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ನವದೆಹಲಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮೂವರು ಶೂಟರ್‌ಗಳ ಪೈಕಿ ಒಬ್ಬನಾದ ಶಿವಕುಮಾರ ಗೌತಮ ಎಂಬಾತನನ್ನು ಭಾನುವಾರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ಈತ ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಶಿವಕುಮಾರಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಇತರ … Continued

ನೀವು ಜೀವಂತವಾಗಿ ಇರಬೇಕೆಂದರೆ ₹ 5 ಕೋಟಿ ನೀಡಿ ; ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ…!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ‘ಹಗೆತನವನ್ನು ಕೊನೆಗಾಣಿಸಲು’ ಈಗ ₹ 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ ಹಣವನ್ನು ಪಾವತಿಸದಿದ್ದರೆ, ನಟ ಸಲ್ಮಾನ್ ಖಾನ್‌ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ … Continued

ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್)ನಾಯಕ ಬಾಬಾ ಸಿದ್ದಿಕ್ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. 66 ವರ್ಷದ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಶೂಟರ್‌ಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನವರು: ಮೂಲಗಳು

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತರು ತಾವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಹತ್ಯೆಯ ಹೊಣೆಗಾರಿಕೆಯನ್ನು ಇನ್ನೂ ಒಪ್ಪಿಕೊಳ್ಳದಿರುವಾಗ ಪೊಲೀಸರು ಈ ಬಗ್ಗೆ ಪರಿಶೀಲಿಸಿಲ್ಲ. ಈ ಘಟನೆ ಮಹಾರಾಷ್ಟ್ರ ರಾಜ್ಯ ಚುನಾವಣೆಗೆ ಮುನ್ನ ಭದ್ರತಾ … Continued

ಮುಂಬೈ | ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಗುಂಡಿಕ್ಕಿ ಹತ್ಯೆ ; ಇಬ್ಬರ ಬಂಧನ : ಬಾಬಾ ಸಿದ್ದಿಕ್ ಯಾರು..?

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ಅಪರಿಚಿತರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಅಲ್ಪಸಂಖ್ಯಾತ ನಾಯಕ, ಮಾಜಿ ಸಚಿವ ಬಾಬಾ ಸಿದ್ದಿಕ್

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. ಅವರು ಕಳೆದ 48 ವರ್ಷಗಳಿಂದ ಕಾಂಗ್ರೆಸ್‌ ಸದಸ್ಯರಾಗಿದ್ದರು. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, “ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಮತ್ತು ಇದು 48 ವರ್ಷಗಳ ಮಹತ್ವದ … Continued