ಬೆಳ್ತಂಗಡಿ : ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಗೇರುಕಟ್ಟೆ ಪ್ರದೇಶದಲ್ಲಿ ಅಕ್ಕ-ತಂಗಿಯರಾದ ಇಬ್ಬರು ವಿದ್ಯಾರ್ಥಿನಿಯರು ಬಸ್‌ ಹತ್ತಿದ್ದರು.  … Continued

ಧರ್ಮಸ್ಥಳ ಪ್ರಕರಣ ; ಪೊಲೀಸ್‌ ರಕ್ಷಣೆ ಕೋರಿದ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ, ತನಗೆ ಜೀವ ಬೆದರಿಕೆ ಹಾಕಬಹುದು, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹೇಶ ಶೆಟ್ಟಿ ತಿಮರೋಡಿ, ಗಿರೀಶ … Continued

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಮತ್ತೆ ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ಸಹಾಯಕ ಆಯುಕ್ತರು ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ … Continued

ಧರ್ಮಸ್ಥಳ ಪ್ರಕರಣ : ಸತತ 5 ಗಂಟೆ ಯೂ ಟ್ಯೂಬರ್‌ ಸಮೀರ್‌ ವಿಚಾರಣೆ

ಮಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದ ಯೂಟ್ಯೂಬರ್‌ ಎಂ.ಡಿ. ಸಮೀರ್ ಸತತ 5 ಗಂಟೆ ವಿಚಾರಣೆ ಎದುರಿಸಿದ್ದಾನೆ. ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದಿರುವ ಪೊಲೀಸರು, ಸೋಮವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದಿಬಂದಿದ್ದು, ಮೊಬೈಲ್ ಹಾಗೂ ಯೂಟ್ಯೂಬ್‌ಗೆ ವೀಡಿಯೊ ಅಪ್‌ಲೋಡ್ … Continued

ಗಿರೀಶ ಮಟ್ಟಣ್ಣನವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಗಿರೀಶ ಮಟ್ಟಣ್ಣನವರ ಸೇರಿದಂತೆ ಹಲವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗುರುವಾರ ಮಹೇಶ ಶೆಟ್ಟಿ ತಿಮರೋಡಿ ಬಂಧನ ಮಾಡಲು ಬ್ರಹ್ಮಾವರ ಪೊಲೀಸರು ತಿಮರೋಡಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗಿರೀಶ ಮಟ್ಟಣ್ಣನವರ, ಜಯಂತ ಮತ್ತು ಇತರರು ಪೊಲೀಸರಿಗೆ ಅಡ್ಡಿ ಪಡಿಸಿದ್ದರು. … Continued

ಭಾರಿ ಮಳೆ: ಜೂನ್‌ 26ರಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ ನೀಡಲಾಗಿದೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದು ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ … Continued

ವೇಣೂರು ; ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರು ಪಾಲು

ಮಂಗಳೂರು : ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನದಿ ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು ಎಂದು ಗುರುತಿಸಲಾಗಿದೆ. ವೇಣೂರು … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳುಗಾರಿಗೆ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ‌ ಮುಖಂಡನ ಪರ ಯಾವುದೇ ಅನುಮತಿ … Continued

ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ(79) ಇಂದು, ಬುಧವಾರ (ಏಪ್ರಿಲ್‌  8) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪ್ರಥಮ ಪುತ್ರರಾಗಿ 1946ರ ಜನವರಿ 15ರಂದು ಜನಿಸಿದ ಅವರು … Continued

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು, ಕೆನ್ನೆ ಕಚ್ಚಿ ಮಾಂಸ ಹೊರತೆಗೆದ ಪತಿ…!

ಮಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಮೇಲೆ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿಶಿಲ ಕೋಟೆ ಬಾಗಿಲು ನಿವಾಸಿ ಸುರೇಶ ಗೌಡ ಎಂಬಾತ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ … Continued