ಬಾಬರಿ ಮಸೀದಿ ಧ್ವಂಸದ ಕುರಿತು ಉದ್ಧವ್ ಠಾಕ್ರೆ ಆಪ್ತನ ಹೇಳಿಕೆ ನಂತರ ಎಂವಿಎ ಮೈತ್ರಿ ತೊರೆಯಲು ಸಮಾಜವಾದಿ ಪಕ್ಷದ ನಿರ್ಧಾರ
ಮುಂಬೈ: ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರೊಬ್ಬರ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯಿಂದ ಹೊರಬರಲು ನಿರ್ಧರಿಸಿದೆ. ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಎಕ್ಸ್ನಲ್ಲಿ ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. … Continued