ಬೆಳಗಾವಿ ಎಸ್‌ಟಿಪಿ ನಿರ್ಮಾಣಕ್ಕೆ 2 ಕೋಟಿ ರೂ.ಗಳ ವೆಚ್ಚ ಮಾಡಿ ಕಾಮಗಾರಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ (ಎಸ್‌ಟಿಪಿ) ರಾಜ್ಯ ಸರ್ಕಾರದ ಬೊಕ್ಕಸದಿಂದ 2 ಕೋಟಿ ರೂಪಾಯಿ ವೆಚ್ಚ ಮಾಡಿದ ನಂತರ ಘಟಕವನ್ನು ಬೇರೊಂದು ಪ್ರದೇಶಕ್ಕೆ ಸ್ಥಳಾಂತರಿಸಿ ಕಾಮಗಾರಿ ಕೈಗೊಂಡ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಈಚೆಗೆ ಲೋಕಾಯುಕ್ತಕ್ಕೆ ವಹಿಸಿದೆವೆಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ದೂರು ದಾಖಲು, ನಾಲ್ವರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ … Continued

ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆದ್ರೂ ಎನ್ನುವುದು ಗೊತ್ತಿದೆ:ಕಟೀಲು

ಬೆಳಗಾವಿ: ರಾಜ್ಯದ ಮೂರು ಉಪ ಚುಣಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟಿಲು ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಪಕ್ಷದ ಪೂರ್ವ ತಯಾರಿ ನಡೆದಿದೆ. ಇಂದು ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಬಿಜೆಪಿ ಸಂಸದರು ಕೇಂದ್ರ ಸರಕಾರ … Continued

ಕನ್ನಡಿಗರಿಗೆ ಧಮ್ಕಿ: ಎಂಇಎಸ್ ಮುಖಂಡ ಸಾಳುಂಕೆ ಪುಂಡಾಟಿಕೆ

ಬೆಳಗಾವಿ: ಕನ್ನಡಿಗರಿಗೆ ಗೊಡ್ಡು ಬೆದರಿಕೆ ಹಾಕಿ ಬೆಳಗಾವಿಯ ಎಂಇಎಸ್ ಮುಖಂಡ ಶುಭಂ ಸಾಳುಂಕೆ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡಿಗರಿಗೆ ಧಮ್ಕಿ ಹಾಕಿ ಎಚ್ಚರಿಕೆ ನೀಡಿದ್ದಕ್ಕೆ ಈಗ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡೂ ಒಂದಾಗಿವೆ ಎಂದು ಹೇಳಿದ್ದ ಸಾಳುಂಕೆ ಹಳದಿ, ಕೆಂಪು ಬಣ್ಣದ ಶಾಲು ಧರಿಸಿದವರನ್ನು ನಾವು ಕಂಡಲ್ಲಿ ಹೊಡೆಯುತ್ತೇವೆ, ನಮ್ಮ … Continued

ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಬಸ್‌ ಸಂಚಾರ ಸ್ಥಗಿತ‌

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಶುಕ್ರವಾರ ರಾತ್ರಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿಯಲು ಶುರು ಮಾಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದ ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಸಾರಿಗೆ ಸಂಸ್ಥೆ ಬಸ್‌ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಿಂದಲೂ ಬಸ್‌ಗಳು ಬೆಳಗಾವಿಗೆ ಬರುತ್ತಿಲ್ಲ. ಕೆಲ ದಿನಗಳ ಹಿಂದೆ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಅಂಗಡಿಗಳು, ಮಳಿಗೆಗಳಲ್ಲಿದ್ದ ಕನ್ನಡದ ನಾಮಫಲಕಗಳಿಗೆ ಮಸಿ … Continued

ಮಹಾರಾಷ್ಟ್ರದಿಂದ ಬರುವವರಿಗೆ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರ ಕಡ್ಡಾಯ

ಬೆಳಗಾವಿ: ಕೋವಿಡ್-19 ರೂಪಾಂತರಿ ವೈರಾಣು ಹರಡದಂತೆ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಸೇರಿದಂತೆ ಮಾರ್ಗಸೂಚಿಯಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಕಳೆದ 72 ಗಂಟೆಗಳ ಒಳಗಾಗಿ ಪಡೆದ ನೆಗೆಟಿವ್‌ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಾದ್ಯಂತ … Continued

ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೆ ಪರ್ಮಿಟ್‌ ಇದೆ

ಬೆಳಗಾವಿ: ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೂ ಪರ್ಮಿಟ್‌ ಇದ್ದು, ಯಾವುದೇ ಬಸ್‌ಗಳು ಅನಧಿಕೃತವಾಗಿ ಸಂಚಾರ ಮಾಡುತ್ತಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಡಿಸಿ ಎಂ.ಆರ್‌.ಮುಂಜಿ ತಿಳಿಸಿದ್ದಾರೆ. ನಮ್ಮ ಸಾರಿಗೆ ಬಸ್‌ಗಳು ಶುಚಿಯಾಗಿವೆ. ಇದರಿಂದಾಗಿ ಹೆಚ್ಚಿನ ಪ್ರಯಾಣಿಕರು ನಮ್ಮ ಬಸ್‌ಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಸಾರಿಗೆ ಅಧಿಕಾರಿಗಳು ಅಸಮಾಧಾನದಿಂದ ಶಿವಸೇನೆ ಪತ್ರವನ್ನು ಉಲ್ಲೇಖಿಸಿ ನಮಗೆ … Continued