ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ

(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ  ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ  ಲೇಖನ) ರಾಜಕಾರಣದ ಮೂಲಕ … Continued

ವಿದ್ಯಾರ್ಥಿಗಳ ಪಾಸಿಂಗ್‌ ಅಂಕ ಇಳಿಕೆ ಬೇಡ : ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇದ್ದ ಕನಿಷ್ಠ ಅಂಕಗಳನ್ನು 35ರಿಂದ 33ಕ್ಕೆ ಇಳಿಸಲು ಸರ್ಕಾರ ಮುಂದಾಗಿರುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj horatti) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ … Continued

ಸಿ.ಟಿ. ರವಿ ಪ್ರಕರಣ ಮುಗಿದ ಅಧ್ಯಾಯ, ಸದನದೊಳಗಿನ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳುವಂತಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ … Continued

ಹುಬ್ಬಳ್ಳಿ: 12 ಸಾಧಕರಿಗೆ ‘ಅವ್ವ ಪ್ರಶಸ್ತಿ’ ಪ್ರದಾನ

ಹುಬ್ಬಳ್ಳಿ: ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ‘ಅವ್ವ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. 12 ಸಾಧಕರಿಗೆ ಅವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿ​ರಿಯ ರಾ​ಜ​ಕಾ​ರಣಿ ಎ​ಸ್‌.​ಆ​ರ್‌. ​ಪಾ​ಟೀಲ, ಪ​ತ್ರ​ಕರ್ತ ಚಂದ್ರ​ಕಾಂತ ವಡ್ಡು, ಸಿ​ತಾರ ವಾ​ದಕ ಛೋಟೆ … Continued

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ

ಹುಬ್ಬಳ್ಳಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಹೆಸರು ಸೇರ್ಪಡೆ ಮಾಡಲಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ದಾಖಲೆಗಳನ್ನು ಪ್ರಕಟ ಮಾಡಲಾಗಿದೆ. 1980 ರಿಂದ ಸ್ಪರ್ಧಿಸಿದ ಎಲ್ಲಾ ಚುನಾವಣೆಗಳಲ್ಲಿ ಜಯ ಗಳಿಸಿರುವ ಬಸವರಾಜ ಹೊರಟ್ಟಿ ಅವರು, ವಿಧಾನ … Continued

ಕರಾವಳಿ ಘಟನೆ ನೋವು ತಂದಿದೆ, ಇಸ್ರೇಲ್ ನಲ್ಲಿ ಬೆಳಗ್ಗೆ ಇಂಥ ಘಟನೆಯಾದರೆ ಸಂಜೆಗೇ ಗಲ್ಲಿಗೆ ಹಾಕ್ತಾರೆ: ಹೊರಟ್ಟಿ

ಹಾವೇರಿ: ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆಯಾದರೆ ಮಾತ್ರ ಇಂತಹ ಘಟನೆಗಳು ಕಡಿಮೆಯಾಗುತ್ತವೆ. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹಾವೇರಿಯಲ್ಲಿ … Continued

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಜುಲೈ 15ರ ವರೆಗೆ ಗಡುವು

ಹುಬ್ಬಳ್ಳಿ: ರಾಜ್ಯ ಸರ್ಕಾರ 1995-2000ದ ಅವಧಿಯಲ್ಲಿ ಆರಂಭಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಹಿಂದಿನ ಪದ್ಧತಿಯನ್ನೇ ಅನುಸರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಜುಲೈ 15ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಶಿಕ್ಷಕರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು ಎಂಬ ನಿರ್ಣಯವನ್ನು ಭಾನುವಾರ ಹುಬ್ಬಳ್ಳಿಯಲ್ಲಿನಡೆದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ … Continued

ಮೇ 16ರಿಂದ ಶಾಲೆ ಆರಂಭ ಬೇಡ, ಮುಂದೂಡಿ : ಸಿಎಂಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ: ಹಿಂದೆಂದೂ ಕಂಡರಿಯದ ಬಿರು ಬಿಸಿಲಿನ ಬೇಗೆ ಈ ವರ್ಷ ದೇಶದಾದ್ಯಂತ ಇದ್ದು, ಹೀಗಾಗಿ ಶಾಲೆಗಳನ್ನು ಮೇ 16 ರಿಂದ ಪ್ರಾರಂಭಿಸಲು ಉದ್ದೇಶಿಸಿರುವುದನ್ನು ಮುಂದೂಡಬೇಕು. ಜೂನ್ 1 ರಿಂದ ಪ್ರಾರಂಭಿಸಲು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲೂ ಕೂಡಾ ಬಿಸಿಲಿನ … Continued

ಮುಂಬರುವ ವಿಧಾನ ಪರಿಷತ್ತು ಚುನಾವಣೆ ವೇಳೆಗೆ ಬಿಜೆಪಿಗೆ ಸೇರ್ಪಡೆ : ಬಸವರಾಜ ಹೊರಟ್ಟಿ

.ಹುಬ್ಬಳ್ಳಿ: ಮುಂಬರುವ ವಿಧಾನಪರಿಷತ್ತು ಚುನಾವಣೆ ವೇಳೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಷಯ ಖಚಿತ ಪಡಿಸಿ ಅವರು, ನಾನು ಬಿಜೆಪಿ ಸೇರ್ಪಡೆಯಾಗುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸೇರ್ಪಡೆಯಾಗುವುದು ಬಹುತೇಕ ಖಚಿತ. ಸಭಾಪತಿ ಸ್ಥಾನದಲ್ಲಿರುವುದರಿಂದ ಚುನಾವಣೆ ವೇಳೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು … Continued

ಹಿಜಾಬ್‌ ವಿವಾದ: ತಕ್ಷಣವೇ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಿ-ಹೊರಟ್ಟಿ

ಹುಬ್ಬಳ್ಳಿ: ಹಿಜಾಬ್‌ ಪ್ರಕರಣದ ಕುರಿತು ನಾವು ನ್ಯಾಯಾಲಯದ ತೀರ್ಪಿನ ಮೇಲೆ ನಂಬಿಕೆಯನ್ನು ಇಡಬೇಕಾಗುತ್ತದೆ. ವಿವಾದದಿಂದ ಮಕ್ಕಳ ಮನಸ್ಸಿನ ಮೇಲೆ ಉಂಟಾಗುವ ದ್ವೇಷ, ಸಿಟ್ಟು ಮನಸ್ಸಿನಲ್ಲಿಯೇ ಉಳಿಯಬಹುದು. ಈ ಬಗ್ಗೆ ಮುಂದಾಲೋಚನೆಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಶಾಂತಿ ಕಾಪಾಡುವುದು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುವುದು ಅತ್ಯಂತ ಮುಖ್ಯ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ … Continued