ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮಂಡಿ ನೋವಿನಿಂದ ಬಳಲುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಅವರಿಗೆ … Continued

ಆಗಸ್ಟ್‌ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಮಾದ್ಯಮದವರ ಜೊತೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆ ವೇಳೆ ಕೇಂದ್ರ ಗೃಹ ಸಚಿವ … Continued

ಬಿಜೆಪಿ ಹೈಕಮಾಂಡ್‌ ಬುಲಾವ್‌: ಮಾಜಿ ಸಿಎಂ ಬೊಮ್ಮಾಯಿ ದೆಹಲಿಗೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಈಗ ಬುಲಾವ್‌ ಬಂದಿದೆ. ಬೊಮ್ಮಾಯಿಯವರು ಭಾನುವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಲಿದ್ದು, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. … Continued

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ : ಸದನದಲ್ಲಿ ಕೋಲಾಹಲ, ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಆತ್ಮಹತ್ಯೆ ಯತ್ನದ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದರು. ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‌ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ … Continued

ಶೃಂಗೇರಿ ಶಾರದಾ ಪೀಠಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಶೃಂಗೇರಿ: ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಗದ್ಗುರುಗಳ ಆಶೀರ್ವಾದ ಪಡೆದರು. ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಶ್ರೀಮಠಕ್ಕೆ ತೆರಳಿದ ಮುಖ್ಯಮಂತ್ರಿಗಳಿಗೆ ಶೃಂಗೇರಿ ಮಠದ ಆಡಳಿತಾಧಿಕಾರಿ ಡಾ. ವಿ.ಆರ್‌. ಗೌರಿಶಂಕರ್‌ ಪೂರ್ಣಕುಂಭ ಸ್ವಾಗತ ನೀಡಿದರು. ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ … Continued

ಸಿಎಂ ಬೊಮ್ಮಾಯಿ-ಬಿಎಸ್‌ವೈ ಜೊತೆಗೆ ಸಭೆ ನಂತರ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್

ಬೆಂಗಳೂರು: ಪ್ರಬಲ ಖಾತೆಗೆ ಬಿಗಿಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಈಗ ಹಿಂದೆ ಸರಿದಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ನಡೆಸಿದ ಸಭೆ ಯಶಸ್ವಿಯಾಗಿದ್ದು, ಅದರ ನಂತರ ಅವರು ರಾಜೀನಾಮೆ ನಿರ್ದಾರದಿಂದ ಹಿಂದೆ ಸರದಿದ್ದಾರೆ. ಈ ಹಿಂದೆ ಪ್ರತ್ಯೇಕ ಜಿಲ್ಲೆಗೆ ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ … Continued

ಇಂದು 11 ಗಂಟೆಗೆ ನೂತನ ಸಚಿವರ ಪಟ್ಟಿ ರಿಲೀಸ್, ಮಧ್ಯಾಹ್ನ ಪ್ರಮಾಣ ವಚನ : ಬೊಮ್ಮಾಯಿ

ಬೆಂಗಳೂರು : ನೂತನ ಸಚಿವರ ಪಟ್ಟಿಯನ್ನು ಇಂದು ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ನೂತನಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹೊಸ ಸಂಪುಟ ರಚನೆ ಮಾಡುವ ಬಗ್ಗೆ ಚರ್ಚೆಗಳು ಬಿರುಸಾಗಿ ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಬೊಮ್ಮಾಯಿ ಬೆಂಗಳೂರಿಗೆ … Continued

ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ … Continued

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ:ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು (ಶುಕ್ರವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ … Continued