ಗೋಕಾಕ; ದಾಖಲೆಯಿಲ್ಲದ 65 ಲಕ್ಷ ರೂ. ವಶ

ಬೆಳಗಾವಿ : ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚೆಕ್ ಪೋಸ್ಟ್ ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 65 ಲಕ್ಷ ರೂ.ಗಳು ಇರುವುದು ಕಂಡು ಬಂದಿದೆ. ಈ ಸಂಬಂಧ ಚುನಾವಣಾ ಅಧಿಕಾರಿಗಳು ಹಣ ಮತ್ತು ಹಣವನ್ನು … Continued

ಹಿರೇಬಾಗೇವಾಡಿ ಟೋಲ್ ಗೇಟಿನಲ್ಲಿ ದಾಖಲೆರಹಿತ 2 ಕೋಟಿ ರೂ. ನಗದು ವಶ

ಬೆಳಗಾವಿ : ಸೂಕ್ತ ದಾಖಲೆಗಳಿಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ನಸುಕಿನಜಾವ 3:30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್‌ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ತಪಾಸಣೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ. … Continued

ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಧ್ವಜ ಹಿಡಿದಿದ್ದ ಯುವಕನ ಮೇಲೆ ಹಲ್ಲೆ

ಬೆಳಗಾವಿ : ರಾಮನವಮಿ ಮೆರವಣಿಗೆ ವೇಳೆ ನಗರದ ಟಿಳಕಚೌಕ ಬಳಿಯ ರಾಮಲಿಂಗಖಿಂಡಗಲ್ಲಿಯ ಶಿವಸೇನೆ ಕಚೇರಿ ಎದುರು ಮೆರವಣಿಗೆ ಹೋಗುವಾಗ ಯುವಕನ ಮೇಲೆ ಗುರುವಾರ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಯುವಕ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಾರಿಸಿದ್ದಾನೆ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ನಗರದ ತಿಲಕ ಚೌಕ್‌ ಬಳಿ ರಾಮನವಮಿ ಮೆರವಣಿಗೆ ವೇಳೆ ನೂರಾರು … Continued

ಕಾಂಗ್ರೆಸ್ 4ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ; ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಘೋಷಿಸಿದ ರಾಹುಲ್‌ ಗಾಂಧಿ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ಮಾಸಿಕ 3,000 ರೂ. ಮತ್ತು ಡಿಪ್ಲೋಮಾ ಕೋರ್ಸ್‌ ಮುಗಿಸಿದವರಿಗೆ ತಿಂಗಳಿಗೆ 1,500 ರೂ. ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಅವರು ನಿರುದ್ಯೋಗಿ ಯುವಕರಿಗಾಗಿ ʼಯುವ ನಿಧಿʼ ಎಂಬ ಪಕ್ಷದ … Continued

ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

ಬೆಳಗಾವಿ : ಯುವ ಕ್ರಾಂತಿ ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಕಾರ್ಯಕ್ರಮ ಆಯೋಜಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದಿನಂತೆ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಡಾ. … Continued

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್​ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ … Continued

ಬೈಲಹೊಂಗಲ : ಹೊಲದಲ್ಲಿ ದೊಡ್ಡ ಬಲೂನ್ ಪತ್ತೆ, ಅದರೊಳಗಿತ್ತು ಎಲೆಕ್ಟ್ರಾನಿಕ್ ವಸ್ತು, ಬ್ಯಾಟರಿ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ‌ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಬೃಹತ್‌ ಬಲೂನ್ ಪತ್ತೆಯಾಗಿದ್ದು, ಅದರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಕಂಡುಬಂದಿದ್ದರಿಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗದ್ದಿಕರವಿನಕೊಪ್ಪ ಗ್ರಾಮದ ಹೊಲದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಈ ಬಲೂನ್ ಬಂದು ಬಿದ್ದಿತ್ತು.‌ ಕೂಡಲೇ ಗ್ರಾಮಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಬಂದು ಪರಿಶೀಲನೆ ನಡೆಸಿದರು. … Continued

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಬಳಿ ಮೂವರು ಹೆಣ್ಣುಮಕ್ಕಳಿಗೆ ವಿಷ ಕುಡಿಸಿ, ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ…!

ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ಜೀವನ ನಿರ್ವಹಣೆ ಸಂಕಷ್ಟದ ಕಾರಣದಿಂದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ. ಜಿಲ್ಲೆಯ ಬೈಲಹೊಂಗಲ ಜನತಾ ಫ್ಲ್ಯಾಟ್‌ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಹೇಳಲಾಗಿದೆ. ಈ ಮಹಿಳೆ ಜೊತೆ ಜಿಲ್ಲಾಧಿಕಾರಿ … Continued

ಬೆಳಗಾವಿ : ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ : ಬೆಳಗಾವಿ ತಾಲೂಕು ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಡಬೇಕು ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರ ಕನಸು ಈಡೇರಿದೆ. ಗುರುವಾರ ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಛತ್ರಪತಿ ಮಹಾರಾಜರ ಮೂರ್ತಿಯನ್ನು ಅನಾವರಣ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಚ್ 5 … Continued

ನಿಮ್ಮ ಪ್ರೀತಿಯ ಋಣ ತೀರಿಸುವೆ : ಬೆಳಗಾವಿಯಲ್ಲಿ 2240 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ-ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿ ಭರವಸೆ

ಬೆಳಗಾವಿ : ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೆಳಗಾವಿಯ ಜನರು ನೀಡಿದ … Continued