ಬೆಂಗಳೂರು ಬಿಸಿನೆಸ್‌ ಕಾರಿಡಾರಿಗೆ ಸಂಪುಟ ಅಸ್ತು: ಸಂಚಾರ ದಟ್ಟಣೆ ಶೇ. 40 ರಷ್ಟು ಕಡಿತವಾಗುವ ನಿರೀಕ್ಷೆ

ಬೆಂಗಳೂರು: ಭಾರಿ ಸಂಚಾರ ದಟ್ಟಣೆಯಿಂದಲೇ ಕುಖ್ಯಾತಿ ಗಳಿಸಿರುವ ಬೆಂಗಳೂರು ನಗರದ ಸಂಚಾರ ಸಮಸ್ಯೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ 117 ಕಿಲೋಮೀಟರ್ ಉದ್ದದ ಪೆರಿಫೆರಲ್ ರಿಂಗ್ ರೋಡ್ (PRR) ಯೋಜನೆಗೆ ಹೊಸ ಸ್ವರೂಪ ನೀಡಿ, ಅದನ್ನು ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ಎಂದು ಮರುನಾಮಕರಣ ಮಾಡಿ ಸಚಿವ ಸಂಪುಟ … Continued

ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರ

ನವದೆಹಲಿ : ಕೇಂದ್ರ ಸರ್ಕಾರ ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ‌ ನಗರಿ ಹುಬ್ಬಳ್ಳಿ (Bengaluru-Hubballi) ಮಧ್ಯೆ ನಿತ್ಯ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರದ ಕೊಡುಗೆ ನೀಡಿದೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ … Continued

ಅರಿವಳಿಕೆ ಔಷಧಿ ನೀಡಿ ವೈದ್ಯೆ ಪತ್ನಿಯ ಕೊಲೆ ಆರೋಪ ; 6 ತಿಂಗಳ ಬಳಿಕ ವೈದ್ಯ ಪತಿಯ ಬಂಧನ

ಬೆಂಗಳೂರು: ಆರು ತಿಂಗಳ ಹಿಂದೆ ತಮ್ಮ ವೈದ್ಯೆ ನಿಗೂಢವಾಗಿ ಸಾವಿಗೀಡಾದ ಪ್ರಕರಣದ ರಹಸ್ಯ ಬಯಲಾಗಿದ್ದು, ಕೊಲೆ ಆರೋಪದ ಮೇಲೆ ಪೊಲೀಸರು ಆಕೆಯ ವೈದ್ಯ ಪತಿಯನ್ನು ಬಂಧಿಸಿದ್ದಾರೆ. ಪೂರ್ವ ಬೆಂಗಳೂರಿನ ಮುನ್ನೇಕೊಳಲು ಪ್ರದೇಶದಲ್ಲಿ ವಾಸವಾಗಿದ್ದ ಜನರಲ್‌ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ರೆಡ್ಡಿ ಅವರು, ಏಪ್ರಿಲ್ 21 ರಂದು ತಮ್ಮ ಮನೆಯಲ್ಲಿಯೇ ಪತ್ನಿ ಡಾ. ಕೃತಿಕಾ ರೆಡ್ಡಿ ಅವರಿಗೆ … Continued

ವೀಡಿಯೊ..| ಬೆಂಗಳೂರಲ್ಲಿ ಬಸ್ ಓಡಿಸುವಾಗಲೇ ಚಾಲಕನಿಗೆ ಮೂರ್ಛೆ ; 9 ವಾಹನಗಳಿಗೆ ಬಸ್‌ ಡಿಕ್ಕಿ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕನಿಗೆ ಚಾಲನೆ ಮಾಡುವಾಗ ತೀವ್ರವಾದ  ಮೂರ್ಛೆ ರೋಗ (seizure) ಕಾಣಿಸಿಕೊಂಡ ಪರಿಣಾಮವಾಗಿ, ನಿಯಂತ್ರಣ ಕಳೆದುಕೊಂಡ ಬಸ್ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಒಂಬತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ಅಪಘಾತವು ಶನಿವಾರ ಸಂಭವಿಸಿದ್ದು, ಈ ಘಟನೆಯಲ್ಲಿ ಮೂರು ಆಟೋರಿಕ್ಷಾಗಳು, … Continued

ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಜೋಶಿ

ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಜೋಶಿ ಹಾರೈಸಿದರು. … Continued

ಕನ್ನಡದ ಖ್ಯಾತ ನಟ ಉಮೇಶ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಪೋಷಕ ನಟರಾದ ಎಂ.ಎಸ್‌.ಉಮೇಶ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 80 ವರ್ಷ ವಯಸ್ಸಿನವರಾದ ಉಮೇಶ ಅವರು ಮನೆಯಲ್ಲಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವ ನಟ ಉಮೇಶ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ.‌ … Continued

ಆರ್‌ ಎಸ್‌ ಎಸ್ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಪ್ರೊ.ಕೃ. ನರಹರಿ ನಿಧನ

ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಪ್ರೊ. ಕೃ. ನರಹರಿ ಅವರು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇಂದು, ಬುಧವಾರ (ಅಕ್ಟೋಬರ್‌ 8) ಬೆಳಗ್ಗೆ 4.30ಕ್ಕೆ ಕೃ. ನರಹರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆರ್‌ಎಸ್‌ಎಸ್ ಪ್ರಮುಖರು ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ … Continued

ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೋಮವಾರ ತಡರಾತ್ರಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಆರೋಗ್ಯ … Continued

ಬೆಂಗಳೂರು : ಖ್ಯಾತ ಪತ್ರಕರ್ತ ಟಿಜೆಎಸ್ ಜಾರ್ಜ್ ನಿಧನ

ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಪತ್ರಕರ್ತ ಹಾಗೂ ಲೇಖಕ ಥಯ್ಯಲ್ ಜಾಕೋಬ್ ಸೋನಿ ಜಾರ್ಜ್(ಟಿಜೆಎಸ್‌ ಜಾರ್ಜ್‌) ಅವರು ಶುಕ್ರವಾರ (ಅಕ್ಟೋಬರ್ 3) ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟಿಜೆಎಸ್ ಜಾರ್ಜ್ 1928ರ ಮೇ 7ರಂದು ಕೇರಳದಲ್ಲಿ ಪತ್ತನಂತಿಟ್ಟ ಜಿಲ್ಲೆಯ ತುಂಬಮಣಿ ಎಂಬಲ್ಲಿ ಜನಿಸಿದ್ದರು. … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued