ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ತೀವ್ರ ; ಢಾಕಾ ಬಾಂಬ್‌ ಸ್ಫೋಟದಲ್ಲಿ 1 ಸಾವು

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೊಘಬಜಾರ್ ಪ್ರದೇಶದಲ್ಲಿ ಬುಧವಾರ ಸಂಜೆ ನಡೆದ ಭೀಕರ ಬಾಂಬ್ ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಫ್ಲೈ ಓವರ್ ಮೇಲಿಂದ ಕಿಡಿಗೇಡಿಗಳು ಎಸೆದ ಕಚ್ಚಾ ಬಾಂಬ್ (ಕಾಕ್‌ಟೈಲ್ ಬಾಂಬ್) ವ್ಯಕ್ತಿಯ ತಲೆಯ ಮೇಲೆ ಬಿದ್ದು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ‘ಸಿಯಾಮ್’ ಎಂದು ಗುರುತಿಸಲಾಗಿದ್ದು, ಇವರು ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. … Continued

ಹಾದಿ ಹತ್ಯೆಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಬಾಂಗ್ಲಾದೇಶದ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡೇಟು

ಢಾಕಾ/ಖುಲ್ನಾ: ಬಾಂಗ್ಲಾದೇಶದಲ್ಲಿ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ ಸೋಮವಾರ ಖುಲ್ನಾದಲ್ಲಿ ನ್ಯಾಷನಲ್ ಸಿಟಿಜನ್ಸ್ ಪಾರ್ಟಿಯ (NCP) ಹಿರಿಯ ಕಾರ್ಮಿಕ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ತಿಂಗಳಲ್ಲೇ ನಡೆದ ಎರಡನೇ ಹೈ-ಪ್ರೊಫೈಲ್ ಶೂಟೌಟ್ ಇದಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಷನಲ್ ಸಿಟಿಜನ್ಸ್ ಪಾರ್ಟಿಯ (NCP) … Continued

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಮಾಡಿ ಮೃತದೇಹಕ್ಕೆ ಬೆಂಕಿ ಹಚ್ಚಿದ ಮತಾಂಧರು…

ಢಾಕಾ:  ಬಾಂಗ್ಲಾದೇಶದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ್ನು ಗುಂಪೊಂದು ಬರ್ಬರವಾಗಿ ಹೊಡೆದು ಕೊಂದಿರುವ ಘಟನೆ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲಾದಲ್ಲಿ ಈ ಘಟನೆ ನಡೆದಿದೆ ಎಂದು ಬಿಬಿಸಿ ಬಾಂಗ್ಲಾ ವರದಿ ಮಾಡಿದೆ. ಮೃತರನ್ನು ಸ್ಥಳೀಯ ಗಾರ್ಮೆಂಟ್ ಕಾರ್ಖಾನೆಯ ಉದ್ಯೋಗಿ ದೀಪುಚಂದ್ರ ದಾಸ್ ಎಂದು ಗುರುತಿಸಲಾಗಿದೆ. ಮತ್ತು ದುಬಾಲಿಯಾ … Continued

1971ರ ನಂತರದ ಅತಿದೊಡ್ಡ ಸವಾಲು: ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಚೀನಾ, ಪಾಕ್ ಪಾತ್ರದ ಬಗ್ಗೆ ಸಂಸದೀಯ ಸಮಿತಿ ಎಚ್ಚರಿಕೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯು 1971ರ ಬಾಂಗ್ಲಾ ವಿಮೋಚನಾ ಯುದ್ಧದ ನಂತರ ಭಾರತಕ್ಕೆ ಎದುರಾಗಿರುವ ಅತಿದೊಡ್ಡ ‘ವ್ಯೂಹಾತ್ಮಕ ಸವಾಲು’ ಎಂದು ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಗಂಭೀರ ಎಚ್ಚರಿಕೆ ನೀಡಿದೆ. ಶಶಿ ತರೂರ್ ನೇತೃತ್ವದ ಈ ಸಮಿತಿಯು ಸಂಸತ್ತಿನಲ್ಲಿ ಸಲ್ಲಿಸಿದ ವರದಿಯಲ್ಲಿ, ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳ ಪುನರುತ್ಥಾನ ಮತ್ತು ಚೀನಾ-ಪಾಕಿಸ್ತಾನದ ಹೆಚ್ಚುತ್ತಿರುವ ಹಸ್ತಕ್ಷೇಪದ … Continued

ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಇಂದು ಪ್ರಮಾಣವಚನ : ಸೇನಾ ಮುಖ್ಯಸ್ಥ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ (ಆಗಸ್ಟ್ 8) ಪ್ರಮಾಣವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ವಾಕರ್‌, ಪ್ರಮಾಣ ವಚನ ಸಮಾರಂಭವು ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ) ನಡೆಯುವ … Continued

ಬಾಂಗ್ಲಾದೇಶ ಬಿಕ್ಕಟ್ಟು : ನೊಬೆಲ್ ಪುರಸ್ಕೃತ 84 ವರ್ಷದ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ

ನವದೆಹಲಿ : ಭಾರೀ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದ ನೊಬೆಲ್ ಪ್ರಶಸ್ತಿ ಪುರಸ್ಕೃತ ಕಿರು ಹಣಕಾಸು ಪ್ರವರ್ತಕ ಮುಹಮ್ಮದ್ ಯೂನಸ್ ಅವರನ್ನು ಮಿಲಿಟರಿ ಬೆಂಬಲಿತ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಹಸೀನಾ ಅವರ ಪದಚ್ಯುತಿಯಲ್ಲಿ ಪ್ರತಿಭಟನೆ ಅಂತ್ಯಗೊಂಡ ನಂತರ ವಿದ್ಯಾರ್ಥಿ ಮುಖಂಡರು ಮಂಗಳವಾರ ಸಂಜೆ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಜಮಾನ್ … Continued

ಬಾಂಗ್ಲಾದೇಶ ಬಿಕ್ಕಟ್ಟು : ಅವಾಮಿ ಲೀಗ್‌ ನಾಯಕನ ಹೊಟೇಲಿಗೆ ಬೆಂಕಿ ಹಚ್ಚಿ 24 ಜನರನ್ನು ಸಜೀವ ದಹನ ಮಾಡಿದ ಗುಂಪು

ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವಾಮಿ ಲೀಗ್ ಪಕ್ಷದ ನಾಯಕರ ಒಡೆತನದ ಹೋಟೆಲ್‌ ಗೆ ಗುಂಪೊಂದು ಬೆಂಕಿ ಹಚ್ಚಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಸಜೀವ ದಹನ ಮಾಡಿದೆ ಎಂದು ಸ್ಥಳೀಯ ಪತ್ರಕರ್ತರು … Continued

ಬಾಂಗ್ಲಾದೇಶ ಬಿಕ್ಕಟ್ಟು | ಬಾಂಗ್ಲಾದೇಶ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಬಗ್ಗೆ ಶೇಖ್ ಹಸೀನಾಗೆ ʼಭಾರತʼ ಮೊದಲೇ ಎಚ್ಚರಿಸಿತ್ತೆ ?

ನವದೆಹಲಿ: ಕಳೆದ ವರ್ಷ ಜೂನ್‌ನಲ್ಲಿ ಸೇನಾ ಮುಖ್ಯಸ್ಥರಾಗಿ ಜನರಲ್ ವಾಕರ್-ಉಜ್-ಜಮಾನ್ ಅವರನ್ನು ನೇಮಕ ಮಾಡುವುದರ ಬಗೆಗಿನ ಸಂಭವನೀಯ ಅಪಾಯಗಳ ಬಗ್ಗೆ ಭಾರತೀಯ ಸರ್ಕಾರಿ ಅಧಿಕಾರಿಗಳು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಈ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ವರದಿಯೊಂದು ಹೇಳಿದೆ. ಈ ಎಚ್ಚರಿಕೆಗಳ ಹೊರತಾಗಿಯೂ, ಹಸೀನಾ ಅವರು ವಾಕರ್-ಉಜ್-ಜಮಾನ್ ಅವರನ್ನು ಸೇನಾ ಮುಖ್ಯಸ್ಥರಾಗಿ … Continued