ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಮೊದಲನೇ ಆರೋಪಿಯಾಗಿರುವ ಎಚ್‌.ಡಿ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್‌ ಪುರಸ್ಕರಿಸಿದ್ದು, ಐದು … Continued

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ : ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸೋಮವಾರ ಅಪರಾಹ್ನದ ವೇಳೆಗೆ ಪೋಕ್ಸೊ ವಿಶೇಷ ನ್ಯಾಯಾಲಯದ ಉಸ್ತುವಾರಿಯಾಗಿರುವ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮುರುಘಾ ಶರಣರು ಹಾಜರಾದರು. ಈ ವಿಚಾರವನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಆರೋಪಿ ಸ್ವಾಮೀಜಿಯನ್ನು … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ ಸಿಂಗ್‌ ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ಜಾಮೀನು ನೀಡಿದೆ. ವಿಚಾರಣೆಯ ಬಾಕಿ ಇರುವಂತೆ ಸಿಂಗ್ ಅವರನ್ನು ಜಾಮೀನಿನ ಮೇಲೆ … Continued

ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಕೊಡಿಸಿದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ ಭಟ್‌ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕು‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ ಅವರು ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ತಾಲೂಕು ಘಟಕದ ಕಾನೂನು ಮತ್ತು ಮಾನವ … Continued

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued

ಮರ ಕಡಿದ ಪ್ರಕರಣ: ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

ಹಾಸನ: ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿತರಾಗಿದ್ದ ಸಂಸದ ಪ್ರತಾಪ ಸಿಮಹ ಅವರ ವಿಕ್ರಂ ಸಿಂಹ ಅವರಿಗೆ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಲಯ ಭಾನುವಾರ ಜಾಮೀನು ಮಂಜೂರು ಮಾಡಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದ ವಿಕ್ರಂ ಸಿಂಹ ಅವರನ್ನು ಇಲ್ಲಿನ ಗೆಂಡೆಕಟ್ಟೆಯಲ್ಲಿರುವ ಅರಣ್ಯ ಇಲಾಖೆಯ … Continued

ಗೌರಿ ಹತ್ಯೆ ಪ್ರಕರಣ : ಆರೋಪಿಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್‌. ಮೋಹನ ನಾಯಕ ಅಲಿಯಾಸ್‌ ಸಂಪಾಜೆಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆಯ ಎನ್‌. ಮೋಹನ ನಾಯಕ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. “ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು … Continued

ಚಿತ್ರದುರ್ಗ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪರಮಶಿವಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರರು ಎರಡು ಲಕ್ಷ … Continued

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಅಮೃತ ಪೌಲ್‌ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ. 545 ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮಗಳ ಹಗರಣದ ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. … Continued