ಬೈಲಹೊಂಗಲ : ಮಲಪ್ರಭಾ ನದಿ ತೀರದಲ್ಲಿ ಕಾಣಿಸಿಕೊಂಡ ಬೃಹತ್‌ ಮೊಸಳೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಮಾಟೊಳ್ಳಿ, ಲಿಂಗದಳ್ಳಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಇದೀಗ ಬೃಹತ್ ಗಾತ್ರದ ಮೊಸಳೆ ಕಂಡು ಬಂದಿದೆ. ಇದರಿಂದ ನದಿತೀರದ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಬೆಳಗಾವಿ (Belagavi) ಜಿಲ್ಲೆಯ ಸಪ್ತ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರೊಟ್ಟಿಗೆ ಮೊಸಳೆಗಳು ಬರುತ್ತಿವೆ. … Continued

ವ್ಯಾಪಕ ಮಳೆ : 1 ತಾಲೂಕು ಹೊರತುಪಡಿಸಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ (ಜುಲೈ 27) ರಜೆ ಘೋಷಣೆ

ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಮಳೆಯ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು … Continued

ಭಾರಿ ಮಳೆ: ಬೆಳಗಾವಿ ಜಿಲ್ಲೆಯ ಇನ್ನೂ 4 ತಾಲೂಕಿನ ಶಾಲೆಗಳಿಗೆ ನಾಳೆ (ಜು. 26) ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಕೆಲ ತಾಲೂಕುಗಳಿಗೆ ಶುಕ್ರವಾರ (ಜುಲೈ 26 ) ರಜೆ ಘೋಷಿಸಲಾಗಿದೆ. ಜಿಲ್ಲೆಯ ಗೋಕಾಕ, ಮೂಡಲಗಿ , ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶುಕ್ರವಾರ (ಜುಲೈ 26) ರಜೆ ಘೋಷಿಸಿ … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಬೆಳಗಾವಿ : ವೈದ್ಯಕೀಯ ಸೀಟ್‌ ವಂಚನೆ ಜಾಲ ಪತ್ತೆ , ಪ್ರಮುಖ ಆರೋಪಿ ಬಂಧಿಸಿದ ಪೊಲೀಸರು

 ಬೆಳಗಾವಿ: ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವೊಂದನ್ನು ಬೆಳಗಾವಿ ಪೊಲೀಸರು ಪತ್ತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಾರೋ ಅಂಥವರನ್ನೇ ಗುರಿಯಾಗಿಸಿ ಅವರಿಗೆ ವೈದ್ಯಕೀಯ ಸೀಟ್‌ ಕೊಡಿಸುತ್ತೇನೆ ಎಂದು ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ಬೆಳಗಾವಿ ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ : ಅಲ್ಲಿದ್ದವರಿಂದ ಥಳಿತ

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದಾಗ ಕೈದಿಯೊಬ್ಬ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಾಗ ನಟೋರಿಯಸ್‌ ಪಾತಕಿ ದಕ್ಷಿಣ ಕನ್ನಡ ಮೂಲದ ಜಯೇಶ ಪೂಜಾರಿ ಪಾಕ್‌ ಪರ ಘೋಷಣೆಗಳನ್ನು ಕೂಗಿದ್ದಾನೆ. … Continued

ಬೆಳಗಾವಿಯಲ್ಲಿ ಗುಂಪು ಘರ್ಷಣೆ, ಕಲ್ಲು ತೂರಾಟ

ಬೆಳಗಾವಿ : ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಗುಂಪು ಘರ್ಷಣೆ ನಡೆದು ಕಲ್ಲು ತೂರಾಟವಾದ ಘಟನೆ ಬೆಳಗಾವಿ ಶಹಾಪುರ ಅಳವಾನ್ ಗಲ್ಲಿ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮಕ್ಕಳು ಕ್ರಿಕೆಟ್ ಆಟವಾಡುವಾಗ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ಹೋಗಿ ವಾದ-ವಿವಾದ ಉಂಟಾಗಿದೆ. ಇದರಿಂದ ಎರಡು ಗುಂಪುಗಳ … Continued

ಸವದತ್ತಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 46 ಮಂದಿ ಅಸ್ವಸ್ಥ

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಜಾತ್ರೆಯಲ್ಲಿ ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ತವ್ಯಸ್ಥಗೊಂಡವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಿಸಿ … Continued

ಸಾಲದ ಹಣ ಮರಳಿ ಕೊಡಲು ತಡವಾಗಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ : ಮನನೊಂದು ರೈತ ಆತ್ಮಹತ್ಯೆ

ಬೆಳಗಾವಿ : ಸಾಲ ಮರಳಿಸಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಪತ್ನಿ ಮತ್ತು ಪುತ್ರನನ್ನು ಗೃಹ ಬಂಧನದಲ್ಲಿ ಇರಿಸಿಕೊಂಡಿದ್ದಕ್ಕೆ ಮನನೊಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಇಸ್ಲಾಂಪುರದಲ್ಲಿ ಬೆಳಕಿಗೆ ಬಂದಿದೆ. ರಾಜು ಖೋತಗಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಮೃತ ರಾಜು ಭೀಕರ ಬರದಿಂದ ಬೆಳೆ ನಷ್ಟವಾದ ನಂತರ … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued