ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಬೆಂಗಳೂರು : ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವೀಡಿಯೋ ತಿರುಚಿ ಪ್ರಸಾರ/ ಪ್ರಕಟ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ತಾತ್ಕಾಲಿಕ … Continued

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ- ದೃಶ್ಯ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ

ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಚ್ಛಾಟಿತ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪನವರ ಪುತ್ರ ಕೆ ಇ ಕಾಂತೇಶ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವೀಡಿಯೊ, ಸ್ಕ್ರೀನ್‌ ಶಾಟ್‌ ಅಥವಾ ಅಶ್ಲೀಲ ಆಡಿಯೊಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ಮಧ್ಯಂತರ ಪ್ರತಿಬಂಧಕಾದೇಶ ಮಾಡಿದೆ. ಕೆ.ಇ. ಕಾಂತೇಶ … Continued

ಚೆಕ್‌ ಬೌನ್ಸ್‌ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ ವಿಧಿಸಿದ್ದ ಶಿಕ್ಷೆ ಅಮಾನತು

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್‌ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ. ಮಧು ಬಂಗಾರಪ್ಪ ಅವರು ತಮಗೆ ವಿಧಿಸಲಾಗಿರುವ ದಂಡದ ಮೊತ್ತ ₹6.96 ಕೋಟಿ ಪೈಕಿ ಶೇ. 20ರಷ್ಟು ಹಣವನ್ನು ಒಂದು ತಿಂಗಳ … Continued

ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಐದು ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾ ಮಧ್ಯಂತರ … Continued

ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧ

ಬೆಂಗಳೂರು : ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅಲ್ಲದೇ, 61 ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ಶೀನಪ್ಪ, ಇತರರು ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 11ನೇ ಹೆಚ್ಚುವರಿ … Continued