ಬೈಲಹೊಂಗಲ ಎಸಿ ಕಚೇರಿಯ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

ಬೆಳಗಾವಿ: 60 ಸಾವಿರ ರೂ. ಲಂಚ ಪಡೆಯುತ್ತಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮದುರ್ಗ ತಾಲೂಕು ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ವ್ಯಕ್ತಿಯೊಬ್ಬರು ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜನಾಥ ಅಂಗಡಿ ಅವರು 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ … Continued

ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ರೆ ಪಿಐಎಲ್‌ ಸಲ್ಲಿಕೆ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಬೆಳಗಾವಿ : ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ … Continued

ಬೆಳಗಾವಿ : ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ ಜವಳಕರ ಬಂಧನ

 ಬೆಳಗಾವಿ : ಮೊಬೈಲ್ ಟವರ್ ವಿಷಯವಾಗಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ ಜವಳ್ಕರ್‌ ಅವರನ್ನು ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಅವರ ಬಂಧನಕ್ಕೆ ಒತ್ತಾಯಿಸಿ ಎಂಇಎಸ್ ಮುಖಂಡ ರಮಾಕಾಂತ ಕೊಂಡುಸ್ಕರ ಅವರ ನೇತೃತ್ವದಲ್ಲಿ ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ನಂತರ ಅಭಿಜಿತ್ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಭಾಗ್ಯನಗರದಲ್ಲಿ … Continued

ಅಥಣಿ : ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಚಿಕ್ಕಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಪಂಪ್ ಸೆಟ್ ಬಂದ್ ಮಾಡಲು ತೆರಳಿದ್ದ ತಂದೆ-ಮಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32 )ಮತ್ತು ಅವರ ಪುತ್ರ ಪ್ರೀತಂ ಮಲ್ಲಿಕಾರ್ಜುನ ಪೂಜಾರಿ (6) ಎಂದು ಗುರುತಿಸಲಾಗಿದೆ. ಪ್ರೀತಂ ಅಥಣಿಯ ಶಾರದಾ ಮಾತಾ ವಿದ್ಯಾಲಯದ ಒಂದನೇ ತರಗತಿ … Continued

ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ … Continued

ಗೋವಾದಿಂದ ಬೆಳಗಾವಿಗೆ ತರುತ್ತಿದ್ದ 25 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

ಬೆಳಗಾವಿ :ಗೋವಾದಿಂದ ಬೆಳಗಾವಿಗೆ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 25 ಲಕ್ಷ ಅಕ್ರಮ ಮದ್ಯವನ್ನು ಬೆಳಗಾವಿಯ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಈ ಸಂಬಂಧ ಬಿಹಾರದ ಸುಬೋಧ ಮಹತೊ ಎಂಬಾತನನ್ನು ಬಂಧಿಸಿದ್ದಾರೆ. ಗೋವಾದಿಂದ ಬೆಳಗಾವಿಗೆ ತರುತ್ತಿದ್ದ ಲಾರಿಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದಾಗ ಅದರಲ್ಲಿ 90 ಬಾಕ್ಸ್ ನಲ್ಲಿದ್ದ … Continued

ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ: ಬೆಳಗಾವಿಯಲ್ಲಿ ನವೆಂಬರ್‌ 21ರಂದು ಉದ್ಘಾಟನೆ

ಬೆಳಗಾವಿ/ಶಿರಸಿ: ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ಬೆಳಗಾವಿಯಲ್ಲಿ ಇದೇ ನ.21ರಂದು ಉದ್ಘಾಟನೆಯಾಗಲಿದೆ. ಕಳೆದ ಹದಿನೇಳು ವರ್ಷಗಳಿಂದ ನಿರಂತರವಾಗಿ ಭಗವದ್ಗೀತಾ ಅಭಿಯಾನ‌ ನಡೆಸಿಕೊಂಡು ಬರುತ್ತಿರುವ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನವು ಬೆಳಗಾವಿಯ ಭಗವದ್ಗೀತಾ ಅಭಿಯಾನದ ಸಹಕಾರದಲ್ಲಿ ಗೀತಾ ಅಭಿಯಾನಕ್ಕೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಾಲನೆ‌ ನೀಡಲಿದೆ. ಸಮಾರಂಭವು ಅನಗೋಳದ ಸಂತ ಮೀರಾ ಶಾಲೆಯ ‌ಮಾಧವ ಸಭಾಗೃಹದಲ್ಲಿ ನಡೆಯಲಿದೆ. ಸೋಂದಾ … Continued

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಬಂಧನ

ಉಡುಪಿ: ಮಲ್ಪೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ ಚೌಗಲೆ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ, ಆತನ ಮೊಬೈಲ್ ಟವರ್ ಲೊಕೇಶನ್ … Continued

ಖಾನಾಪುರ: ಡೀಪ್ ಫೇಕ್ ಪ್ರಕರಣ ಬೆಳಕಿಗೆ ; ಆರೋಪಿ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲೂ ಡೀಪ್ ಫೇಕ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ (Deepfake)​ ಮೂಲಕ ಯಾರದೋ ನಗ್ನ ಚಿತ್ರಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ ಮಾಡಿದ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಫೋಟೋ ಈ ರೀತಿ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ​ (22) … Continued

ಕನ್ನಡ ಸ್ವಾಮೀಜಿ ಖ್ಯಾತಿಯ ಚಿಂಚಣಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ : ಗಡಿ ಭಾಗದಲ್ಲಿ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ (ನವೆಂಬರ್‌ 12) ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಅವರು ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued