ಸೋಮವಾರದಿಂದ ರಾಜ್ಯಾದ್ಯಂತ 9, 10ನೇ ತರಗತಿ ಆರಂಭ; ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಉಂಟಾಗಿರುವ ವಿಕೋಪ ಪರಿಸ್ಥಿತಿ ನಿಗ್ರಹಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ನಡೆಸಿದ ಸಭೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲು … Continued