ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್ ಬೆದರಿಕೆ….!

ಬೆಂಗಳೂರು :ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್‌ ಬೆದರಿಕೆ (Bomb Threat to Schools) ಹಾಕಲಾಗಿದೆ. ಈ ಮೇಲ್‌ ಮೂಲಕ ಈ ಬಾಂಬ್‌ ಬೆದರಿಕೆ ಬಂದಿದ್ದು, ಬೆಳಗ್ಗೆ ಮೇಲ್‌ ಚೆಕ್‌ ಮಾಡುವಾಗ ಇದು ಗೊತ್ತಾಗಿದೆ. ಪೊಲೀಸರು ಶಾಲೆಗಳಿಗೆ ದೌಡಾಯಿಸಿದ್ದು, ಬಾಂಬ್‌ ತಪಾಸಣೆ ದಳಗಳೂ ಆಗಮಿಸಿವೆ. ಶುಕ್ರವಾರ ಬೆಳಗ್ಗೆ ಬೆಂಗಳೂರಿನ 44 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ … Continued

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪೂಜಾ ಗಾಂಧಿ

ಬೆಂಗಳೂರು: ಕನ್ನಡ ಚಿತ್ರರಂಗದ ಮುಂಗಾರ ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಅವರು ಬುಧವಾರ ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯಂತೆ ತಮ್ಮ ಬಹುದಿನದ ಗೆಳೆಯ ವಿಜಯ ಘೋರ್ಪಡೆ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಯಲಹಂಕ ಸಮೀಪ ಇರುವ ಆರಂಭ ರೆಸ್ಟೋರೆಂಟ್‌ನಲ್ಲಿ ಪೂಜಾ- ವಿಜಯ ಅವರ ಮದುವೆ ನೆರವೇರಿದೆ. ಕಳೆದ 10 ವರ್ಷಗಳಿಂದ ವಿಜಯ್ … Continued

ನಾಳೆ ನಟಿ ಪೂಜಾ ಗಾಂಧಿ ಮದುವೆ

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನವೆಂಬರ್ 29ರಂದು ಬುಧವಾರ ಸಂಜೆ ತಾನು ಕುವೆಂಪು ಆಶಯದಂತೆ ಮಂತ್ರ ಮಾಂಗಲ್ಯದ ಮೂಲಕ ವಿಜಯ ಘೋರ್ಪಡೆ ಅವರ ಜೊತೆ ಮದುವೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನನ್ನ ಮದುವೆಗೆ ಕುಟುಂಬ ಸಮೇತರಾಗಿ … Continued

ವೀಡಿಯೊ…: “ಹೆಮ್ಮೆಯ ಭಾವನೆ” ; ಬೆಂಗಳೂರಲ್ಲಿ ತೇಜಸ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಶನಿವಾರ ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್‌ಗೆ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರು ಮೂಲದ ರಕ್ಷಣಾ ವಲಯದ ಸಾರ್ವಜನಿಕ ವಲಯದ ಕಂಪನಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ ಭೇಟಿ ನೀಡಿದರು ಮತ್ತು ಅದರ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು … Continued

ಇಂದು ಹುತಾತ್ಮ ಸೇನಾಧಿಕಾರಿ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ಅವಕಾಶ: 50 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಕ್ಯಾಪ್ಟನ್​ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿಯೇ ಬೆಂಗಳೂರು ತಲುಪಿದೆ. ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ಪಾರ್ಥಿವ ಶರೀರ ಆಗಮಿಸಿದೆ. ಆ ಬಳಿಕ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಅವರ ತಂದೆ-ತಾಯಿ ಮೊದಲಿಗೆ ಪುಷ್ಪಗುಚ್ಛ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು. ಆ ಬಳಿಕ ರಾಜ್ಯಪಾಲ ಥಾವರ್​ಚಂದ್ … Continued

ಆನೇಕಲ್: ನೀರಿನ ಸಂಪ್ ಸ್ವಚ್ಛತೆ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು : ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮೃತ ಕೂಲಿ ಕಾರ್ಮಿಕರನ್ನು ಬಿಹಾರ ಮೂಲದ ಚಂದನ್‌ ರಾಜವಂಶಿ (29) ಮತ್ತು ಪಿಂಟು ರಾಜವಂಶಿ (21) ಎಂದು ಗುರುತಿಸಲಾಗಿದೆ. ಇವರು ಬಿಹಾರ ಮೂಲದವರಾಗಿದ್ದು, … Continued

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು, ಒಮ್ಮತ ಮೂಡಿಸಲು ಕಸರತ್ತು : ಡಿಸೆಂಬರ್‌ನಲ್ಲಿ ನೇಮಕಾತಿ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಉಸ್ತುವಾರಿ … Continued

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವಿನ ಪ್ರಕರಣ : ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, … Continued

ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ಅಮಾನತು ಪ್ರಶ್ನಿಸಿ ಕೋರ್ಟಿಗೆ ಹೋಗ್ತೇನೆ: ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುತ್ತಾರೆಯೇ ಎಂಬುದು ಡಿಸೆಂಬರ್ 9 ರಂದು ಗೊತ್ತಾಗಲಿದೆ ಎಂದು … Continued

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು … Continued