ಸವದತ್ತಿ | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಎಂದು ಗುರುತಿಸಲಾಗಿದೆ. ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ … Continued

ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued

ಸವದತ್ತಿ | ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಆಸ್ಪತ್ರೆಗೆ ದಾಖಲು; ನೀರಿಗೆ ಕೀಟನಾಶಕ ಬೆರಕೆಯಾದ ಶಂಕೆ

ಬೆಳಗಾವಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಾಲೆಯ ಆವರಣದಲ್ಲಿರುವ ಟ್ಯಾಂಕಿಗೆ ಅಪರಿಚಿತ ವ್ಯಕ್ತಿಗಳು ಕೀಟನಾಶಕ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೆ ಈ ಶಾಲೆಯ ಪಕ್ಕದಲ್ಲೇ … Continued

ಬೆಳಗಾವಿ : 5 ಸಾವಿರ ರೂಪಾಯಿಗಾಗಿ ಯುವ ಗಾಯಕನ ಭೀಕರ ಹತ್ಯೆ

ಬೆಳಗಾವಿ : ಕೇವಲ 5000 ರೂಪಾಯಿಗಾಗಿ ಯುವ ಗಾಯಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 22 ವರ್ಷದ ಯುವಕ ಮಾರುತಿ ಅಡಿವೆಪ್ಪ ಲಠ್ಠೆ (22) ಎಂದು ಗುರುತಿಸಲಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುವ ಮೂಲಕ ಇವರು … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ಬೆಳಗಾವಿಯಲ್ಲಿ ಮನಕಲಕುವ ಘಟನೆ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಪುತ್ರಿ ಸ್ಥಿತಿ ಗಂಭೀರ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ವಿಷಸೇವಿಸಿದ ನಂತರ ಮೂವರು ಸಾವಿಗೀಡಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. … Continued

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ಮಹಾಲಕ್ಷ್ಮೀ ಜಾತ್ರೆಯಲ್ಲಿ ಜನಸಂದಣಿಯ ಮಧ್ಯೆಯೇ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಶಕದ ಬಳಿಕ ಗೋಕಾಕದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. … Continued

ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಹೆಚ್ಚುವರಿ ಎಸ್‌ಪಿ ಎನ್.ವಿ.ಭರಮನಿ

ಬೆಳಗಾವಿ/ಧಾರವಾಡ: ಧಾರವಾಡ ಹೆಚ್ಚುವರಿ ಎಸ್‌ಪಿ ಎನ್.ವಿ. ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅವರು ಸ್ವಯಂ ನಿವೃತ್ತಿ ಕೋರಿ ಸುಮಾರು ಒಂದು ತಿಂಗಳ ಹಿಂದೆಯೇ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಸ್ವಯಂಪ್ರೇರಿತ ನಿವೃತ್ತಿಗೆ ಭರಮನಿ ಅವರು ಅರ್ಜಿ ಸಲ್ಲಿಸಿದ್ದರೂ ಈ ಬಗ್ಗೆ ಇಲಾಖೆ ಇನ್ನೂ ನಿರ್ಧರಿಸಬೇಕಿದೆ. ಹಿರಿಯ ಅಧಿಕಾರಿಗಳು ಸ್ವಯಂ … Continued

ಬೆಳಗಾವಿ | ಮರಕ್ಕೆ ಕಟ್ಟಿ ಐವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ಥಳಿತ

ಬೆಳಗಾವಿ : ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ಯುವಕರ ಗುಂಪು ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿವೆ. ಗೋ ಸಾಗಣೆ ತಡೆಯಲು ಮುಂದಾಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಘಟನೆಗೂ ಗೋ ರಕ್ಷಣೆಗೂ … Continued

ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued