ಪಹಲ್ಗಾಮ್ ಭಯೋತ್ಪಾದಕ ದಾಳಿ : ಭಾರತದಲ್ಲಿ 16 ಪಾಕಿಸ್ತಾನದ ಯೂಟ್ಯೂಬ್ ಚಾನೆಲ್‌ಗಳ ನಿಷೇಧ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 6.3 ಕೋಟಿ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ (YouTube) ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವೇದಿಕೆಗಳಲ್ಲಿ ಡಾನ್, ಸಮಾ ಟಿವಿ, … Continued

119 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗೂಗಲ್ ಪ್ಲೇ ಸ್ಟೋರ್‌ನಿಂದ 119 ಚೀನೀ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಸೂಚನೆ ನೀಡುವ ಮೂಲಕ ಸರ್ಕಾರವು ಮತ್ತೊಂದು ಡಿಜಿಟಲ್ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಅಪ್ಲಿಕೇಶನ್‌ಗಳು ಚೀನಾ ಮತ್ತು ಹಾಂಗ್ ಕಾಂಗ್‌ನ ಡೆವಲಪರ್‌ಗಳ ಜೊತೆ ಸಂಪರ್ಕ ಹೊಂದಿವೆ, ನಿರ್ಬಂಧಿಸಿದ ಅಪ್ಲಿಕೇಶನ್‌ಗಳಲ್ಲಿ ಹಲವು ವೀಡಿಯೊ ಮತ್ತು ಧ್ವನಿ ಚಾಟ್ ಪ್ಲಾಟ್‌ಫಾರ್ಮ್‌ಗಳು ಸೇರಿವೆ. ಈ ಎಲ್ಲಾ ಅಪ್ಲಿಕೇಶನ್‌ಗಳು ಭಾರತದ ಗೂಗಲ್ … Continued

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳಲು ನಿಷೇಧ ತೆರವು : ತಪ್ಪು ಸರಿಪಡಿಸಲು ಕೇಂದ್ರಕ್ಕೆ 5 ದಶಕ ಬೇಕಾಯ್ತು ಎಂದ ಮಧ್ಯಪ್ರದೇಶ ಹೈಕೋರ್ಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರಕ್ಕೆ ತಾನು ಮಾಡಿದ್ದ ತಪ್ಪನ್ನು ಸರಿಪಡಿಸಿಕೊಳ್ಳಲುಐದು ದಶಕಗಳೇ ಬೇಕಾಯಿತು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ ತಪ್ಪಿನ ಅರಿವಾಗಲು ಕೇಂದ್ರ ಸರ್ಕಾರಕ್ಕೆ ಸುಮಾರು ಐದು ದಶಕಗಳೇ ಬೇಕಾಯಿತು. ಆರ್‌ಎಸ್‌ಎಸ್‌ನಂತಹ ಅಂತಾರಾಷ್ಟ್ರೀಯ ಖ್ಯಾತಿ ಹೊಂದಿರುವ ಸಂಸ್ಥೆಯನ್ನು ತಪ್ಪಾಗಿ ನಿಷೇಧಿತ ಸಂಘಟನೆಗಳ ಸಾಲಿನಲ್ಲಿರಿಸಲಾಗಿತ್ತು. ನಿರ್ಬಂಧ … Continued

ಆರ್‌ ಎಸ್‌ ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿಷೇಧ ವಾಪಸ್ : ಕಾಂಗ್ರೆಸ್ ಖಂಡನೆ

ನವದೆಹಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‍ಎಸ್‍ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಇದ್ದ ನಿಷೇಧ ಹಿಂಪಡೆಯಲಾಗಿದೆ ಎಂದು ಸರ್ಕಾರದ ಉನ್ನತ … Continued

ಕರ್ನಾಟಕದಲ್ಲಿ ʼಹಮಾರೆ ಬಾರಾಹ್’ ಸಿನಿಮಾ ನಿಷೇಧಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಮುಸ್ಲಿಂ ಮಹಿಳೆಯರ ಕುರಿತಾದ ಸಿನಿಮಾ ‘ಹಮಾರೆ ಬಾರಾಹ್‌’ (Hamare Baarah) ಬಿಡುಗಡೆಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. “ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ … Continued

ಅಪಾಯಕಾರಿ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಸುತ್ತೋಲೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮನುಷ್ಯನ ಜೀವಕ್ಕೆ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವುದು ಹಾಗೂ ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಗೆ ಹೊರಡಿಸಿದ್ದ ಸುತ್ತೋಲೆಗೆ ಮಂಗಳವಾರ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಆದರೆ ತಜ್ಞರು ಇದಕ್ಕೆ ಸಂಬಂಧಿತ ಯಾರನ್ನು ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ … Continued

ಅಶ್ಲೀಲ, ಅಸಭ್ಯ ಕಾರ್ಯಕ್ರಮ : 18 ಒಟಿಟಿ ಪ್ಲಾಟ್‌ಫಾರ್ಮ್, 19 ವೆಬ್‌ಸೈಟ್‌ ಗಳಿಗೆ ನಿಷೇಧ

ನವದೆಹಲಿ :  “ಅಶ್ಲೀಲ, ಅಸಭ್ಯ ಮತ್ತು ಕೆಲವು ನಿದರ್ಶನಗಳಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸಿದ ಕಾರಣಕ್ಕೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 18 ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿದೆ, ಅಲ್ಲದೆ, 19 ವೆಬ್‌ಸೈಟ್‌ಗಳು, 10 ಅಪ್ಲಿಕೇಶನ್‌ಗಳು (ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಏಳು, ಆಪಲ್ ಆಪ್ ಸ್ಟೋರ್‌ನಲ್ಲಿ ಮೂರು) ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳ 57 ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು … Continued

ಇನ್ನು ಈ ತಳಿಯ ನಾಯಿಗಳನ್ನು ಸಾಕುವಂತಿಲ್ಲ: ಪಿಟ್‌ಬುಲ್‌, ಬುಲ್‌ಡಾಗ್‌ ಸೇರಿದಂತೆ 23 ನಾಯಿ ತಳಿಗಳಿಗೆ ನಿಷೇಧ

ನವದೆಹಲಿ: ಪಿಟ್‌ಬುಲ್‌ಗಳು ಮತ್ತು ಬುಲ್‌ಡಾಗ್‌ಗಳು ಸೇರಿದಂತೆ 23 ಅಪಾಯಕಾರಿ ನಾಯಿ ತಳಿಗಳ ಆಮದು, ಸಂತಾನೋತ್ಪತ್ತಿ ಮತ್ತು ಮಾರಾಟವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ದೇಶದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, ಪಿಟ್‌ಬುಲ್ ಟೆರಿಯರ್, ಅಮೆರಿಕನ್ ಬುಲ್‌ಡಾಗ್, ರೊಟ್‌ವೀಲರ್ ಸೇರಿದಂತೆ ಹಲವಾರು ನಾಯಿ ತಳಿಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಕೇಂದ್ರವು 23 ನಾಯಿ … Continued

ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದ ಕೇಂದ್ರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (JKNF) ಅನ್ನು ಕೇಂದ್ರ ಸರ್ಕಾರ ಮಂಗಳವಾರ ನಿಷೇಧಿಸಿದೆ. ಆದೇಶದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಹುರಿಯತ್ ಕಾನ್ಫರೆನ್ಸ್‌ನ ಅಂಗವಾದ ಜೆಕೆಎನ್‌ಎಫ್‌ (JKNF) ಅನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಿದೆ. ಜೆಕೆಎನ್‌ಎಫ್‌ (JKNF) “ದೇಶದ ಸಮಗ್ರತೆ, … Continued

ಕರ್ನಾಟಕದಲ್ಲಿ ಕಲರ್‌ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ ; ನಿಯಮ ಮೀರಿದ್ರೆ ಜೈಲು-ದಂಡ

ಬೆಂಗಳೂರು : ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದೇ ಇರುವ ಕಾಟನ್ ಕ್ಯಾಂಡಿ ಮಾರಬಹುದು ಎಂದು … Continued