ಬೆಂಗಳೂರು : 35 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; 8 ಆರೋಪಿಗಳ ಬಂಧನ

ಬೆಂಗಳೂರು : ಇತ್ತೀಚಿನ ದಿನಗಳಲ್ಲೇ ಬೆಂಗಳೂರಿನಲ್ಲಿ ಅತ್ಯಂತ ಬೃಹತ್ ಎನ್ನಲಾದ ಅಂತರರಾಜ್ಯ ಮಾದಕ ವಸ್ತು ಜಾಲವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್‌ನ ಉತ್ತರ ವಿಭಾಗದ ಪೊಲೀಸರು ನಡೆಸಿದ ಈ ಮಹತ್ವದ ಕಾರ್ಯಾಚರಣೆಯಲ್ಲಿ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಎರಡು ಕಾರುಗಳನ್ನು ಜಪ್ತಿ … Continued

ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನನನ್ನು ಮತ್ತೆ ಬಂಧಿಸಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ಗುರುವಾರ (ಆಗಸ್ಟ್‌ 14) ರದ್ದುಗೊಳಿಸಿದೆ. ಹೈಕೋರ್ಟ್ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ … Continued

ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ   ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ … Continued

ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ

ಬೆಂಗಳೂರು: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ ರಕ್ತದ ಮಡವಿನಲ್ಲಿ ಬಿದ್ದಿರುವ 68 ವರ್ಷದ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ. 1981ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಓಂ ಪ್ರಕಾಶ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು … Continued

ಬೇರೆಯವರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ ಕರೆ ; ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe) ರೀತಿಯಲ್ಲಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಐದು ಜನರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ (Hoax Homb threat) ಹಾಕಿರುವುದಾಗಿ ಆರೋಪಿ ಹೇಳಿದ್ದಾನೆ. ಕಳೆದ ವರ್ಷ ಬೆಂಗಳೂರಿನ … Continued

ವಂಚನೆ ಪ್ರಕರಣ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರನ ಬಂಧನ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಶಾಸಕ ದೇವಾನಂದ ಸಿಂಗ್ ಚವ್ಹಾಣ ಅವರ ಪತ್ನಿ ಸುನಿತಾ ಚವ್ಹಾಣ ಅವರ ದೂರಿನ … Continued

ಮಹಾಲಕ್ಷ್ಮೀ ಬರ್ಬರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ…!

ಬೆಂಗಳೂರು : 29ರ ಹರೆಯದ ಮಹಾಲಕ್ಷ್ಮಿ ಹತ್ಯೆ ಪ್ರಕರಣದ ಪ್ರಮುಖ ಟ್ವಿಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಆಕೆಯ ಸಹೋದ್ಯೋಗಿಯಾಗಿದ್ದ ಪ್ರಧಾನ ಆರೋಪಿ ಮುಕ್ತಿ ರಂಜನ್‌ ರಾಯ್‌ ಎಂಬಾತ ಬುಧವಾರ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮಹಾಲಕ್ಷ್ಮಿ ಅವರ ದೇಹವನ್ನು 59 ತುಂಡುಗಳಾಗಿ ಕತ್ತರಿಸಿ ನಗರದ ವೈಯಾಲಿಕಾವಲ್‌ನಲ್ಲಿರುವ ಅವರ ನಿವಾಸದಲ್ಲಿ ರೆಫ್ರಿಜರೇಟರ್‌ನಲ್ಲಿ ತುಂಬಿಸಿ ಈತ ಪರಾರಿಯಾಗಿದ್ದ … Continued

ಬೆಂಗಳೂರು | ನಡು ರಸ್ತೆಯಲ್ಲಿ ಸ್ಟಂಟ್ ; ಬೇಸತ್ತು 2 ಸ್ಕೂಟರ್‌ಗಳನ್ನು ಫ್ಲೈಓವರ್‌ನಿಂದ ಕೆಳಕ್ಕೆ ಎಸೆದ ಜನ : ದೃಶ್ಯ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ರೀಲ್‌ಗಳನ್ನು ಮಾಡುವ ಭರಾಟೆ ದೇಶದ ಯುವಕರನ್ನು ಆವರಿಸಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಲು ಇನ್ಸ್ಟಾಗ್ರಾಂ (Instagram)ರೀಲ್‌ಗಳಿಗಾಗಿ ವೀಡಿಯೊಗಳನ್ನು ಚಿತ್ರೀಕರಿಸಲು ಯಾವುದೇ ಹಂತಕ್ಕೆ ಹೋಗಿ ಅಪಾಯ ತಂದುಕೊಂಡ ಅನೇಕ ಉದಾಹರಣೆಗಳಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಲೈಕ್‌ಗಳು ಮತ್ತು ಫಾಲೋವರ್ಸ್‌ಗಳಿಗಾಗಿ ತಮ್ಮ ಜೀವವನ್ನು ಅಪಾಯಕ್ಕೆ ಒಡ್ಡುತ್ತಾರೆ, ಅಲ್ಲದೆ ಇತರರ ಜೀವವನ್ನೂ ಅಪಾಯಕ್ಕೆ ಒಡ್ಡುತ್ತಾರೆ. ಇದೇ ಇಂಥಹದ್ದೇ ವಿದ್ಯಮಾನವೊಂದರಲ್ಲಿ … Continued

ದಿನದ ಕೆಲಸ ಅಂದೇ ಮುಗಿಸಲು ಒತ್ತಡ ಹಾಕಿದ್ದಕ್ಕೆ ಸಹೋದ್ಯೋಗಿಗಳಿಂದಲೇ ಆಡಿಟರ್ ಗೆ ಥಳಿಸಲು ಸುಪಾರಿ ; ಥಳಿತದ ವೀಡಿಯೊ ವೈರಲ್ ಬಳಿಕ ಐವರ ಬಂಧನ

ಬೆಂಗಳೂರು : ಖಾಸಗಿ ಸಂಸ್ಥೆಯೊಂದರಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಐವರಲ್ಲಿ ಇಬ್ಬರು ಆಡಿಟರ್ ಅವರ ಸಹೋದ್ಯೋಗಿಗಳಾಗಿದ್ದಾರೆ. ಈ ಇಬ್ಬರು ಆಡಿಟರ್ ಅವರನ್ನು ಥಳಿಸಲು ಗೂಂಡಾಗಳನ್ನು ನೇಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ದಿನದ ಕೆಲಸಗಳನ್ನು ಅಂದೇ ಮುಗಿಸಿ, … Continued

ಡೀಪ್‌ಫೇಕ್ ಎಫೆಕ್ಟ್ : ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇದಕ್ಕೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ. ಇಂತಹ ವೀಡಿಯೊಗಳಿಂದ ಯಾರೇ ಆದರೂ ತೊಂದರೆಗೆ ಸಿಲುಕಿದ್ದರೆ, ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ … Continued