ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ತಾಯಿಯೊಬ್ಬಳು ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ. ಮೃತ ಗಂಗಾದೇವಿ ಜಾಲಹಳ್ಳಿ ವಿಲೇಜ್‌ನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ಏ.8ರಂದು (ಮಂಗಳವಾರ) ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆಕೆ ತಾನೇ ಮರುದಿನ ಬುಧವಾರ ಬೆಳಗ್ಗೆ 112ಕ್ಕೆ ಫೋನ್ ಮಾಡಿ ತನ್ನ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ವಿಧಿವಶ

ಬೆಂಗಳೂರು: ನಾಡಿನ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ (67) ಅವರು ಶುಕ್ರವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್ ಕೆ ಜೈನ್ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ: ದಿನೇಶ ಗುಂಡೂರಾವ್

ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪತಂಜಲಿ … Continued

ಬೆಂಗಳೂರು : ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇದ್ದ ವಾಹನ ಏರಿ ಹಾರ ಹಾಕಿದ ವ್ಯಕ್ತಿ…!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಭೈರಸಂದ್ರದಲ್ಲಿ ಸೌಮ್ಯ ರೆಡ್ಡಿ ಅವರ ಪರ ಪ್ರಚಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಪ್ರಚಾರದ ವೇಳೆ ಗನ್ ಇಟ್ಟುಕೊಂಡು ಬಂದು ಕ್ಯಾಂಟರ್ ಏರಿದ … Continued

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಇಂದು, ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಪ್ರಕಾಶ (35) ಎಂದು ಗುರುತಿಸಲಾಗಿದೆ. ನಿಂತಿದ್ದ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ಸಚಿವ ದಿನೇಶ ಗುಂಡೂರಾವ್‌ ಪತ್ನಿ ದೂರು

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂಬ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಹೇಳಿಕೆ ವಿರುದ್ಧ ಈಗ ಸಚಿವ ದಿನೇಶ ಗುಂಡೂರಾವ್‌ ಅವರ ಪತ್ನಿ ಟಬು ಗುಂಡೂರಾವ್ ದೂರು ದಾಖಲಿಸಿದ್ದಾರೆ. ಯತ್ನಾಳರ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಸಂಜಯ ನಗರ ಪೊಲೀಸ್ ಠಾಣೆಗೆ … Continued

ಬೆಂಗಳೂರು ಐಐಎಸ್‌ಸಿ ಹಳೆಯ ವಿದ್ಯಾರ್ಥಿ ವಿಪ್ರೋ ಕಂಪನಿಗೆ ನೂತನ ಸಿಇಒ

ಬೆಂಗಳೂರು : ವಿಪ್ರೋ ಕಂಪನಿಗೆ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಶ್ರೀನಿವಾಸ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ. ಥಿಯೆರಿ ಡೆಲಾಪೋರ್ಟೆ ಅವರು ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶ್ರೀನಿವಾಸ ಪಲ್ಲಿಯಾ ಅವರು ಎಂಡಿ ಮತ್ತು ಸಿಇಒ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬೆಂಗಳೂರು ಮೂಲದ ಐಟಿ ದೈತ್ಯ ಹೇಳಿಕೆಯಲ್ಲಿ ತಿಳಿಸಿದ್ದು, ತಕ್ಷಣವೇ ಜಾರಿಗೆ ಬರಲಿದೆ. … Continued

ಚಿತ್ರದುರ್ಗ : ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸಾವು, ಹಲವರಿಗೆ ಗಾಯ

ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಅಪಘಾತವು ಮುಂಜಾನೆ 5 ಗಂಟೆ ಸುಮಾರಿಗೆ … Continued