ಬೆಂಗಳೂರು : ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್‌ ಅನುಮತಿ ನೀಡಿದೆ. ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ನವೆಂಬರ್ 1 ರಿಂದ 3ರ ವರೆಗೆ … Continued

ಅತ್ತಿಬೆಲೆ ಅಗ್ನಿ ದುರಂತ : ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿಯಲ್ಲಿ ಸಂಭವಿಸಿದ ಅಗ್ನಿ ದುರಂತ (Fire Accident)ದಲ್ಲಿ 16 ಮಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ವಿಚಾರಣಾಧಿಕಾರಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ, ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮಲಾನ್​ ಆದಿತ್ಯಾ ಬಿಸ್ವಾಸ್ ಅವರನ್ನು … Continued

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮಂಡಿ ನೋವಿನಿಂದ ಬಳಲುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಅವರಿಗೆ … Continued

ಅತ್ತಿಬೆಲೆ ಪ್ರಕರಣ: 3 ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್‌ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಕರಣದ ಸಂಬಂಧ ಇಂದು, ಮಂಗಳವಾರ ಸಭೆ ನಡೆಸಿದ ಅವರು, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಪಟಾಕಿ ವಿಚಾರದಲ್ಲಿ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ … Continued

ಕುತೂಹಲ ಮೂಡಿಸಿದ ದೇವೇಗೌಡ-ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರನ್ನು (HD DeveGowda) ಅವರನ್ನು ಭಾನುವಾರ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ವೇಳೆಯೇ ಈ ಭೇಟಿ ನಡೆದಿರುವುದುಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, … Continued

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ : ಮೃತರ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು : ಬೆಂಗಳೂರಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ದರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋದಾಮು ಮಾಲೀಕ ರಾಮಸ್ವಾಮಿ ಹಾಗೂ ನಿರ್ವಹಣೆ ಮಾಡುತ್ತಿದ್ದ ರಾಮಸ್ವಾಮಿ ಪುತ್ರ ನವೀನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟಾಕಿ ಗೋದಾಮು ಬೆಂಕಿ … Continued

ಅತ್ತಿಬೆಲೆ : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ: 12 ಜನರು ಸಾವು

ಬೆಂಗಳೂರು : ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದರಂತದಲ್ಲಿ 11 ಮಂದಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ. ಘಟನೆ ನಡೆದ ವೇಳೆ 30-40 ಕಾರ್ಮಿಕರು ಗೋದಾಮಿನಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ 11 ಮಂದಿ ಮೃತಪಟ್ಟಿದ್ದು, ಗಾಐಗೊಂಡ ಕೆಲವರ ಸ್ಥಿತಿ … Continued

ಕ್ರಿಕೆಟ್‌ ವಿಶ್ವಕಪ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಂಚುರಿ ಸಿಡಿಸಿದ ನ್ಯೂಜಿಲೆಂಡ್ ಆಟಗಾರ ʼರಚಿನ್ʼ ರವೀಂದ್ರ ಕನ್ನಡಿಗ ; ಈ ಆಟಗಾರನ ಹೆಸರಲ್ಲಿರುವ ವಿಶೇಷತೆ ಏನು..?

ಗಾಯಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿದು ಹಾಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಅದ್ಭುತ ಆಟದೊಂದಿಗೆ ಗಮನ ಸೆಳೆದ ಭಾರತೀಯ ಮೂಲದ ಯುವ ಕ್ರಿಕೆಟರ್‌ ರಚಿನ್ ರವೀಂದ್ರ ಈಗ ಭಾರಿ ಸುದ್ದಿಯಾಗಿದ್ದಾರೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಗುರುವಾರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) … Continued

ಬೆಂಗಳೂರು : ಪೊಲೀಸ್‌ ಆಯುಕ್ತರ ಕಚೇರಿ ಬಳಿಯ ಬಸ್‌ ಶೆಲ್ಟರ್‌ ಅನ್ನೇ ಕದ್ದೊಯ್ದ ಕಳ್ಳರು…!

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿದ ಒಂದು ವಾರದ ನಂತರ 10 ಲಕ್ಷ ರೂ.ವೆಚ್ಚದಲ್ಲಿ ಸ್ಟೀಲ್ ರಚನೆಯೊಂದಿಗೆ ನಿರ್ಮಾಣವಾಗಿದ್ದ ಬಸ್‌ ನಿಲ್ದಾಣ ನಾಪತ್ತೆಯಾಗಿದೆ…! ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಬಳಿಯಲ್ಲೇ ನೂತನವಾಗಿ ನಿರ್ಮಿಸಲಾಗಿದ್ದ ಬಿಎಂಟಿಸಿ ಬಸ್ ತಂಗುದಾಣ (ಬಸ್ ಶೆಲ್ಟರ್)ವನ್ನು ಇತ್ತೀಚಿಗೆ ಕಳ್ಳರು ನಾಪತ್ತೆ ಮಾಡಿದ್ದಾರೆ. ಈ ಜಾಗದಲ್ಲಿದ್ದ … Continued

ಬೆಂಗಳೂರಿನಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ ಬಗ್ಗೆ ಚರ್ಚೆ : ಸಭೆಯ ದಿನಾಂಕ ಬದಲು, ಅಕ್ಟೋಬರ್‌ 9ಕ್ಕೆ ಸಭೆ ನಿಗದಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡುವ ಕುರಿತು ಚರ್ಚಿಸಲು ಶಿಕ್ಷಣ ಇಲಾಖೆಯು ಅಕ್ಟೋಬರ್ 5ರಂದು ಕರೆದಿದ್ದ ಸಭೆಯನ್ನು ಕಾಋಣಾಂತರಗಳಿಂದ ಅಕ್ಟೋಬರ್ 9ಕ್ಕೆ ಮುಂದೂಡಿದೆ. ನಗರದಲ್ಲಿ ವೈಜ್ಞಾನಿಕವಾಗಿ ಸಂಚಾರ ವ್ಯವಸ್ಥೆ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, … Continued