ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ ಸಿಂಗ್‌ ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ಜಾಮೀನು ನೀಡಿದೆ. ವಿಚಾರಣೆಯ ಬಾಕಿ ಇರುವಂತೆ ಸಿಂಗ್ ಅವರನ್ನು ಜಾಮೀನಿನ ಮೇಲೆ … Continued

ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಕೊಡಿಸಿದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ ಭಟ್‌ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕು‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ ಅವರು ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ತಾಲೂಕು ಘಟಕದ ಕಾನೂನು ಮತ್ತು ಮಾನವ … Continued

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued

ಮರ ಕಡಿದ ಪ್ರಕರಣ: ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

ಹಾಸನ: ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿತರಾಗಿದ್ದ ಸಂಸದ ಪ್ರತಾಪ ಸಿಮಹ ಅವರ ವಿಕ್ರಂ ಸಿಂಹ ಅವರಿಗೆ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಲಯ ಭಾನುವಾರ ಜಾಮೀನು ಮಂಜೂರು ಮಾಡಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದ ವಿಕ್ರಂ ಸಿಂಹ ಅವರನ್ನು ಇಲ್ಲಿನ ಗೆಂಡೆಕಟ್ಟೆಯಲ್ಲಿರುವ ಅರಣ್ಯ ಇಲಾಖೆಯ … Continued

ಗೌರಿ ಹತ್ಯೆ ಪ್ರಕರಣ : ಆರೋಪಿಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್‌. ಮೋಹನ ನಾಯಕ ಅಲಿಯಾಸ್‌ ಸಂಪಾಜೆಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆಯ ಎನ್‌. ಮೋಹನ ನಾಯಕ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. “ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು … Continued

ಚಿತ್ರದುರ್ಗ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪರಮಶಿವಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರರು ಎರಡು ಲಕ್ಷ … Continued

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಅಮೃತ ಪೌಲ್‌ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ. 545 ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮಗಳ ಹಗರಣದ ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued

ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನಹಾನಿ ಪ್ರಕರಣದ ಸಂಬಂಧ ರೂಪಾ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ವಿಚಾರಣೆಯನ್ನು 24ನೇ … Continued