ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಯೂ ಟ್ಯೂಬ್‌ ವಾಹಿನಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ವಿಧಿಸಿದ್ದ ನಿರ್ಬಂಧ ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನೆಲ್ ಸಲ್ಲಿಸಿದ್ದ ಅರ್ಜಿಯನ್ನು ನೇರವಾಗಿ ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ … Continued

ಧರ್ಮಸ್ಥಳದ ದೇವಸ್ಥಾನ, ಕಾರ್ಯದರ್ಶಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿ ಬೆಂಗಳೂರಿನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಆದೇಶಿಸಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ ಎಂದು … Continued

ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ನ್ಯಾಯಾಲಯ ಮೇ ೮ರ ವರೆಗೆ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ ತಂಡದ) ವಶಕ್ಕೆ ನೀಡಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪುತ್ರ ಹಾಗೂ ಶಾಸಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಹದಿನೇಳನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ ಎಂ … Continued

ಡಿ.ರೂಪಾ ವಿರುದ್ಧ 1 ಕೋಟಿ ರೂ.ಗಳ ರೋಹಿಣಿ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂ.ಗಳನ್ನು ಪರಿಹಾರವಾಗಿ ಕೊಡಿಸಬೇಕು. … Continued

ಐಪಿಎಸ್‌ ಅಧಿಕಾರಿ ಡಿ. ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ

ಬೆಂಗಳೂರು: ತಮ್ಮ ವಿರುದ್ಧ ಮಾನಹಾನಿ ಮಾಡುವ ಸುದ್ದಿಗಳನ್ನು ಪ್ರಸಾರ ಮಾಡದಂತೆ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಪ್ರತಿಬಂಧಕಾದೇಶ ಮಾಡುವಂತೆ ಕೋರಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮೊಕದ್ದಮೆಯ ವಿಚಾರಣೆ ನಡೆಸಿದ ಬೆಂಗಳೂರಿನ ನ್ಯಾಯಾಲಯವು ಗುರುವಾರ (ಫೆಬ್ರವರಿ 23) ಆದೇಶ ಕಾಯ್ದಿರಿಸಿದೆ. ರೋಹಿಣಿ ಸಿಂಧೂರಿ ವಕೀಲ … Continued