ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ಸಾಮೂಹಿಕ ಜವಾಬ್ದಾರಿ ನಿಗದಿಗೆ ಹೈಕೋರ್ಟ್ ಸಲಹೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದ ಮಹಿಳೆಯರ ವಿವಸ್ತ್ರ ಪ್ರಕರಣದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಮೌಖಿಕವಾಗಿ ಸಲಹೆ ನೀಡಿದೆ. ಅಲ್ಲದೆ, ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಮಹಿಳೆಯ ವಿವಸ್ತ್ರ ಘಟನೆ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಅರ್ಜಿಯ … Continued

ಗೋಕಾಕ | ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯ

ಬೆಳಗಾವಿ : ರಾತ್ರಿ ವೇಳೆ ಸಿಲಿಂಡರ್ ಸ್ಪೋಟಗೊಂಡು 7 ಜನರಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಈ ಘಟನೆಯಲ್ಲಿ 9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿವೆ. … Continued

ಮಹಿಳೆ ವಿವಸ್ತ್ರ ಪ್ರಕರಣ : ಸರ್ಕಾರವೇ ಬೆಳಗಾವಿಯಲ್ಲಿದ್ರೂ ಸಿಎಂ, ಡಿಜಿಪಿ ಸಂತ್ರಸ್ತೆಯನ್ನು ಯಾಕೆ ಭೇಟಿಯಾಗಿಲ್ಲ-ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ

ಬೆಳಗಾವಿ: ಸಂಪೂರ್ಣ ಆಡಳಿತವೇ ಬೆಳಗಾವಿಯಲ್ಲಿದ್ದರೂ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಯಾಕೆ ಭೇಟಿ ನೀಡಿಲ್ಲ? ಸಂತ್ರಸ್ತೆಯನ್ನು ಯಾಕೆ ಭೇಟಿಯಾಗಿಲ್ಲ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ … Continued

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ … Continued

ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವರ ಭೇಟಿ, 7 ಮಂದಿ ಬಂಧನ

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ​ ಅವರು ಹೇಳಿದ್ದಾರೆ. ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ … Continued

ಭಗವದ್ಗೀತೆಯ ಪ್ರಧಾನ ವಿಷಯವೇ ಮೈಂಡ್ ಮ್ಯಾನೇಜ್ಮೆಂಟ್ : ಸ್ವರ್ಣವಲ್ಲೀ ಶ್ರೀಗಳು

  ಬೆಳಗಾವಿ: ಭಗವದ್ಗೀತೆಯ ಪ್ರಧಾನ ವಿಷಯವೇ ಮನಸ್ಸಿನ ನಿಯಂತ್ರಣ ಅಥವಾ ಮೈಂಡ್ ಮ್ಯಾನೇಜ್ಮೆಂಟ್. ಮನಸ್ಸನ್ನು ಸರಿಯಾಗಿ ನಿಯಂತ್ರಿಸುವವನು ಉತ್ತಮ ಮ್ಯಾನೇಜರ್ ಆಗಲು ಸಾಧ್ಯ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ. ಇಲ್ಲಿಯ ಭರತೇಶ್ ಗ್ಲೋಬಲ್ ಬಿಸಿನೆಸ್ ಸ್ಕೂಲ್ ಆವರಣದಲ್ಲಿ ಶನಿವಾರ ನಡೆದ ಭಗವದ್ಗೀತೆ ಮತ್ತು ಮ್ಯಾನೇಜ್ಮೆಂಟ್‌ ಎಂಬ ವಿಚಾರಸಂಕಿರಣದಲ್ಲಿ ಮಾತನಾಡಿದ … Continued

ಬೆಳಗಾವಿ ಬಳಿ ಭೀಕರ ಅಪಘಾತ : ಇಬ್ಬರು ಸಜೀವ ದಹನ

ಬೆಳಗಾವಿ: ದೇವಗಿರಿ ಹಾಗೂ ಬಂಬರಗಾ ಗ್ರಾಮಗಳ ಮಧ್ಯೆ ಇರುವ ಸರ್ಕಲ್ ನಲ್ಲಿ ಟಿಪ್ಪರ್- ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ವರ್ಷದ ಬಾಲಕಿ, 26 ವರ್ಷದ ಯುವಕ ಕಾರಿನಲ್ಲೇ ಸಜೀವ ದಹನವಾಗಿದ್ದಾರೆ. ಬುಧವಾರ ರಾತ್ರಿ 10 : 30 ಗಂಟೆ ಸುಮಾರಿಗೆ ಕಂಗ್ರಾಳಿ ಕೆ.ಎಚ್. ಗ್ರಾಮದ ಕಡೆಯಿಂದ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಕಾರಿನಲ್ಲಿ ಸ್ವಗ್ರಾಮ … Continued

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ : ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ ಯತ್ನಾಳ

ಬೆಳಗಾವಿ : ವಿಧಾನಸಭೆಯ ವಿಪಕ್ಷದ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ಆಗ್ರಹಿಸಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ … Continued

ಬೈಲಹೊಂಗಲ ಎಸಿ ಕಚೇರಿಯ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

ಬೆಳಗಾವಿ: 60 ಸಾವಿರ ರೂ. ಲಂಚ ಪಡೆಯುತ್ತಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮದುರ್ಗ ತಾಲೂಕು ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ವ್ಯಕ್ತಿಯೊಬ್ಬರು ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜನಾಥ ಅಂಗಡಿ ಅವರು 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ … Continued