ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಪರೀಕ್ಷೆಗೆ ಎಲ್ಲ ರೀತಿಯ … Continued

ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ನಡೆಸಲಾಗಿದ್ದ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ತಿಳಿಸಿದ್ದಾರೆ. ನವೆಂಬರ್‌ 6 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಕರ … Continued

ವಿದ್ಯಾರ್ಥಿಗಳೇ ಗಮನಿಸಿ…: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Karnataka Second PUC Annual Examination 2023 ) ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದ್ದು, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ( … Continued

ಶಾಲಾ ಶಿಕ್ಷಕರ ನೇಮಕಾತಿ: ಈ ವಾರವೇ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಿಗೆ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿದ ನಂತರ ದಾಖಲಾತಿಯ ಪರಿಶೀಲನೆ ನಡೆದಿತ್ತು. ಈಗ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ … Continued

ಎಲ್ಲ ಶಾಲೆಗಳಲ್ಲಿ ವಿವೇಕಾನಂದರ ಫೋಟೋ ಹಾಕಲು ತೀರ್ಮಾನ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ಈ ರೀತಿ ರಾಜಕೀಯ ಸರಿಯಲ್ಲ. ನಾವು ಇಂತಹದ್ದೇ ಬಣ್ಣ ಬಳಿಯಿರಿ ಎಂದು ಹೇಳಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ವಿಧಾನಸೌಧದ ಬಳಿ ಇಂದು ಮಂಗಳವಾರ ಶಾಲೆಗಳಿಗೆ ಕೇಸರಿ ಬಣ್ಣ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, … Continued

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. ಜೂನ್‌ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು … Continued

ಪ್ರೌಢಶಾಲೆ 1801 ಸಹ ಶಿಕ್ಷಕರ ನೇಮಕಕ್ಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ 3,590 ಪ್ರೌಢಶಾಲೆ ಸಹಶಿಕ್ಷಕ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 1801 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಟಿ.ಎನ್.ಬಾಲಕೃಷ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 1801 ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ … Continued