ಹೈಟೆಕ್ ಹನಿಟ್ರ್ಯಾಪ್ ಪ್ರಕರಣ: ಮುಂಬೈ ಮಾಡೆಲ್ ಬಿಕಿನಿ ಸುಂದರಿಯ ಬಂಧನ

ಬೆಂಗಳೂರು : ಹನಿಟ್ರ್ಯಾಪ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಸುಲಿಗೆ ಮಾಡುತ್ತಿದ್ದ ಮುಂಬೈ ಮೂಲದ ಮಾಡೆಲ್​ ಒಬ್ಬಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನೇಹಾ ಅಲಿಯಾಸ್​ ಮೆಹರ್ ಎಂದು ಗುರುತಿಸಲಾಗಿದೆ. ಈಕೆಯನ್ನು ಮುಂಬೈನಲ್ಲಿ ಬಂಧಿಸಿರುವ ಪುಟ್ಟೇನಹಳ್ಳಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ … Continued

ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಮಾತನಾಡುವಾಗ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ’ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶಕುಮಾರ ಉಪೇಂದ್ರ ವಿರುದ್ಧ … Continued

ಗಂಡನ ಸಾವಿನ ದಿನವೇ ಮಗನೊಂದಿಗೆ ಕೆರೆಗೆ ಹಾರಿದ ತಾಯಿ

ಆನೇಕಲ್: ಗಂಡ ತೀರಿಕೊಂಡ ಎರಡು ವರ್ಷಗಳ ಬಳಿಕ ಅದೇ ದಿನವೇ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಕೆರೆಗೆ ಬಳಿ ತಾಯಿ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ … Continued

ನಟ ಉಪೇಂದ್ರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಟ, ರಿಯಲ್​ ಸ್ಟಾರ್​ ಉಪೇಂದ್ರ ವಿರುದ್ಧ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತಿ ನಿಂದನೆ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ನಟ ಉಪೇಂದ್ರ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಯೊಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಇದೀಗ ನಿರ್ದಿಷ್ಟ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ … Continued

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ; ಮುಖ್ಯ ಇಂಜಿನಿಯರ್ ಸೇರಿ 9 ಜನರಿಗೆ ಗಾಯ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 9ಕ್ಕೂ ಹೆಚ್ಚು ನೌಕರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ದಳದ … Continued

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಆಗಿರಬೇಕು : ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈ 26ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ … Continued

ಇಂದು ಸ್ಪಂದನಾ ಅಂತ್ಯಕ್ರಿಯೆ : ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು : ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಬುಧವಾರ ಅಪರಾಹ್ನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ. ಮಂಗಳವಾರ ಮಧ್ಯರಾತ್ರಿ ಸ್ಪಂದನಾ ಅವರ ಪಾರ್ಥಿವ ಶರೀರ ಥೈಲ್ಯಾಂಡ್‌ನಿಂದ ಆಗಮಿಸಿದ್ದು, ಇಂದು ಬೆಳಿಗ್ಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ ಮನೆಯಲ್ಲಿ ಅಂತಿಮ ದರ್ಶನಕ್ಕೆ … Continued

ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಉಲ್ಲಂಘಿಸಿದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಅನುಮತಿಯಿಲ್ಲದೆ ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಫ್ಲೆಕ್ಸ್ ಯಾರದೇ ಆಗಿರಲಿ ಅದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಗಳನ್ನು … Continued

ಇಂದು ಬೆಂಗಳೂರಿಗೆ ಸ್ಪಂದನಾ ಮೃತದೇಹ ಆಗಮನ : ಬುಧವಾರ ಅಂತ್ಯಕ್ರಿಯೆ

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ … Continued

ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ; ಆಸ್ಪತ್ರೆಗೆ ದಾಖಲು

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರು ಭಾನುವಾರ (ಆಗಸ್ಟ್ 6) ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು ತಕ್ಷಣವೇ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾರಿ ಬಿದ್ದಿರುವ ತಿಮ್ಮಕ್ಕ ಅವರಿಗೆ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾಲುಮರದ ತಿಮ್ಮಕ್ಕ ಅವರಿಗೆ 112 ವರ್ಷವಾಗಿದೆ. ಅವರ ಬೆನ್ನಿನ ಭಾಗಕ್ಕೆ … Continued