ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಹೆಚ್ಚುವರಿ ಎಸ್‌ಪಿ ಎನ್.ವಿ.ಭರಮನಿ

ಬೆಳಗಾವಿ/ಧಾರವಾಡ: ಧಾರವಾಡ ಹೆಚ್ಚುವರಿ ಎಸ್‌ಪಿ ಎನ್.ವಿ. ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅವರು ಸ್ವಯಂ ನಿವೃತ್ತಿ ಕೋರಿ ಸುಮಾರು ಒಂದು ತಿಂಗಳ ಹಿಂದೆಯೇ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಸ್ವಯಂಪ್ರೇರಿತ ನಿವೃತ್ತಿಗೆ ಭರಮನಿ ಅವರು ಅರ್ಜಿ ಸಲ್ಲಿಸಿದ್ದರೂ ಈ ಬಗ್ಗೆ ಇಲಾಖೆ ಇನ್ನೂ ನಿರ್ಧರಿಸಬೇಕಿದೆ. ಹಿರಿಯ ಅಧಿಕಾರಿಗಳು ಸ್ವಯಂ … Continued

ಬೆಳಗಾವಿ | ಮರಕ್ಕೆ ಕಟ್ಟಿ ಐವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ಥಳಿತ

ಬೆಳಗಾವಿ : ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ಯುವಕರ ಗುಂಪು ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿವೆ. ಗೋ ಸಾಗಣೆ ತಡೆಯಲು ಮುಂದಾಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಘಟನೆಗೂ ಗೋ ರಕ್ಷಣೆಗೂ … Continued

ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued

ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಬೆಳಗಾವಿ: ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರ ಆಡಿಯೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈಗ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಮತ್ತೋರ್ವ ಶಾಸಕ ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಆಡಳಿತ ವ್ಯವಸ್ಥೆ … Continued

500 ರೂ. ಲಂಚ ಪಡೆದ ಪ್ರಕರಣ : ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ : 30 ವರ್ಷದ ಹಿಂದೆ ಪಡೆದಿದ್ದ 500 ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆಯಾಗಿದೆ. ಅಣ್ಣ-ತಮ್ಮಂದಿರ ಹೆಸರಿಗೆ ಜಮೀನು ಖಾತೆ ಮಾಡಿಕೊಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಿಗನಿಗೆ ಸುಪ್ರೀಂ ಕೋರ್ಟ್‌ ಶಿಕ್ಷೆ ವಿಧಿಸಿದೆ. ನಾಗೇಶ ಶಿವಂಗೇಕರ ಎಂಬವರು ಜೈಲು ಪಾಲಾದ ನಿವೃತ್ತ … Continued

ಬೆಳಗಾವಿ | ಬಸ್ಸಿನಲ್ಲಿ ಕಿಟಕಿ ಬದಿ ಸೀಟಿಗಾಗಿ ಗಲಾಟಿ ; ವಿದ್ಯಾರ್ಥಿಗೆ ಚಾಕು ಇರಿತ

ಬೆಳಗಾವಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಗುಂಪು ಮತ್ತು ವಿದ್ಯಾರ್ಥಿ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿ ತಾಲೂಕು ಪಂತಬಾಳೇಕುಂದ್ರಿ ಗ್ರಾಮದ 19 ವರ್ಷದ ವಿದ್ಯಾರ್ಥಿಗೆ ಚಾಕು ಇರಿಲಾಗಿದೆ. ಪಂತಬಾಳೆಕುಂದಿಯಿಂದ ಬರುವಾಗ ಬಸ್ಸಿನ ಕಿಟಕಿಯಬಳಿಯ ಸೀಟಿಗಾಗಿ ನಡೆದ ಈ ಗಲಾಟೆಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, … Continued

ಖಾನಾಪುರ | ಕುಸಮಳಿ ಸನಿಹ ಮಲಪ್ರಭಾ ನದಿಯ ಸೇತುವೆ ಬಳಿ ಭೂ ಕುಸಿತ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಭೂ ಕುಸಿತಗಳು ಕಂಡು ಬಂದಿವೆ. ಖಾನಾಪುರ ತಾಲೂಕು ಕುಸಮಳಿ ಬಳಿ ಮಲಪ್ರಭಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಬಳಿ ನೀರಿನ ಹರಿವು ಹೆಚ್ಚಿದೆ. ಇದರಿಂದ ಸೇತುವೆಯ ರಸ್ತೆಯ ಮೇಲೆ ಭೂಕುಸಿತ ಕಂಡು ಬಂದಿದೆ. ಹೀಗಾಗಿ ಭಾನುವಾರ ಸಂಜೆಯಿಂದ ಈ ಮಾರ್ಗವಾಗಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಬೆಳಗಾವಿ ಮತ್ತು … Continued

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಗೋಕಾಕ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ … Continued

ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ. ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) … Continued

ಗೌರವ ಡಾಕ್ಟರೇಟ್ ನಿರಾಕರಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಕುರಿತು ಮೈಸೂರು ಮಾನಸ ಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಸಚಿವರು ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ … Continued