ಬೆಂಗಳೂರು | ಅಟ್ಟಿಸಿಕೊಂಡು ಹೋಗಿ ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಭೀಕರ ಘಟನೆ ಬೆಂಗಳೂರು ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ವನಜಾಕ್ಷಿ (35 ) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ವಿಠ್ಠಲ (52) ಎಂದು ಹೇಳಲಾಗಿದೆ. ಈತ ಕ್ಯಾಬ್‌ ಚಾಲಕನಾಗಿದ್ದ. … Continued

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಅಲೋಕ ಮೋಹನ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ನೇಮಕ ಮಾಡಲಾಗಿದೆ. … Continued

ವೀಡಿಯೊ..| ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಜೀಪು ಬೆನ್ನಟ್ಟಿ ಬಾಲಕನಿಗೆ ಪರಚಿದ ಚಿರತೆ….!

ಬೆಂಗಳೂರು : ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶುಕ್ರವಾರ ಸಫಾರಿ ಮಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಲು ಯತ್ನಿಸಿದ್ದು, 13 ವರ್ಷದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಬೊಮ್ಮಸಂದ್ರ ನಿವಾಸಿ 13 ವರ್ಷದ ಸುಹಾಸ ಎಂಬ ಬಾಲಕ ಮಧ್ಯಾಹ್ನ ತನ್ನ ತಂದೆ-ತಾಯಿ … Continued

ನನ್ನ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ…’: ಮಾಜಿ ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್. ರಾಜಣ್ಣ ಅವರು, ತಮನ್ನು ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ. ಮತ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ನಂತರ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ತಲೆ ದಂಡವಾಗಿದ್ದು, … Continued

ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌; ಪತ್ರದಲ್ಲೇನಿದೆ ಗೊತ್ತೆ..?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ ರೈಲುಗಳಿಗೆ ಇಂದು, (ಆಗಸ್ಟ್‌ 10) ಚಾಲನೆ ನೀಡಿದ್ದಾರೆ. ಬೆಂಗಳೂರಿಗೆ ಮೋದಿ ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದು, ಇದು ವೈರಲ್‌ ಆಗಿದೆ. ಬೆಂಗಳೂರಿನ ರಸ್ತೆಗಳ … Continued

ವೀಡಿಯೊ | ವಿಶ್ವ ಸಂಸ್ಕೃತ ದಿನ 2025 : ಸಂಸ್ಕೃತದಲ್ಲೇ ಶುಭಾಶಯ ಕೋರಿ ಗಮನ ಸೆಳೆದ ಮಾಜಿ ಕ್ರಿಕೆಟರ್‌ ಅನಿಲ ಕುಂಬ್ಳೆ ದಂಪತಿ

ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಲೆಜೆಂಡರಿ ಲೆಗ್-ಸ್ಪಿನ್ನರ್ ಅನಿಲ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ಕುಂಬ್ಳೆ ಅವರೊಂದಿಗೆ, ವಿಶ್ವ ಸಂಸ್ಕೃತ ದಿನದ ಅಂಗವಾಗಿ ಎಲ್ಲರಿಗೂ ಸಂಸ್ಕೃತದಲ್ಲಿಯೇ ವಿಶೇಷ ವೀಡಿಯೊ ಸಂದೇಶ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವರ್ಷ ಆಗಸ್ಟ್ 9 ರಂದು ಆಚರಿಸಲಾಗುವ ವಿಶ್ವ ಸಂಸ್ಕೃತ ದಿನವು … Continued

ಮತಗಳ್ಳತನ ಆರೋಪ | ಘೋಷಣಾ ಪತ್ರದೊಂದಿಗೆ ದಾಖಲೆ ಸಲ್ಲಿಸಿ; ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು : ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ “ಭಾರಿ ವಂಚನೆ” ನಡೆದಿದೆ ಎಂದು ಆರೋಪಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಂಕಿ-ಅಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎಂದು ಆರೋಪಿಸಿದ ನಂತರ, ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಯು ಇದನ್ನು ಘೋಷಣಾ ಪತ್ರದ ಮೂಲಕ ವಿವರಗಳನ್ನು ನೀಡುವಂತೆ ಹೇಳಿದ್ದಾರೆ. “ಗುರುವಾರ … Continued

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ; 40ಕ್ಕೂ ಹೆಚ್ಚು ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಟಿ ರಮ್ಯಾ (Actress Ramya) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು 40ಕ್ಕೂ ಹೆಚ್ಚು ಜನರ ಐಪಿ ಅಡ್ರೆಸ್‌ಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ನಾಲ್ವರನ್ನು ಬಂಧಿಸಿದ್ದಾರೆ. ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು … Continued

ಆಗಸ್ಟ್ 10ರಂದು ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ … Continued

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ಮುಷ್ಕರ ಮುಂದೂಡಿಕೆ; ರಸ್ತೆಗೆ ಇಳಿದ ಬಸ್‌ ಗಳು

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ಸಾರಿಗೆ ನಿಗಮಗಳ ನೌಕರರ ಸಂಘಗಳ ಒಕ್ಕೂಟವು ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿದೆ. ಇಂದಿನಿಂದ (ಆಗಸ್ಟ್‌ ೫ರಿಂದ) ಕರೆಕೊಟ್ಟಿದ್ದ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ. ತಕ್ಷಣದಿಂದ ಬಸ್‌ಗಳ ಸಂಚಾರ ಆರಂಭಿಸಲು ಸಂಘಟನೆಗಳ ಮುಖಂಡರು ಸೂಚನೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ … Continued