ಬೆಂಗಳೂರು : ಬಸ್ ನಿಲ್ದಾಣದಲ್ಲಿ ಮಗಳ ಮುಂದೆಯೇ ಪತ್ನಿಗೆ 11 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ…!

ಬೆಂಗಳೂರು: ಬಸ್ ನಿಲ್ದಾಣದಲ್ಲಿ 32 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ತನ್ನ ಹದಿಹರೆಯದ ಮಗಳ ಮುಂದೆಯೇ ಇರಿದು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಂಪತಿ ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದರು ಮತ್ತು ಇದು ಅವರಿಬ್ಬರಿಗೂ ಎರಡನೇ ವಿವಾಹವಾಗಿದೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಸುಂಕದಕಟ್ಟೆ … Continued

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ ; ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ 5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದಾನೆ ಹಾಗೂ ನಿಮ್ಮ … Continued

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಯೋಗ ಶಿಕ್ಷಕನ ಬಂಧನ

ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಶಿಕ್ಷಕನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳುದಬಂದಿದೆ. ಹದಿನೇಳು ವರ್ಷದ ಬಾಲಕಿ ದೂರಿನ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಯೋಗ ಶಿಕ್ಷಕ ನಿರಂಜನಾ ಮೂರ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿ ಯೋಗ ಶಿಕ್ಷಕ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ … Continued

ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶಕುಮಾರ ಇ.ಡಿ. ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಜಿ.ಟಿ ದಿನೇಶಕುಮಾರ ಅವರಿಗೆ ನೋಟಿಸ್ ನೀಡಿತ್ತು. ಮಂಗಳವಾರ ದಿನೇಶಕುಮಾರ … Continued

ಬೆಂಗಳೂರು : ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ, ಮೂವರು ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋನಕನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದ ವರದಿಯಾಗಿದೆ. ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವಿಗೀಡಾದ ಘಟನೆ ಹೊಸಕೋಟೆ (Hosakote) ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ಕುಂದಾಪುರ : ಗೋಪಾಡಿ ಬೀಚಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಮೂವರು ಯುವಕರು

ಉಡುಪಿ : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ 9 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, … Continued

ಜೈಲಿನೊಳಗೆ ಗ್ರಂಥಾಲಯ ಗುಮಾಸ್ತರಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆಲಸ ; ದಿನಕ್ಕೆ ಸಂಬಳ…

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಗ್ರಂಥಾಲಯ ಗುಮಾಸ್ತರಾಗಿ ಕೆಲಸ ಮಾಡಲು ನಿಯೋಜಿಸಲಾಗಿದೆ, ಅಲ್ಲಿ ಅವರು ದಿನಕ್ಕೆ 522 ರೂ. ಗಳಿಸುತ್ತಾರೆ. ಅವರ ಪ್ರಮುಖ ಜವಾಬ್ದಾರಿಗಳಲ್ಲಿ ಇತರ ಕೈದಿಗಳಿಗೆ ಪುಸ್ತಕಗಳನ್ನು ನೀಡುವುದು ಮತ್ತು … Continued

ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಶಶಿಕಾಂತ ಸೆಂಥಿಲ್‌ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡಿನ ತಿರುವಳ್ಳೂರು ಸಂಸದ ಶಶಿಕಾಂತ‌ ಸೆಂಥಿಲ್ ಅವರು ಹಿಂದು ವಿರೋಧಿಯಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಕೆಲವರಿಗೆ ಪ್ರಚೋದನೆ ನೀಡುತ್ತಿದ್ದಾರೆ” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ ಸೆಂಥಿಲ್ ಅವರು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ಮಾನನಷ್ಟ … Continued

ಅಕ್ರಮ ಚಿನ್ನ ಸಾಗಣೆ ಪ್ರಕರಣ : ನಟಿ ರನ್ಯಾ ರಾವ​ಗೆ 102.55 ಕೋಟಿ ರೂ. ದಂಡ

ಬೆಂಗಳೂರು : ಹೈ ಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಮತ್ತು ಇತರ ಮೂವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನೂರಾರು ಕೋಟಿ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಮಾರ್ಚ್ 3 ರಂದು, ಸಂಸ್ಥೆ 127.3 ಕೆಜಿ ಕಳ್ಳಸಾಗಣೆ ಚಿನ್ನವನ್ನು ವಶಪಡಿಸಿಕೊಂಡ ನಂತರ ರನ್ಯಾ ಅವರನ್ನು ಬಂಧಿಸಿದೆ. … Continued