ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಬೆಳಗಾವಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಳಗಾವಿ : ಬೆಳಗಾವಿ ಪ್ರವೇಶಿಸುವ ಕೋಟೆ ಕೆರೆಯ ದಡದಲ್ಲಿ ಕುಳಿತಿದ್ದವರನ್ನು ಶೆಡ್ ನೊಳಗೆ ಕೂಡಿಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ನಶೆಯಲ್ಲಿ ಏಳು ಜನ ಅನ್ಯಕೋಮಿನ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಯಮನಪುರದ ಸಚಿನ್ ಲಮಾಣಿ (22), ಮುಸ್ಕಾನ್ ಪಟೇಲ್ (23) … Continued

ಬೆಳಗಾವಿ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಆರೋಪಿ ಬಂಧನ

ಬೆಳಗಾವಿ : ಕುಡುಗೋಲಿನಿಂದ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸುರ್ತೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಂಗನವಾಡಿ ಮಕ್ಕಳು ತನ್ನ ಮನೆಯ ಹೂವುಗಳನ್ನು ಕಿತ್ತಿದ್ದಾರೆಂದು ಕೋಪಗೊಂಡ ಮನೆಯ ಮಾಲೀಕ ಕಲ್ಯಾಣಿ ಜ್ಯೋತಿಬಾ ಮೋರೆ ಎಂಬಾತ ಜಗಳ ತೆಗೆದು ಕುಡುಗೋಲಿನಿಂದ … Continued

ಬೆಳಗಾವಿ : ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಮನೆ ಮಾಲೀಕ…!

ಬೆಳಗಾವಿ : ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಹೂವು ಕಿತ್ತಿದ್ದಾರೆ ಎಂಬ ಕಾರಣಕ್ಕೆ ಸಹಾಯಕಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಅವರ ಮೂಗನ್ನು ಕತ್ತರಿಸಿದ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಎಂಬವರ ಮೇಲೆ ಹಲ್ಲೆ ನಡೆಸಿ ಮೂಗು ಕತ್ತರಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ … Continued

ಬೆಳಗಾವಿ: ಹೊಸ ವರ್ಷದಂದೇ ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿಯಲ್ಲಿ ಹೊಸ ವರ್ಷದ ಸಂದರ್ಭದಲ್ಲೇ ಕಿಡಿಗೇಡಿಗಳು ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಮಧ್ಯರಾತ್ರಿ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ … Continued

ಗೋಕಾಕ : ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನ್ಸ್ಟೇಬಲ್ ಅಮಾನತು

ಬೆಳಗಾವಿ : ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆಳಗಾವಿಯಲ್ಲಿ ಪೊಲೀಸರೇ ಹೆಲ್ಮೆಟ್ ಹಾಕುವುದಿಲ್ಲ ಎಂದು ಸಾರ್ವಜನಿಕರಿಂದ ಆರೋಪ ಬಂದಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಶಂಕರ ಗುಳೇದ ಅವರು, ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ … Continued

ಬೆಳಗಾವಿ: ಮಹಿಳೆ ವಿವಸ್ತ್ರ ಪ್ರಕರಣ; ಘಟನೆ ತಡೆಯಲು ಯತ್ನಿಸಿದವರಿಗೆ ಸನ್ಮಾನ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯನ್ನು ತಡೆಯಲು ಯತ್ನಿಸಿದ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ ಮೂವರಿಗೆ ಸನ್ಮಾನ ಮಾಡಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣವನ್ನು ತಕ್ಷಣ ತಡೆಯಲು ಸ್ಥಳೀಯರು ಯತ್ನಿಸಿದ್ದರು. ಕೂಡಲೇ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನೂ ನೀಡಿದ್ದರು. ಅಮಾನುಷ … Continued

ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ಸಾಮೂಹಿಕ ಜವಾಬ್ದಾರಿ ನಿಗದಿಗೆ ಹೈಕೋರ್ಟ್ ಸಲಹೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದ ಮಹಿಳೆಯರ ವಿವಸ್ತ್ರ ಪ್ರಕರಣದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಮೌಖಿಕವಾಗಿ ಸಲಹೆ ನೀಡಿದೆ. ಅಲ್ಲದೆ, ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಮಹಿಳೆಯ ವಿವಸ್ತ್ರ ಘಟನೆ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಅರ್ಜಿಯ … Continued

ಗೋಕಾಕ | ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯ

ಬೆಳಗಾವಿ : ರಾತ್ರಿ ವೇಳೆ ಸಿಲಿಂಡರ್ ಸ್ಪೋಟಗೊಂಡು 7 ಜನರಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಈ ಘಟನೆಯಲ್ಲಿ 9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿವೆ. … Continued