ಬೆಳಗಾವಿ : ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ ಮೇಲ್ ಮೂಲಕ ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ. ಸಾಂಬ್ರಾ ‌ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಈ ಬೆದರಿಕೆ ಪತ್ರ ಬಂದಿದೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಾಂಬ್ ಬೆದರಿಕೆ ಪತ್ರದ … Continued

ಬೆಳಗಾವಿ: ವಾಹನದ ಕ್ಯಾಬಿನ್ ಮಾರ್ಪಾಟು ಮಾಡಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ…!

ಬೆಳಗಾವಿ: ಅಕ್ರಮವಾಗಿ ಹಣ ಸಾಗಾಟ ಮಾಡಲು ವಾಹನದ ಕ್ಯಾಬಿನ್ ಮಾರ್ಪಾಡು ಮಾಡಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ಅವರಿಂದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ಹಣವನ್ನ ಜಪ್ತಿ ಮಾಡಿಕೊಂಡಿದ್ದಾರೆ. ಶುಕ್ರವಾರ ಸಂಜೆ ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆ ಗೂಡ್ಸ್ ವಾಹನದಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ … Continued

ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ: ಬೆಳಗಾವಿಯ ಖ್ಯಾತ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪತ್ನಿ ಉಮಾ ಆಲಿಯಾಸ್ ಸರಿತಾ, ಶೋಭಿತ್ ಗೌಡ ಮತ್ತು ಪವನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾಳ ಮಾರುತಿ ಪೊಲೀಸರು   ಗುರುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಈ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಿಧಿಸಲಾಗಿದೆ. ಅ. ೯ರಂದು ಸಂತೋಷ … Continued

ಬೆಳಗಾವಿ ಜಿಲ್ಲೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ : ನಿಪ್ಪಾಣಿಯ ಕೋಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ. ಅದರಂತೆ ಬೆಳಗಾವಿ ಜಿಲ್ಲೆಬೆಯಲ್ಲೂ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ಲಾರಿ ಚಾಲಕರಿಂದ … Continued

ಖಾನಾಪುರ : ಮುಂಡವಾಡದಲ್ಲಿ ವ್ಯಕ್ತಿ ಮೇಲೆ ಕರಡಿ ದಾಳಿ

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಮುಂಡವಾಡ ಗೌಳಿವಾಡದ ರೈತರೊಬ್ಬರ ಮೇಲೆ ಭಾನುವಾರ ಜಮೀನಿಗೆ ತೆರಳುತ್ತಿದ್ದ ವೇಳೆ ಎರಡು ಕರಡಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ. ವಿನೋದ ಜಾಧವ (46) ಎಂಬವರು ಭಾನುವಾರ ಬೆಳಗ್ಗಿನ ಹೊತ್ತು ಎಂದಿನಂತೆ ತಮ್ಮ ಜಮೀನಿಗೆ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಕರಡಿಗಳು ದಾಳಿ ಮಾಡಿವೆ ಎಂದು ಹೇಳಲಾಗಿದೆ. ಅವರು ಗಾಯಗೊಂಡ … Continued

ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ ಸಹ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸಹಕೈದಿಯೊಬ್ಬನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಮೇಲೆ ಜೈಲಿನಲ್ಲಿ ಹಲ್ಲೆ ಮಾಡಲಾಗಿದೆ. ಬಿಹಾರದ ಮೂಲದ ಸದ್ಯ ಬೆಳಗಾವಿ ರಾಮತೀರ್ಥನಗರ ನಿವಾಸಿ ಹಿತೇಶಕುಮಾರ ಚವಾಣ ಹಲ್ಲೆಗೆ ಒಳಗಾದ ಕೈದಿಯಾಗಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಾದ ಬಸವರಾಜ … Continued

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್‌ ರಾಜೀನಾಮೆ

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ರಮೇಶ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ … Continued

ಬೆಳಗಾವಿ | ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

ಬೆಳಗಾವಿ: ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಬೆಳಗಾವಿ ನಗರದ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣ ಪಾಟೀಲ(48) ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಸೇತುವೆಯಿಂದ … Continued

ಬೆಳಗಾವಿ : ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ

ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ (ಸೆ.17) ರಾಣಿ ಚನ್ನಮ್ಮ ವೃತ್ತದ ಬಳಿ ಮೂವರು ಯುವಕರಿಗೆ ಚಾಕು ಇರಿತ ಮಾಡಲಾಗಿದೆ ಎಂದು ವರದಿಯಾಗಿದೆ. ಭಾರೀ ಜನಸಂದಣಿಯಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ … Continued

ನಿಪ್ಪಾಣಿ | ಸರಣಿ ಅಪಘಾತ : ಇಬ್ಬರು ಸಾವು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ … Continued