ಮಂಗಳೂರು | ಬಂದೂಕು ತೋರಿಸಿ ಬ್ಯಾಂಕ್‌ ದರೋಡೆ ; ₹10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ

ಮಂಗಳೂರು : ಬೀದರಿನಲ್ಲಿ ಗುರುವಾರ ನಡೆದಿರುವ ಎಟಿಎಂ ವ್ಯಾನ್ ದರೋಡೆ ಪ್ರಕರಣ ನಡೆದ ಮಾರನೇ ದಿನ ಶುಕ್ರವಾರ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಹಾಡಹಾಗಲೇ ದರೋಡೆ ನಡೆದಿದ್ದು, ಬ್ಯಾಂಕ್ ಶಾಖೆಗೆ ನುಗ್ಗಿದ ಐವರು … Continued

ಜನವರಿಯಿಂದ 1ರಿಂದ ನೌಕರರ ಪಿಂಚಣಿ ಯೋಜನೆ(EPS)ಯಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ನೂತನ ವರ್ಷ 2025ರ ಜನವರಿ 1ರಿಂದ ದೇಶದಾದ್ಯಂತದ ಜನರ ಮೇಲೆ ಪರಿಣಾಮ ಬೀರುವ ಹಣಕಾಸಿನ ಬದಲಾವಣೆಗಳು ಜಾರಿಗೆ ಬರಲಿವೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಾರ್ಯವಿಧಾನಗಳಲ್ಲಿನ ಬದಲಾವಣೆಗಳಿಂದ ಹಿಡಿದು ಎಲ್‌ಪಿಜಿ ಬೆಲೆ ಮತ್ತು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವರೆಗೆ ಹೊಸ ವರ್ಷವು ಪರಿಣಾಮ ಬೀರಬಹುದು. ಇಪಿಎಫ್‌ಒ (EPFO) ಹೊಸ ನಿಯಮ ಕೇಂದ್ರೀಕೃತ … Continued

‌ಪರಾರಿಯಾಗಿರುವ ವಿಜಯ ಮಲ್ಯ, ನೀರವ್ ಮೋದಿಯಿಂದ 15,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿ ವಸೂಲಿ ಮಾಡಿದ ಇ.ಡಿ.

ನವದೆಹಲಿ: ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯಗೆ ಸೇರಿದ್ದ ₹ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ತಿಳಿಸಿದ್ದಾರೆ. ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ₹ 22,280 … Continued

ಬ್ಯಾಂಕ್‌ಗಳ ಖಾಸಗೀಕರಣ ಮಾಡಿದರೂ ನೌಕರರ ಹಿತ ಕಾಪಾಡಲು ಬದ್ಧ: ನಿರ್ಮಲಾ

ನವದೆಹಲಿ: ಎಲ್ಲ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಿಲ್ಲ, ಒಂದು ವೇಳೆ ಖಾಸಗೀಕರಣ ಮಾಡಿದರೂ ಬ್ಯಾಂಕ್‌ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ಖಂಡಿಸಿ ರಾಷ್ಟ್ರವ್ಯಾಪಿ ಬ್ಯಾಂಕ್‌ ನೌಕರರು ೨ ದಿನಗಳ ಧರಣಿ ನಡೆಸಿದ ನಂತರ ಸಚಿವೆ ಈ ಹೇಳಿಕೆ ನೀಡಿದ್ದಾರೆ. ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಬ್ಯಾಂಕುಗಳ ಪ್ರತಿಯೊಬ್ಬ ಸಿಬ್ಬಂದಿಯ … Continued