ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

ಬೆಳಗಾವಿ : ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ … Continued

ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ … Continued

ಬೈಲಹೊಂಗಲ | ಭೀಕರ ರಸ್ತೆ ಅಪಘಾತ; ಮಗು ಸೇರಿ ಸ್ಥಳದಲ್ಲೇ ಮೂವರು ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟವರು … Continued

ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಜಾಗತಿಕ ಟೆಕ್ ದೈತ್ಯ ಇಂಟೆಲ್ ಕಂಪನಿ ಸಿಟಿಒ, ಎಐ (AI) ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ನೇಮಕ

ಬೆಳಗಾವಿ: ಜಾಗತಿಕ ಟೆಕ್ ದೈತ್ಯ ಹಾಗೂ ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕ ಮೂಲದ ಇಂಟೆಲ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ (CTO) ಹಾಗೂ ಆ ಕಂಪನಿಯ ಕೃತಕ ಬುದ್ಧಿಮತ್ತೆ (AI) ವಿಭಾದ ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ಅವರು ನೇಮಕವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂಟೆಲ್‌ (Intel)ಕಂಪನಿಯ ಸಿಇಒ ಲಿಪ್ ಬೂ ಟಾನ್ ಅವರು … Continued

ಪ್ಲೀಸ್ ಪಾಸ್ ಮಾಡಿ, ನನ್ನ ಲವ್ ನಿಮ್ಮ ಕೈಯಲ್ಲಿದೆ : ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಮನವಿ…!

ಬೆಳಗಾವಿ : ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟು ಬರೆದ ಪತ್ರಗಳು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯೊನ್ನ ತನ್ನ ಉತ್ತರ ಪತ್ರಿಕೆಗಳ ಒಳಗೆ ನಗದು ಹಣ ಮತ್ತು ತನ್ನ “ಪ್ರೇಮ”ದ ಬಗ್ಗೆಯೂ ಬರೆದು ತನ್ನನ್ನು ಪಾಸ್‌ ಮಾಡುವಂತೆ ವಿನಂತಿಸಿಕೊಂಡಿದ್ದಾನೆ. … Continued

ಬೆಳಗಾವಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಬೆಳಗಾವಿ: ಇಲ್ಲಿಯ ಹೊಸ ಗಾಂಧಿ ನಗರದಲ್ಲಿ ಬುಧವಾರ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ಸರವಿ (38) ಮತ್ತು ಶಿವಲಿಂಗ ಸರವಿ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಈ … Continued

ಬೆಳಗಾವಿ | ಹಳಿ‌ ತಪ್ಪಿದ ಗೂಡ್ಸ್ ರೈಲು

ಬೆಳಗಾವಿ: ಮೀರಜ್ ಗೆ ತೆರಳುತ್ತಿದ್ದ ಗೂಡ್ಸ್ ರೈಲಿನ ಎರಡು ಬೋಗಿಗಳು ಪಲ್ಟಿಯಾಗಿರುವ ಘಟನೆ ಬೆಳಗಾವಿ ಮಿಲಿಟರಿ ಮಹಾದೇವ ದೇವಸ್ಥಾನದ ಬಳಿ ಇರುವ ರೈಲ್ವೆ ಹಳಿಯಲ್ಲಿ ಮಂಗಳವಾರ ನಡೆದಿದೆ. ಜಿಂದಾಲ್‌ ಫ್ಯಾಕ್ಟರಿಯ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಗೆ ಹೊರಟಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ರೈಲು ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಸುಮಾರು 3 ರಿಂದ 4 … Continued

ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ

ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ … Continued

ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued