ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ಬೆಳಗಾವಿ: ಅಕ್ರಮ ಗೋವು ಸಾಗಣೆ ಆರೋಪ ; ಲಾರಿ ಚಾಲಕನಿಗೆ ಥಳಿತ

ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಗೋವುಗಳನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ತಡೆದ ಹಿಂದೂಪರ ಸಂಘಟನೆ ಕಾರ್ಯಕರ್ತರು ಚಾಲಕನನ್ನು ತಡೆದು ಥಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಆಧರಿಸಿ  ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಲಾರಿಯನ್ನು ತಡೆದು ಚಾಲಕನನ್ನು ವಿಚಾರಿಸಿದ್ದಾರೆ. ಈ ಬಗ್ಗೆ … Continued

ಬೆಳಗಾವಿ: ನಡು ರಸ್ತೆಯಲ್ಲೇ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಳಗಾವಿ : ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಅವರು ಖೀಳೆಗಾಂವ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಹಾಗೂ ಶಾಸಕ ಲಕ್ಷ್ಮಣ ಸವದಿ ಆಪ್ತರಾಗಿದ್ದರು. … Continued

ನಿಪ್ಪಾಣಿ : 101 ವರ್ಷಗಳ ಹಳೆಯ ನಿಪ್ಪಾಣಿ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

 ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಪತ್ರ ಬರೆಯಲಾಗಿದೆ. ನಿಪ್ಪಾಣಿ ಹಳೆ ಪಿಬಿ ರಸ್ತೆಯ ರಾಮಮಂದಿರ ಇದಾಗಿದ್ದು, ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದೆ. ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ … Continued

ಸ್ವರ್ಣವಲ್ಲೀ ಶ್ರೀಗಳಿಗೆ ‘ಗೀತಾಭಿಯಾನಾರ್ಣವ’ ಬಿರುದು ಪ್ರದಾನ

ಶಿರಸಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ, ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ … Continued

ಬೆಳಗಾವಿಯಲ್ಲಿ ಭಗವದ್ಗೀತೆ ಅಭಿಯಾನಕ್ಕೆ ವಿಧ್ಯುಕ್ತ ಚಾಲನೆ : ಭಗವದ್ಗೀತೆ ಧರ್ಮಗ್ರಂಥವಷ್ಟೇ ಅಲ್ಲ, ಚಿತ್ತಸ್ವಾಸ್ಥ್ಯದ ಗ್ರಂಥವೂ ಹೌದು- ಸ್ವರ್ಣವಲ್ಲೀ ಸ್ವಾಮೀಜಿ

ಬೆಳಗಾವಿ : ಸ್ವಸ್ಥವಾದ ಮನಸ್ಸಿನ ತಳಹದಿಯ ಮೇಲೆ ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯೆಂಬ ನಾಲ್ಕು ಸ್ಥಂಭಗಳನ್ನು ನಿರ್ಮಿಸಿ ಅದರ ಮೇಲೆ ಆದರ್ಶ ಸಮಾಜವೆಂಬ ಭವನ ನಿರ್ಮಿಸುವುದು ಭವದ್ಗೀತಾ ಅಭಿಯಾನದ ಉದ್ದೇಶವಾಗಿದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ನಗರದ ಸಂತಮೀರಾ ಶಾಲೆಯ ಮಾಧವ ಸಭಾಗೃಹದಲ್ಲಿ ಮಂಗಳವಾರ … Continued

ಕಾಮಗಾರಿ ಬಿಲ್ ಬಾಕಿ ಬೆಳಗಾವಿ ಪಿಡಬ್ಲ್ಯುಡಿ ಕಚೇರಿ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ

ಬೆಳಗಾವಿ: ಲೋಕೋಪಯೋಗಿ ಇಲಾಖೆಯಲ್ಲಿ ಮಾಡಿದ ಕಾಮಗಾರಿಗಳ ಬಿಲ್‌ ಬಾಕಿ ಉಳಿಸಿಕೊಂಡ ಕಾರಣಕ್ಕೆ, ಗುತ್ತಿಗೆದಾರ ಒಬ್ಬರು ಇಲ್ಲಿನ ಪಿಡಬ್ಲ್ಯುಡಿ ಕಚೇರಿ ಆವರಣದಲ್ಲಿ ಬುಧವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳಗಾವಿ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಗೆ ಬಂದ ನಾಗಪ್ಪ ಭಾಂಗಿ ಎಂಬವರು ಕಾರ್ಯಪಾಲಕ ಎಂಜಿನಿಯರ್‌ ಎದುರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸುತ್ತ ಇದ್ದ ಕೆಲವರು … Continued

ಬೈಲಹೊಂಗಲ : ವಿದ್ಯುತ್‌ ಅವಘಡ ; ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕು ಉಡಿಕೇರಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಂದೆ-ಮಗ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪ್ರಭಾಕರ ಹುಂಬಿ (71) ಮತ್ತು ಮಂಜುನಾಥ ಹುಂಬಿ(31)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರಭಾಕರ ಅವರು ಶುಕ್ರವಾರ ಬೆಳಗ್ಗೆ ದನದ ಕೊಟ್ಟಿಗೆಗೆ ಹೋಗಿ ಆಕಳಿಗೆ ಅಹಾರ ನೀಡಿದ್ದಾರೆ. ನಂತರ ಹೊರಗೆ ವಿದ್ಯುತ್ ಕಂಬ ಸ್ಪರ್ಷವಾಗಿದೆ. ಆಗ ಅವರಿಗೆ ವಿದ್ಯುತ್ … Continued

ಬೆಳಗಾವಿ : ವಿದ್ಯುತ್ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ವಿದ್ಯುತ್ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವು ಬೆಳಗಾವಿ: ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಸ್ಥಳದಲ್ಲೆ ಮೃತಪಟ್ಟ ಘಟನೆ ಬೆಳಗಾವಿ ಶಾಹುನಗರದಲ್ಲಿ ಇಂದು, ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬೆಳಗಾವಿಯ‌ ಶಾಹು ನಗರದ 7ನೇ ಕ್ರಾಸ್‌ನ ನಿರ್ಮಾಣ ಹಂತದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತರನ್ನು ಈರಪ್ಪ ರಾಠೋಡ (53), ಶಾಂತವ್ವ … Continued

ನಿಪ್ಪಾಣಿ : ಮೊಬೈಲ್​ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ. ಮೃತನನ್ನು ಆಕಾಶ ಶಿವದಾಸ ಸಂಕಪಾಳ (27) ಎಂದು ಗುರುತಿಸಲಾಗಿದೆ. ಈತ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ಮೃತ ಪಟ್ಟಿದ್ದಾನೆ ಎಂದು … Continued