ಕರ್ನಾಟಕ ಬಜೆಟ್‌ 2025 | ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಬಜೆಟ್‌ 2025ರಲ್ಲಿ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಮಹಾನಗರಕ್ಕೆ ಕಳೆದ ವರ್ಷಕ್ಕೆ ಹೆಚ್ಚಿನ ಅನುದಾನ ನೀಡಿದ್ದಕಿಂತ 7 ಸಾವಿರ ಕೋಟಿ ರೂ.ಗಷ್ಟು ಹೆಚ್ಚಿಗೆ ನೀಡಲಾಗಿದೆ. ಅಲ್ಲದೆ, ಟನಲ್‌ ಯೋಜನೆಗೆ 40,000 ಕೋಟಿ ರೂ. ಮೀಸಲಿಡಲಾಗಿದೆ. ಬಿಬಿಎಂಪಿಯ ಅಂದಾಜು ಮೊತ್ತ 40,000 ಕೋಟಿ ರೂಪಾಯಿ ವೆಚ್ಚದ ಉತ್ತರ- ದಕ್ಷಿಣ ಮತ್ತು … Continued

ಚಿನ್ನದ ಕಳ್ಳಸಾಗಣೆ ಆರೋಪ ; ಬಂಧನದ ನಂತರ ಹೊರಬಿದ್ದ ನಟಿ ರನ್ಯಾ ರಾವ್ ಮೊದಲ ಫೋಟೋ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದ್ದು, ಈಕೆ ಬಂಧನಕ್ಕೊಳಗಾದ ನಂತರದ ಫೋಟೋ ಹೊರಹೊಮ್ಮಿದೆ. ಸೋಮವಾರ ರಾತ್ರಿ ದುಬೈನಿಂದ ಆಗಮಿಸಿದ ಈಕೆ 12 ಕೋಟಿ ರೂ.ಮೌಲ್ಯದ 14.8 ಕೆಜಿ ಚಿನ್ನಾಭರಣದೊಂದಿಗೆ ಸಿಕ್ಕಿಬಿದ್ದಿದ್ದಾಳೆ. ರನ್ಯಾ ರಾವ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಆರ್ಥಿಕ ಅಪರಾಧಗಳ ನ್ಯಾಯಾಲಯ … Continued

ಬೆಂಗಳೂರು | ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ಯುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭರತನಾಟ್ಯ ಹಾಗೂ ಸಂಗೀತ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್ ನಲ್ಲಿ ಮದುವೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ ಅವರು ಗುರುವಾರ ಬೆಳಿಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. … Continued

ಮಗಳ ಕಳ್ಳ ಸಾಗಣೆ ದಂಧೆ ಬಗ್ಗೆ ಗೊತ್ತಿರಲಿಲ್ಲ, ಬಂಧನ ಆಘಾತ ತಂದಿದೆ : ನಟಿ ರನ್ಯಾ ಬಂಧನದ ಬಗ್ಗೆ ಡಿಜಿಪಿ ರಾಮಚಂದ್ರ ರಾವ್

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮಲಮಗಳಾದ ನಟಿ ರನ್ಯಾ ರಾವ್ ಅವರ ಬಂಧನವಾಗಿರುವುದು ತಮಗೆ ಆಘಾತ ತಂದಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರಾದ (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ. ಕೆ ರಾಮಚಂದ್ರ ರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಂದಾಯ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ | 15 ದಿನದಲ್ಲಿ ದುಬೈಗೆ 4 ಸಲ ಭೇಟಿ ; ಅದೇ ಬಟ್ಟೆ ಧರಿಸಿದ್ದ ನಟಿ ; ರನ್ಯಾ ರಾವ್ ಸಿಕ್ಕಿಬಿದ್ದಿದ್ದು ಹೇಗೆ…?

 ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 14.8 ಕೆಜಿ ಚಿನ್ನಾಭರಣವನ್ನು ಪತ್ತೆ ಮಾಡಿದ ನಂತರ ನಟಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಯ ಮಲ ಪುತ್ರಿ ರನ್ಯಾ ರಾವ್ ಅವಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಮಾಣದ ಚಿನ್ನಾಭರಣದ ಪ್ರಮುಖ ಕಳ್ಳಸಾಗಣೆ ದಂಧೆಯನ್ನು ಡಿಆರ್‌ಐ ಭೇದಿಸಿದ್ದಾರೆ. … Continued

ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued

ವೀಡಿಯೊ…| ಎರಡು ಬಿಎಂಟಿಸಿ ಬಸ್​ ಮಧ್ಯೆ ಸಿಲುಕಿ ಆಟೋ ಅಪ್ಪಚ್ಚಿ ; ಅಪಘಾತದಲ್ಲಿ ಇಬ್ಬರು ಸಾವು

ಬೆಂಗಳೂರು: ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಶುಕ್ರವಾರ ಎರಡು ಬಿಎಂಟಿಸಿ ಬಸ್ ಗಳ​ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಚಾಲಕ ವಿಜಯಕುಮಾರ (50) ಹಾಗೂ ಪ್ರಯಾಣಿಕ ವಿಷ್ಣು ಬಾಪಟ್‌(70) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುಂದೆ … Continued

ಇಡ್ಲಿ ಪ್ರಿಯರಿಗೆ ಶಾಕ್‌ ; ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

ಬೆಂಗಳೂರು: ಬೆಂಗಳೂರಿನ ಹಲವಾರು ಹೋಟೆಲ್‌ಗಳು, ದರ್ಶಿನಿಗಳು ಹಾಗೂ ಇತರೆಡೆಗಳಲ್ಲಿ ನೀಡಲಾಗುತ್ತಿರುವ ಇಡ್ಲಿಗಳಲ್ಲಿ ಕ್ಯಾನ್ಸರ್‌ ಕಾರಕ (cause cancer) ಅಂಶಗಳು ಪತ್ತೆಯಾಗಿವೆ ಎಂಬ ಅಂಶಗಳು ಬೆಳಕಿಗೆ ಬಂದಿದೆ. ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ (Carcinogenicity) ಪತ್ತೆಯಾಗಿದೆ ಎಂದು ಆಹಾರ ಇಲಾಖೆಯ ವರದಿ ಬಹಿರಂಗಪಡಿಸಿದೆ. ಇಡ್ಲಿಯನ್ನು ಬೇಯಿಸಲು ಬಳಸಲಾಗುವ ಸ್ಟೀಮರ್‌ಗಳಲ್ಲಿ ಪ್ಲಾಸ್ಟಿಕ್‌ ಅನ್ನು ಬಳಸಲಾಗುತ್ತಿದ್ದು, … Continued

ಡಿನೋಟಿಫಿಕೇಷನ್ ಪ್ರಕರಣ : ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌, ಎದುರಾಯ್ತು ಸಂಕಷ್ಟ

ನವದೆಹಲಿ: ನವದೆಹಲಿ: ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಬೆಂಗಳೂರಿನ ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ರದ್ದುಪಡಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿದೆ. ಇದರಿಂದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. 2018ರಲ್ಲಿ ತಿದ್ದುಪಡಿಯಾಗಿರುವ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ … Continued

ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು … Continued