ಸಗಟು ಸಿಮ್ ಕಾರ್ಡ್ ಸಂಪರ್ಕಗಳ ಮೇಲೆ ನಿಷೇಧ: ಸೈಬರ್ ವಂಚನೆ ಪರಿಶೀಲಿಸಲು ಸರ್ಕಾರದ ಕ್ರಮ

ನವದೆಹಲಿ: ಡಿಜಿಟಲ್ ವಂಚನೆಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವ ಡೀಲರ್‌ಗಳ ಪರಿಶೀಲನೆಯನ್ನು ಕಡ್ಡಾಯಗೊಳಿಸಿದೆ ಮತ್ತು ದೊಡ್ಡ ಪ್ರಮಾಣದ ಅಥವಾ ಸಗಟು ಸಂಪರ್ಕಗಳನ್ನು ನೀಡುವುದನ್ನು ನಿಲ್ಲಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ. ಇದಕ್ಕೂ ಮೊದಲು, ಹೊಸ ಕ್ರಮಗಳನ್ನು ಘೋಷಿಸುವಾಗ, ಸಿಮ್ ಕಾರ್ಡ್ ಡೀಲರ್‌ಗಳ ಪೊಲೀಸ್ ಪರಿಶೀಲನೆಯನ್ನು ಸರ್ಕಾರವು ಕಡ್ಡಾಯಗೊಳಿಸಿದೆ … Continued

ಶ್ರೀಲಂಕಾದಲ್ಲಿ ಬುರ್ಖಾ, ಮದರಸಾ ನಿಷೇಧ…!?

ತನ್ನ ದೇಶದಲ್ಲಿ ಮಹಿಳೆಯರು ಬುರ್ಖಾ ಧರಿಸುವುದನ್ನು ನಿಷೇಧಿಸಲಾಗುವುದು ಹಾಗೂ ಸಾವಿರಕ್ಕೂ ಹೆಚ್ಚು ಇಸ್ಲಾಮಿಕ್ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರದ ಸಚಿವರೊಬ್ಬರ ಹೇಳಿಕೆ ಉಲ್ಲೇಖಿಸಿ ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕೆಲವು ಮುಸ್ಲಿಂ ಮಹಿಳೆಯರು ಧರಿಸುತ್ತಿದ್ದ ಬುರ್ಖಾವನ್ನು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ನಿಷೇಧಿಸಲು ಶುಕ್ರವಾರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸಾರ್ವಜನಿಕ ಭದ್ರತಾ ಸಚಿವ ಶರತ್ … Continued

ಕೊರೊನಾ ಹೆಚ್ಚಳ ಆತಂಕ: ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಗುರುವಾರದಿಂದ (ಮಾ.೧೧) ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್, ರೆಸ್ಟೊರೆಂಟ್‍ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. … Continued