ಬೆಂಗಳೂರು : ನೈಸ್‌ ರಸ್ತೆಯಲ್ಲಿ ಅಪಘಾತ, ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ-ಮಗು ಸಾವು

ಬೆಂಗಳೂರು : ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಸೋಮಪುರ ಬಳಿ ಇಂದು, ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಸುತ್ತಿದ್ದ ತಾಇ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ. ಇನ್ನೊಂದು ಮಗು ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ … Continued

ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ (74 ವರ್ಷ) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಸಮೀಪವರ್ತಿಗಳಿಂದ ತಿಳಿದುಬಂದಿದೆ. ಇವರಿಗೆ ಆಂಜಿಯೋಗ್ರಾಂ ಆಪರೇಷನ್‌ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ … Continued

ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಪ್ರಜೆಗೆ ಬಂದಿದ್ದು ಮಂಕಿಪಾಕ್ಸ್ ಅಲ್ಲ: ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಈ ತಿಂಗಳ ಆರಂಭದಲ್ಲಿ ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಪ್ರಜೆಗೆ ಮಂಕಿಪಾಕ್ಸ್ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಟೆಸ್ಟ್ ಬಳಿಕ ಆ ವ್ಯಕ್ತಿಗೆ ಇರುವುದು ಮಂಕಿಪಾಕ್ಸ್‌ ಅಲ್ಲ, ಬದಲಿಗೆ ಚಿಕನ್ ಫಾಕ್ಸ್ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿಗೆ ಚಿಕಿತ್ಸೆಗೆಂದು ಬಂದಿದ್ದ ಇಥಿಯೋಪಿಯಾದ 55 … Continued

ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾಲಯ, ಸಹಾಯವಾಣಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಬಹುನಿರೀಕ್ಷಿತ ಸಂಚಾರಿ ಪಶು ಚಿಕಿತ್ಸಾಲಯ ಮತ್ತು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಶನಿವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್ ಮತ್ತಿತರರು … Continued

ಹಿಂದೂಸ್ಥಾನೀ ಸಂಗೀತದ ಮೇರು ಗಾಯಕ, ದುರ್ಲಭ ರಾಗಗಳ ನಿಧಿ ಡಾ. ರಾಜಶೇಖರ ಮನ್ಸೂರ ಇನ್ನಿಲ್ಲ

ಧಾರವಾಡ: ಹಿಂದುಸ್ಥಾನಿ ಸಂಗೀತದ ಮೇರು ಗಾಯಕ, ಅಪ್ರಚಲಿತ ರಾಗಗಳನ್ನು ಪ್ರಸ್ತುತಪಡಿಸುವ ದೇಶದ ಕೆಲವೇ ಕೆಲವು ಗಾಯಕರಲ್ಲಿ ಒಬ್ಬರಾಗಿದ್ದ ಡಾ. ರಾಜಶೇಖರ ಮನ್ಸೂರ ಅವರು ಇಂದು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಡಾ. ರಾಜಶೇಖರ ಮನ್ಸೂರ ಅವರಿಗೆ ೭೯ ವರ್ಷ ವಯಸ್ಸಾಗಿತ್ತು. ತಂದೆ ದಿವಂಗತ ಡಾ.ಮಲ್ಲಿಕಾರ್ಜುನ ಮನ್ಸೂರ ಅವರಂತೆಯೇ ಹಿಂದೂಸ್ಥಾನೀ ಸಂಗೀತದ ಜೈಪುರ-ಅತ್ರೌಲಿ ಘರಾಣೆಯ ಅಗ್ರ ಗಾಯಕರಾಗಿದ್ದ ರಾಜಶೇಖರ … Continued

ರಾತ್ರಿ ಹೊತ್ತು ಬೊಗಳುತ್ತವೆ ಎಂದು 10 ನಾಯಿಗಳಿಗೆ ವಿಷವಿಕ್ಕಿ ಕೊಂದ ಧೂರ್ತರು..!

ಬೆಂಗಳೂರು: ರಾಜಧಾನಿಯಲ್ಲಿ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ಬಡೆದ ಬಗ್ಗೆ ವರದಿಯಾಗಿದೆ. ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಶ್ವಾನಗಳಿಗೆ ದುಷ್ಕರ್ಮಿಗಳು ವಿಷವುಣಿಸಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಅನಿಮಲ್ ಅಸೋಸಿಯೇಷನ್‌ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದು, ಈ … Continued

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, 6 ಮಂದಿ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಕಿಕ ದೌರ್ಜನ್ಯವೆಸಗಿದ ಆರು ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಬಾಲಕರನ್ನೂ ಸಹ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮಾಡಿ ತನಿಖೆ ಮುಂದುವರೆಸಿದ್ದಾರೆ. ಸುಮಾರು 15 ವರ್ಷದ ಅಪ್ರಾಪ್ತ ಬಾಲಕಿ 25 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. … Continued

ಕಾರ್ಖಾನೆ ಯಂತ್ರಕ್ಕೆ ವೇಲ್ ಸಿಲುಕಿ ಯುವತಿ ಸಾವು

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಂತ್ರಕ್ಕೆ ವೇಲ್ ಸಿಲುಕಿಕೊಂಡು ಯುವತಿಯೊಬ್ಬರು ಮೃತಪಟ್ಟ ಘಟನೆ ಚಂದ್ರಾಲೇಔಟ್‌ನ ನಾಯಂಡಹಳ್ಳಿಯಲ್ಲಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಂಡನಹಳ್ಳಿಯ ಶಾಜಿಯಾ ಬಾನು(೨೮)ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಯಂಡಹಳ್ಳಿಯ ಕೈಗಾರಿಕಾ ಪ್ರದೇಶದ ಜಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಶಾಜಿಯಾ ಬಾನು ಕೆಲಸ ಮಾಡುತ್ತಿದ್ದ ವೇಳೆ ಅವರ ವೇಲ್ ಮಷಿನ್‌ಗೆ ಸಿಲುಕಿ ತಲೆಗೆ ಗಂಭೀರವಾಗಿ … Continued

ಎಸಿಬಿ ದಾಳಿ ವೇಳೆ ಬಿಡಿಎ ಮಧ್ಯವರ್ತಿ ಮನೆಯಲ್ಲಿ 4.5 ಕೆಜಿ ಚಿನ್ನ ಪತ್ತೆ..!

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಲಂಚ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪದ ಮೇಲೆ ಒಂಬತ್ತು ಮಂದಿ ಖಾಸಗಿ ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶೋಧ ನಡೆಸುತ್ತಿದೆ. ಮೋಹನ್ ವಿರುದ್ಧ ಭ್ರಷ್ಟಾಚಾರ, ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಆರ್.ಟಿ.ನಗರದ ಮನೋರಾಯನಪಾಳ್ಯದಲ್ಲಿರುವ ಅವರ ಮನೆ … Continued

ಬೆಂಗಳೂರಲ್ಲಿ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂಶ ನೇತೃತ್ವದಲ್ಲಿ 100ಕ್ಕೂ … Continued